ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಡೆದಿರುವ 138 ಪೌರ ಕಾರ್ಮಿಕರ ಹೊರಗುತ್ತಿಗೆ ನೇಮಕಾತಿ ಗೋಲ್ ಮಾಲ್ ಇಂದು ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಸದ್ದು ಮಾಡಿತು. ಪಾಲಿಕೆ ಸಭೆಯಲ್ಲಿ ನಗರ ಸೇವಕ ರವಿ ಸಾಳುಂಕೆ ಅವರು 138 ಪೌರಕಾರ್ಮಿಕರ ನೇಮಕಾತಿ ಪ್ರಶ್ನಿಸಿ ಮಂಡಿಸಿದ ಗಮನಸೆಳೆಯುವ ಸೂಚನೆಯ ಮೇರೆಗೆ ಸಭೆಯಲ್ಲಿ ಈ ಕುರಿತು ಗಂಭೀರ ಚರ್ಚೆ ನಡೆಯಿತು. 138 ಪೌರ ಕಾರ್ಮಿಕರು ಗುತ್ತಿಗೆದಾರರ ಹತ್ತಿರ ಸ್ವಚ್ಛತಾ ಕಾಮಗಾರಿ ನಡೆಸಿದ್ದಾರೆ. ಇವರ ನೇಮಕಾತಿ …
Read More »ತೂಕ ವಂಚನೆ ಕಂಡುಬಂದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ.
ಬೆಳಗಾವಿ, – ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮು ನವೆಂಬರ್ 1 ರ ಬಳಿಕವೇ ಆರಂಭಿಸಬೇಕು; ಕಾರ್ಖಾನೆವಾರು ನ್ಯಾಯ ಮತ್ತು ಲಾಭದಾಯಕ (ಎಫ್.ಆರ್.ಪಿ.) ದರಗಳನ್ನು ಆಯಾ ಕಾರ್ಖಾನೆಯ ನೋಟಿಸ್ ಬೋರ್ಡಿಗೆ ಕಡ್ಡಾಯವಾಗಿ ಅಳವಡಿಸಬೇಕು ಮತ್ತು ತೂಕದಲ್ಲಿ ಮೋಸ ಕಂಡುಬಂದರೆ ಕಾರ್ಖಾನೆಯ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. 2023-24 ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಪ್ರಾರಂಭಿಸುವ ಕುರಿತು …
Read More »ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ..
ಬೆಳಗಾವಿ-ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗ ಮತ್ತು ಬಿಜೆಪಿ ನಾಯಕರುಗಳು ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರನ್ನು ಅವಹೇಳನ ಮಾಡುವ ರೀತಿಯಲ್ಲಿ ರಾವಣನಿಗೆ ಹೋಲಿಕೆ ಮಾಡಿ ಪೋಸ್ಟರ್ ಬಿಡುಗಡೆ ಮಾಡಿರುವದನ್ನು ಖಂಡಿಸಿ ಇಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಎಐಸಿಸಿ ಹಾಗೂ ಕೆಪಿಸಿಸಿ ಸೂಚನೆ ಮೇರೆಗೆ *ಬಿಜೆಪಿಯವರ ಈ ನಡೆಯನ್ನು ಖಂಡಿಸಿ ಇಂದು ಶನಿವಾರ ಮದ್ಯಾಹ್ನ 12-00 ಗಂಟೆಗೆ ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ …
Read More »ಕೇಂದ್ರ ತಂಡದ ಎದುರು ವಿಷದ ಬಾಟಲ ಹಿಡಿದು ಬಂದ ರೈತ…
ಬೆಳಗಾವಿ- ಕೇಂದ್ರದಿಂದ ಬೆಳಗಾವಿ ಜಿಲ್ಲೆಗೆ ಬರ ಅಧ್ಯಯನಕ್ಕೆ ಬಂದ ಅಧಿಕಾರಿಯಳ ಮುಂದೆ ವಿಷದ ಬಾಟಲ ಹಿಡಿದು ಬಂದ ರೈತ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರೈತ ಅಪ್ಪಾಸಾಹೇಬ್ ಲಕ್ಕುಂಡಿ ಎಂಬಾತ ಅಧಿಕಾರಿಗಳ ಎದುರು ವಿಷದ ಬಾಟಲ್ ಪ್ರದರ್ಶನ ಮಾಡಿ,ಅಧಿಕಾರಿಗಳ ಸಮ್ಮುಖದಲ್ಲಿಯೇ ವಿಷ ಸೇವನೆಗೆ ಮುಂದಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಕುಲಕುಪ್ಪಿ ಬಳಿ ಗದ್ದೆಗೆ ಬಿಷದ ಬಾಟಲ್ ಹಿಡಿದು ಬಂದ ರೈತ, ೪೦ ಎಕರೆ ಪ್ರದೇಶದಲ್ಲಿ ಬೆಳೆ ಬೆಳದು ಬೆಳೆ …
Read More »ಇಂದಿರಾ ಕ್ಯಾಂಟೀನ್ ನಲ್ಲಿ ಸಚಿವರ ಊಟ..
ಬೆಳಗಾವಿ-ನಗರಾಭಿವೃದ್ಧಿ ಸಚಿವರಾದ ಬಿ.ಎಸ್.ಸುರೇಶ್ ಹಾಗೂ ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರು ಇಂದು ಶುಕ್ರವಾರ(ಅ.6) ಬೆಳಿಗ್ಗೆ 11 ಗಂಟೆಗೆ ಬೆಳಗಾವಿ ನಗರದ ಕಿತ್ತೂರು ಚೆನ್ನಮ್ಮ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಜಿಪಂ ಹಳೆಯ ಕಚೇರಿ ಬಳಿಯ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 1.30 ರ ಸುಮಾರಿಗೆ ನಗರದ ಸಿವಿಲ್ ಆಸ್ಪತ್ರೆ ಆವರಣದಲ್ಲಿ ಇರುವ ಇಂದಿರಾ ಕ್ಯಾಂಟೀನ್ ನಲ್ಲಿ ಸಚಿವರು ಊಟ ಮಾಡಲಿದ್ದಾರೆ ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
Read More »ಮನೆ,ಮನೆಗೆ ಬಿಪಿ ಶುಗರ್ ಮಾತ್ರೆ ಫ್ರೀ….!!
ಬೆಳಗಾವಿ- ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನದ ಬೆನ್ನಲ್ಲಿಯೇ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಮತ್ತೊಂದು ಜನಪ್ರೀಯ ಯೋಜನೆ ಜಾರಿಗೆ ತರಲು ಹೊರಟಿದೆ, ಗೃಹ ಆರೋಗ್ಯ ಯೋಜನೆಯ ಹೆಸರಿನಲ್ಲಿ ಮನೆ,ಮನೆಗೆ ತೆರಳಿ ಎಲ್ಲರ ಆರೋಗ್ಯ ತಪಾಸಣೆ ಮಾಡಿ,ಬಿಪಿ ಶುಗರ್ ಮಾತ್ರೆಗಳು ಸೇರಿದಂತೆ ಇತರ ಮಾತ್ರೆಗಳನ್ನು ಉಚಿತವಾಗಿ ಮನೆ,ಮನೆಗೆ ಹಂಚುವ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬೆಳಗಾವಿಯಲ್ಲಿ ಘೋಷಣೆ ಮಾಡಿದ್ದಾರೆ. ಪ್ರತಿ ತಿಂಗಳು ಬಿಪಿ ಶುಗರ್ ಮಾತ್ರೆ …
Read More »ನಕಲಿ ಕಾರ್ಮಿಕ ಕಾರ್ಡ್ ರದ್ದತಿಗೆ ಸಚಿವ ಸಂತೋಷ್ ಲಾಡ್ ಸೂಚನೆ.
ಬೆಳಗಾವಿ, – ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರು ನಕಲಿ ದಾಖಲಾತಿ ಸೃಷ್ಟಿಸಿ ಕಾರ್ಮಿಕ ಕಾರ್ಡ್ ಗಳನ್ನು ಪಡೆದು ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನಸಹಾಯಗಳನ್ನು ಪಡೆಯುತ್ತಿರುವದು ಗಮನಕ್ಕೆ ಬಂದಿದ್ದು, ಅಂತಹವರ ನೋಂದಣಿಯನ್ನು ಫ್ರೀಜ್/ರದ್ದುಗೊಳಿಸಬೇಕು. ಮಂಡಳಿಯ ಯಾವುದೇ ಸೌಲಭ್ಯಗಳನ್ನು ನೀಡದಂತೆ ತಡೆಹಿಡಿಯಬೇಕು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಅ.04) ನಡೆದ ಕಾರ್ಮಿಕ ಇಲಾಖೆಯ ಪ್ರಾದೇಶಿಕ ಮಟ್ಟದ ಇಲಾಖೆ …
Read More »ಇಂದು ಬೆಳಗಾವಿಯಲ್ಲಿ ಸಚಿವರಾದ ಸಂತೋಷ್ ಲಾಡ್ ಮತ್ತು ದಿನೇಶ್ ಗುಂಡೂರಾವ್…
ದಿನೇಶ್ ಗುಂಡೂರಾವ್.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಇಂದು ಬುಧವಾರ ಬೆಳಗಾವಿಗೆ ಆಗಮಿಸಿದ್ದು ಸುವರ್ಣ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದಾ ಸಂತೋಷ ಎಸ್. ಲಾಡ್ ಅವರು ಬುಧವಾರ (ಅ.4) ಬೆಳಗ್ಗೆ 9:30 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಶಾಸಕರು, …
Read More »ಗ್ಯಾಂಗ್ ರೇಪ್ ಮಾಡಿದ ಆರೋಪಿಗಳು ಅರೆಸ್ಟ್…
ಬೆಳಗಾವಿ-ಗೋಕಾಕ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಮಾಡಿದ ಘಟನೆಸೆ.5ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದ್ದ ಘಟನೆ.ಶಿಕ್ಷಕ ದಿನಾಚರಣೆಯಂದು ಹಳ್ಳಿಯಿಂದ ನಗರಕ್ಕೆ ಬಂದಿದ್ದ ಮಹಿಳೆ.ಈ ವೇಳೆ ಪರಿಚಯಸ್ಥ ವ್ಯಕ್ತಿಯ ಜತೆಗೆ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯನ್ನು ಆರೋಪಿ ಬಸವರಾಜ ಖಿಲಾರಿ ಟೀ ಕುಡಿಯಲು ಬನ್ನಿ ಅಂತಾ ಇಬ್ಬರನ್ನೂ ಮನೆಗೆ ಕರೆದುಕೊಂಡು ಹೋಗಿದ್ದ.ಪುಸಲಾಯಿಸಿ ಆದಿತ್ಯ ನಗರದಲ್ಲಿದ್ದ ಮನೆಗೆ ಕರೆದುಕೊಂಡು ಹೋಗಿ ಕೂಡಿ ಹಾಕಿದ್ದ ಬಸವರಾಜ.ಬಳಿಕ …
Read More »ಚಿರತೆ ದಾಳಿಗೆ ಎರಡು ಮೇಕೆಗಳು ಬಲಿ….
ಅಥಣಿ-ಸಂಕೋನಟ್ಟಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಮೇಕೆಗಳು ಬಲಿಯಾದ ಘಟನೆ,ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನಡೆದಿದೆ.ಪ್ರದೀಪ್ ನಾಯಿಕ್ ಎಂಬುವರ ತೋಟದಲ್ಲಿದ್ದ ಎರಡು ಮೇಕೆಗಳು ಚಿರತೆ ದಾಳಿಗೆ ಬಲಿಯಾಗಿವೆ. ಚಿರತೆ ದಾಳಿಯಿಂದ ಎರಡು ಮೇಕೆ ಮೃತಪಟ್ಟಿದ್ದಾಗಿ ಸ್ಥಳೀಯರ ಮಾಹಿತಿ ನೀಡಿದ್ದು,ಸಂಕೋನಟ್ಟಿ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ ಘಟನಾ ಸ್ಥಳಕ್ಕೆ ಅರಣ್ಯಸಿಬ್ಬಂದಿ ದೌಡಾಯಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಪಕ್ಕದ ರಡ್ಡೇರಟ್ಟಿ ಗ್ರಾಮದಲ್ಲಿ ಇದೇ ಮಾದರಿಯಲ್ಲಿ ಸಾಕು ನಾಯಿ ಬಲಿಯಾಗಿತ್ತು.ಈ …
Read More »