ಪರಿಷತ್ ಚುನಾವಣೆ: ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಬೆಳಗಾವಿ, .ಇದೇ ಡಿಸೆಂಬರ್ 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿಯನ್ನು ನೀಡಲಾಯಿತು. ನಗರದ ಜ್ಯೋತಿ ಕಾಲೇಜಿನಲ್ಲಿ ಭಾನುವಾರ (ಡಿ.5) ಬೆಳಗಾವಿ ತಾಲ್ಲೂಕಿನ ಮತಗಟ್ಟೆಗಳ ಅಧಿಕಾರಿಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತರಬೇತುದಾರರಾದ ನಾಗರಾಜ ಮರೆಣ್ಣವರ ಅವರು, ಮತದಾನದ ಮುನ್ನಾ ದಿನವಾದ ಡಿ.9 ರ ಬೆಳಿಗ್ಗೆ 10 ಗಂಟೆಯಿಂದ ಮತದಾನ ದಿನವಾದ ಡಿ.10 ರ ಸಂಜೆ …
Read More »ಪರಿಷತ್ತ ಚುನಾವಣೆಯಲ್ಲಿ ವೋಟ್ ಮಾಡುವದು ಹೇಗೆ ಇಲ್ಲಿದೆ ರೂಲ್ಸ್…!!!
ಬೆಳಗಾವಿ,- ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಮತಗಟ್ಟೆ ಏಜೆಂಟರುಗಳು ಚುನಾವಣಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಗೊಂದಲವಾಗದಂತೆ ನಿಯಮಾನುಸಾರ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್. ವೆಂಕಟೇಶ್ ಕುಮಾರ್ ಅವರು ತಿಳಿಸಿದರು. ಚುನಾವಣಾ ಮಾರ್ಗಸೂಚಿಗಳ ಕುರಿತು ನಡೆದ ಸಭೆಯಲ್ಲಿ ಶನಿವಾರ (ಡಿ.4) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅವರು ಮಾತನಾಡಿದರು. ಚುನಾವಣೆಯ ಸಂದರ್ಭದಲ್ಲಿ ಏಜೆಂಟ್ ಗಳು ಯಾವುದೇ ಗೊಂದಲ ಸೃಷ್ಟಿಸಿಕೊಳ್ಳಬಾರದು ಚುನಾವಣೆಯ ಮಾರ್ಗಸೂಚಿಗಳ ಮಾಹಿತಿ ಪಡೆದು ನಿಯಮಾನುಸಾರ ಕಾರ್ಯ ನಿರ್ವಹಿಸಬೇಕು ಎಂದು …
Read More »ಸವದತ್ತಿ ಯಲ್ಲಮ್ಮ ಹುಂಡಿಯಲ್ಲಿ ನೋಟಿನ ರಾಶಿ…..!!!
ಬೆಳಗಾವಿ-ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಭಕ್ತರ ಮಹಾಪೂರವೇ ಹರಿದು ಬರುತ್ತಿದೆ.ಕೇವಲ ಒಂದೇ ತಿಂಗಳಲ್ಲಿ ದೇವಸ್ಥಾನದ ಹುಂಡಿಯಲ್ಲಿ ನೋಟಿನ ರಾಶಿಯೇ ಸಂಗ್ರಹವಾಗಿದೆ. ಅಕ್ಟೋಬರ್ ಒಂದೇ ತಿಂಗಳಲ್ಲಿ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ 1.20ಕೋಟಿ ಸಂಗ್ರಹವಾಗಿದ್ದು,ಒಂದೂವರೆ ವರ್ಷದ ಬಳಿಕ ಓಪನ್ ಆಗಿದ್ದ ದೇವಸ್ಥಾನದಲ್ಲಿ ದಾಖಲೆ ಮೊತ್ತದ ದೇಣಿಗೆ ಸಂಗ್ರಹವಾಗಿದೆ. ಅಕ್ಟೋಬರ್ ತಿಂಗಳಲ್ಲಿ 15 ಲಕ್ಷ ಮೌಲ್ಯದ ಚಿನ್ನ, 2 ಲಕ್ಷ ಮೌಲ್ಯದ ಬೆಳ್ಳಿ ಕಾಣಿಕೆ ಬಂದಿದೆ.ಈ ಹಿಂದೆ ವರ್ಷಕ್ಕೆ ಸರಾಸರಿ 4 …
Read More »ರಮೇಶ್ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅಗತ್ಯವಿಲ್ಲ- ಸತೀಶ್
ಬೆಳಗಾವಿ : ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿಯೇ ಬಂಡಾಯವಾಗಿ ಸ್ಪರ್ಧೆ ಮಾಡಿದ್ದಾರೆ. ಮೊದಲು ತಮ್ಮ ಪಕ್ಷದ ಬಗ್ಗೆ ವಿಚಾರ ಮಾಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಇರುವಂತ ಮತಗಳಲ್ಲಿ ಎರಡು ಸ್ಥಾನ ಗೆಲ್ಲಲ್ಲಿಕ್ಕೆ ಸಾಧ್ಯವಿಲ್ಲ. ಅವರ ಪಕ್ಷದಲ್ಲಿಯೇ ಗೊಂದಲವಿದೆ. ರಮೇಶ್ ಜಾರಕಿಹೊಳಿ ಒಂದು ಲಖನ್ ಜಾರಕಿಹೊಳಿ ಅಥವಾ …
Read More »ಬೆಳಗಾವಿಯಲ್ಲಿ ಯುವಕನ ಮರ್ಡರ್….
ಬೆಳಗಾವಿ- ಸರಾಯಿ ಕುಡಿದು ಇಬ್ಬರು ಗೆಳೆಯರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಂದು ರಾತ್ರಿ ಬೆಳಗಾವಿ ನಗರದ ಹಳೇಯ ಬೆಳಗಾವಿ ನಾಕಾ ಬಳಿ ಇದ್ದ ವೈನ್ ಶಾಪ್ ಗೆ ಗೆಳೆಯರು ಸರಾಯಿ ಕುಡಿಯಲು ಹೋಗಿದ್ದರು ಈ ಸಂಧರ್ಭದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಇಬ್ಬರು ಪರಸ್ಪರ ಹೊಡೆದಾಡಿದ್ದಾರೆ,ಈ ಹೊಡೆದಾಟದಲ್ಲಿ ಸೂರಜ ಗೌಂಡವಾಡಕರ ಅವನ ತೆಲೆಗೆ ಗಾಯವಾಗಿ ಆತ ಅಸ್ವಸ್ಥನಾಗಿದ್ದಾನೆ. ಕೂಡಲೇ ಆತನನ್ನು ಯಳ್ಳೂರ …
Read More »ದೆಹಲಿಗೆ ತೆರಳಿ ನಳೀನಕುಮಾರ್ ಅವರನ್ನು ಭೇಟಿಯಾದ ಸಾಹುಕಾರ್…!!
ನಳೀನ ಕುಮಾರ್ ಕಟೀಲ ಅವರನ್ನು ಭೇಟಿಯಾದ ವಿವೇಕರಾವ್ ಪಾಟೀಲ.. ಬೆಳಗಾವಿ-ಮಾಜಿ ವಿಧಾನ ಪರಿಷತ್ತಿನ ಸದಸ್ಯ ವಿವೇಕರಾವ್ ಪಾಟೀಲ ಅವರು ಇಂದು ನವದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ ಅವರನ್ನು ಭೇಟಿಯಾದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ,ವಿವೇಕರಾವ್ ಪಾಟೀಲ,ಹಾಗೂ ಅಶೋಕ ಅಸೂದೆ ಅವರು ಇಂದು ಸಂಜೆ ನಳೀನ್ ಕುಮಾರ್ ಕಟೀಲ ಅವರನ್ನು ಭೇಟಿಯಾಗಿ,ವಿವೇಕರಾವ್ ಪಾಟೀಲ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಸಿದರು. ವಿವೇಕರಾವ್ ಪಾಟೀಲ ಅವರು …
Read More »ಓಮ್ರಿಕಾನ್ ಆತಂಕ, ಬೆಳಗಾವಿಯಲ್ಲಿ ಹೈ-ಅಲರ್ಟ್….!!!
ಬೆಳಗಾವಿ- ರಾಜ್ಯದಲ್ಲಿ ಓಮ್ರಿಕಾನ್ ತಳಿಯ ಕೋವೀಡ್ ಸೊಂಕಿನ ಬಗ್ಗೆ ಆತಂಕ ಎದುರಾಗಿದ್ದು ಬೆಳಗಾವಿ ಗಡಿಯಲ್ಲಿ ಹೈ- ಅಲರ್ಟ್ ಘೋಷಿಸಲಾಗಿದ್ದು ಮಹಾರಾಷ್ಟ್ರದಿಂದ ರಾಜ್ಯದ ಗಡಿ ಪ್ರವೇಶ ಮಾಡುವ ಪ್ರತಿಯೊಬ್ಬರನ್ನೂ ತಪಾಸಣೆ ಮಾಡಲಾಗುತ್ತಿದೆ. ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ವಿನ ನಿಗಾ ಇಡಲಾಗಿದೆ. ಬೆಳಗಾವಿ- ಮಹಾರಾಷ್ಟ್ರ ರಾಜ್ಯಗಳನ್ನು ಸಂಪರ್ಕಿಸುವ ಬಾಚಿ ಚೆಕ್ ಪೋಸ್ಟ್ ನಲ್ಲಿ ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಬೆಳಗಾವಿ ಬಾಚಿ ಚೆಕ್ ಪೋಸ್ಟ್ ನಲ್ಲಿ ಪ್ರತಿಯೊಂದು ವಾಹನಗಳನ್ನು ತಡೆದು ತಪಾಸಣೆ …
Read More »ನಾಳೆ ಬೆಳಗಾವಿಗೆ ಡಿ.ಕೆ ಶಿವಕುಮಾರ್…
ಬೆಳಗಾವಿ- ವಿಧಾನ ಪರಿಷತ್ತಿನ ಚುನಾವಣೆಯ ಪ್ರಚಾರಾರ್ಥ ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ನಾಳೆ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ನಾಳೆ ಭಾನುವಾರ ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸುವ ಅವರು,ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿದ್ದು ಸೋಮವಾರ ದಿನಾಂಕ 29 ರಂದು ಬೆಳಗಾವಿಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರ ಸಭೆ ನಡೆಸಿ ವಿಧಾನ ಪರಿಷತ್ತಿನ ಚುನಾವಣೆಯ ಕುರಿತು ಚರ್ಚಿಸಲಿದ್ದಾರೆ. ಉಸ್ತುವಾರಿಗಳ ನೇಮಕ ವಿಧಾನ ಪರಿಷತ್ತಿನ ಚುನಾವಣೆಯ ಹಿನ್ನಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿಗೆ ಇಬ್ಬರು ವೀಕ್ಷಕರನ್ನು ಕೆಪಿಸಿಸಿ …
Read More »ಬೇಗ,ಬೇಗ ಬೆಳಗಾವಿ ಅಧಿವೇಶನದ ಸಿದ್ಧತೆ ಮಾಡಿಕೊಳ್ಳಿ ಎಂದು ಹೇಳಿದ್ರು..
ಬೆಳಗಾವಿ, -ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವಸತಿ, ಊಟೋಪಹಾರ ಹಾಗೂ ಸಾರಿಗೆ ಮತ್ತಿತರ ವ್ಯವಸ್ಥೆಯನ್ನು ನಿಗದಿತ ಸಮಯದಲ್ಲಿ ಸಮರ್ಪಕವಾಗಿ ಮಾಡಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್ ಸೂಚನೆ ನೀಡಿದರು. ಅಧಿವೇಶನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ನ.27) ನಡೆದ ಪೂರ್ವಸಿದ್ಧತೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ …
Read More »ಇವತ್ತು ಬೆಳಗಾವಿಗೆ ಏಕರೂಪ್ ಕೌರ್ ಬಂದಿದ್ರು….!!
ಬೆಳಗಾವಿ, ವಿಧಾನ ಪರಿಷತ್ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಬೆಳಗಾವಿ ಜಿಲ್ಲೆಯ ವಿಧಾನ ಪರಿಷತ್ ಚುನಾವಣಾ ವೀಕ್ಷಕರಾದ ಹಿರಿಯ ಐ.ಎ.ಎಸ್. ಅಧಿಕಾರಿ ಏಕರೂಪ್ ಕೌರ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ನ.26) ನಡೆದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ …
Read More »