Breaking News

Breaking News

ಬೆಳಗಾವಿ – ಗೋವಾ ಬಾರ್ಡರ್ ನಲ್ಲಿ 7 ಲಕ್ಷ ಸೀಜ್ ಆಯ್ತು…

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಚೆಕ್‌ಪೋಸ್ಟ್‌ನಲ್ಲಿ ಶುಕ್ರವಾರ, ದಾಖಲೆಗಳಿಲ್ಲದ ₹7.98 ಲಕ್ಷ ಹಣವನ್ನು ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರ ತಂಡ ವಶಕ್ಕೆ ಪಡೆದಿದೆ. ನಗರದ ನಿವಾಸಿ ಸಂಜಯ ಬಸವರಾಜ ರೆಡ್ಡಿ ಎನ್ನುವವರು ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಹಣ ಇಟ್ಟುಕೊಂಡಿದ್ದರು. ಬಸ್‌ ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿತ್ತು. ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡುವ ವೇಳೆ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಹಣ ಮುಟ್ಟುಗೋಲು ಹಾಕಿಕೊಂಡು ಖಾನಾಪುರದ …

Read More »

ಬೆಳಗಾವಿಯ ಪ್ರಸಿದ್ಧ ,ಯಲ್ಲಮ್ಮನ ದೇವಸ್ಥಾನಕ್ಕೆ ಕೆನಡಾ ದೇಶದಿಂದ ಬಂತು ಕಾಣಿಕೆ….!!

ಕೆನಡಾ ಕಂಟ್ರಿಗೂ…ಯಲ್ಲಮ್ಮನ ಪವಾಡ ಎಂಟ್ರಿ….!! ಬೆಳಗಾವಿ- ಬೆಳಗಾವಿ ಜಿಲ್ಲೆಯ ಯಲ್ಲಮ್ಮನ ದೇವಸ್ಥಾನ ಜಗತ್ಪ್ರಸಿದ್ಧ ದೇವಸ್ಥಾನ ಎನ್ನುವದು ಸಾಭೀತಾಗಿದೆ ಯಾಕಂದ್ರೆ ಯಲ್ಲಮ್ಮನ ದೇವಸ್ಥಾನದ ಹುಂಡಿಯಲ್ಲಿ ಕೆನಡಾ ದೇಶದ ಕರೆನ್ಸಿ ಸಿಕ್ಕಿದೆ. ಬೆಳಗಾವಿಯ ಪ್ರಸಿದ್ಧ ಯಲ್ಲಮ್ಮನ ದೇವಸ್ಥಾನಕ್ಕೆ ಕೆನಡಾ ದೇಶದ ಭಕ್ತರೂ ಬರ್ತಾರೆ ಎನ್ನುವ ವಿಚಾರವೂ ಖಾತ್ರಿಯಾಗಿ,ಬರಗಾಲದ ಸಮಯದಲ್ಲೂ ಹುಂಡಿಯಲ್ಲಿ ಈ ವರ್ಷ ಪ್ರತಿವರ್ಷಕ್ಕಿಂತ ಎರಡು ಕೋಟಿ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ. ಈ ವರ್ಷ ವಿದೇಶದ ಅಂದ್ರೆ ಕೆನಡಾ ದೇಶದ ಕಾಣಿಕೆಯೂ ಮುಟ್ಟಿರುವದು …

Read More »

ಬೆಳಗಾವಿ ಲೋಕಸಭಾ ಅಖಾಡಕ್ಕೆ ಸಾಹುಕಾರ್ ಎಂಟ್ರಿ….!!

ಬೆಳಗಾವಿ- ಬೆಳಗಾವಿ ಲೋಕಸಭಾ ಅಖಾಡಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಂಟ್ರಿ ಹೊಡೆದಿದ್ದಾರೆ.ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಜೊತೆ ಎರಡು ಗಂಟೆಗೂ ಹೆಚ್ವು ಕಾಲ ಚರ್ಚಿಸಿ ಚುನಾವಣೆಯ ರೂಪುರೇಷೆಗಳ ಬಗ್ಗೆ ಸಮಾಲೋಚನೆ ಮಾಡಿದ್ದಾರೆ.ಗುರುವಾರ ಮಧ್ಯಾಹ್ನ ಮಂಗಲಾ ಅಂಗಡಿ ಅವರ ಗೃಹ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಲೆ,ಇದೆ,ಕಾರ್ಯಕರ್ತರು ಉತ್ಸುಕರಾಗಿದ್ದಾರೆ.ಎಲ್ಲರೂ ಒಮ್ಮತದಿಂದ ಕೆಲಸ ಮಾಡುತ್ತಾರೆ.ಎಲ್ಲರಲ್ಲಿಯೂ ಸಹಮತ ಇದೆ‌.ನರೇಂದ್ರ …

Read More »

ಧಾರವಾಡದಿಂದ, ಪ್ರಲ್ಹಾದ್ ಜೋಶಿ ಬದಲಾವಣೆಗೆ ಮಠಾಧೀಶರ ಪಟ್ಟು…!!

ಧಾರವಾಡ ‌ಲೋಕಸಭೆ ಅಭ್ಯರ್ಥಿ ಪ್ರಹ್ಲಾದ್ ‌ಜೋಶಿ ಬದಲಾವಣೆಗೆ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹ: ಮಾ.31 ರ ಗಡುವು ನೀಡಿದ ಮಠಾಧೀಶರು… ಹುಬ್ಬಳ್ಳಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲಿಂಗಾಯತ ಮತ್ತು ಉಳಿದ ಸಮಾಜವನ್ನು ತುಳಿಯುತ್ತಿದ್ದಾರೆ. ಸ್ವಾಮೀಜಿಗಳನ್ನು ಅಪಮಾನಗೊಳಿಸಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್’ನ್ನು ಬಿಜೆಪಿ ವರಿಷ್ಠರು ಮಾ. 31 ರೊಳಗೆ ಬದಲಾವಣೆ ಮಾಡಬೇಕೆಂದು ಶಿರಹಟ್ಟಿಮಠದ ಪಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಆಗ್ರಹಿಸಿದರು. ಮೂರುಸಾವಿರಮಠದ ಆವರಣದಲ್ಲಿ ವಿವಿಧ ಸ್ವಾಮೀಜಿಗಳೊಂದಿಗೆ ಚಿಂತನ ಮಂಥನ …

Read More »

ಬುಧವಾರ, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆ ಗ್ರ್ಯಾಂಡ್ ವೆಲ್ ಕಮ್…!!!

ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್ ಅವರು ನಾಳೆ ಬುಧವಾರ ಬೆಳಗಾವಿಗೆ ಬರಲಿದ್ದು ಬೆಳಗಾವಿಯ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಜಗದೀಶ್ ಶೆಟ್ಟರ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ನಿರ್ಧರಿಸಿದ್ದಾರೆ. ನಾಳೆ,ಬುಧವಾರದಂದು ಬೆಳಿಗ್ಗೆ 10 ಘಂಟೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೀರೆಬಾಗೇವಾಡಿ ಟೋಲ್ ಮೂಲಕ ಬೆಳಗಾವಿ ಲೊಕಸಭಾ ಕ್ಷೇತ್ರಕ್ಕೆ ಆಗಮಿಸಲಿದ್ದು ಸಾವಿರಾರು ಬಿಜೆಪಿ ಕಾರ್ಯಕರ್ತರು ಅವರಿಗೆ ಬೃಹತ್ ಸ್ವಾಗತ ಮಾಡಲಿದ್ದಾರೆ. ಎಂದು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ …

Read More »

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ ಹಿನ್ನಲೆಯಲ್ಲಿ ಬಿಜೆಪಿಯ ಅತೃಪ್ತ ನಾಯಕರನ್ನು ಸಂತೈಸಲು ಮಾಜಿ ಸಿಎಂ ಯಡಿಯೂರಪ್ಪ ಬೆಳಗಾವಿಗೆ ಇಂದು ರಾತ್ರಿ ಆಗಮಿಸುತ್ತಿದ್ದಾರೆ. ಬೆಳಗಾವಿಯ ಪಂಚತಾರಾ ಹೊಟೆಲ್ ನಲ್ಲಿ ಯಡಿಯೂರಪ್ಪ ನವರು ಬೆಳಗಾವಿ ಜಿಲ್ಲೆಯ ಬಿಜೆಪಿ ಶಾಸಕರು, ಮಾಜಿ ಶಾಸಕರು,ಹಾಗು ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಸೋಶಿಯಲ್ …

Read More »

ಲಕ್ಷ್ಮಣ ಸವದಿ ಕ್ಷೇತ್ರದಿಂದಲೇ ಪ್ರಿಯಾಂಕಾ ಪ್ರಚಾರ ಆರಂಭ…

ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಕರೆ ಅಥಣಿ: ದೇಶಕ್ಕೆ ಕಾಂಗ್ರೆಸ್ ಪಕ್ಷ ಹಲವು ಕೊಡುಗೆಗಳನ್ನು ನೀಡಿದೆ. ಆರ್ಥಿಕ ಸಬಲೀಕರಣಕ್ಕಾಗಿ ಕಾಂಗ್ರೆಸ್​ 5 ಗ್ಯಾರಂಟಿಗಳನ್ನು ನೀಡಿದೆ. ಕೊವಿಡ್​​, ಪ್ರವಾಹದ ಸಂದರ್ಭದಲ್ಲಿ ಜನರಿಗೆ ಸಾಕಷ್ಟು ಕೆಲಸ ಮಾಡಿದ್ದೇವೆ. ಹೀಗಾಗಿ ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕೆಂದು ಲೋಕೋಪಯೋಗಿ ಇಲಾಖೆ ಸಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಅಥಣಿ ಪಟ್ಟಣದಲ್ಲಿ ಚಿಕ್ಕೋಡಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ …

Read More »

ಯೋಗ್ಯತೆ ಇದ್ರೂ ಯೋಗ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್ ಅಳಿಯನ ಅಸಮಾಧಾನ

ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಬಯಸಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಧಾರವಾಡ-ಧಾರವಾಡದಿಂದ ವಿನೋದ್ ಅಸೂಟಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ ತಮ್ಮ ಬೆಂಬಲಿಗರ ಸಭೆ ನಡೆಸಿದ ರಜತ್ ಉಳ್ಳಾಗಡ್ಡಿಮಠ, ಈ ಬಾರಿ ನಾನು ಎಂಟ್ರೆನ್ಸ್ ಎಕ್ಸಾಮ್ ಫೇಲ್ ಆಗಿದ್ದೇನೆ ಎಂದು ಹೇಳಿದ್ದಾರೆ. ಯೋಗ್ಯತೆ ಇದ್ರೂ ಯೋಗ ಇಲ್ಲ: ಟಿಕೆಟ್ ಮಿಸ್ ಆಗಿದ್ದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅಳಿಯ ಅಸಮಾಧಾನ ಕಳೆದ …

Read More »

ಬಿಜೆಪಿ ಪಟ್ಟಿ ಬಿಡುಗಡೆ,ಬೆಳಗಾವಿಯಿಂದ ಶೆಟ್ಟರ್ ಉತ್ತರ ಕನ್ನಡದಿಂದ ಕಾಗೇರಿ…

ಬೆಳಗಾವಿ – ಕೊನೆಗೂ ಬಿಜೆಪಿ ಪಟ್ಟಿ ಬಿಡುಗಡೆಯಾಗಿದೆ.ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಹಾಗೂ ಉತ್ತರ ಕನ್ನಡದಿಂದ ವಿಶ್ವೇಶರ್ ಹೆಗಡೆ ಕಾಗೇರಿ ಅವರು ಫೈನಲ್ ಆಗಿದ್ದಾರೆ. ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಬಿಜೆಪಿ ಕೈಬಿಟ್ಟಿದೆ. ಅಲ್ಲಿ ಕಾಗೇರಿಯವರನ್ನು ಬಿಜೆಪಿ ಕಣಕ್ಕಿಳಿಸಿದೆ. ಬೆಳಗಾವಿ ಲೋಕಸಭಾವಕ್ಷೇತ್ರದಿಂದ ಕೊನೆಗೂ ಜಗದೀಶ್ ಶೆಟ್ಟರ್ ಅವರ ಹೆಸರು ಫೈನಲ್ ಆಗಿದೆ.

Read More »

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಇಬ್ಬರು ಸಾವು!

ಬೆಳಗಾವಿ-ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನೊಪ್ಪಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ದುರ್ಮರಣ ಹೊಂದಿದ್ದಾರೆ.ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೇವಡಿಕೊಪ್ಪ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕೊಳಚಿ ಗ್ರಾಮದ ವೆಂಕನಗೌಡ ಪಾಟೀಲ್(50), ಲಕ್ಕನಾಯಕನಕೊಪ್ಪದ ಪ್ರಮೋದ್ ಕುಂಬಾರ್(18) ಮೃತ ದುರ್ದೈವಿಗಳಾಗಿದ್ದಾರೆ.ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದು ಅವರನ್ನು ರಾಮದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

Read More »