Breaking News
Home / Breaking News (page 54)

Breaking News

ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ವಿಶೇಷ ಕಾಳಜಿ…!!

ಬೆಳಗಾವಿ, – ಒಳಹರಿವು, ಮಳೆಯ ಪ್ರಮಾಣ, ಜಲಾಶಯ ಮಟ್ಟ ಮತ್ತು ಮಹಾರಾಷ್ಟದಿಂದ ಬಿಡುವ ನೀರಿನ ಪ್ರಮಾಣ ಇವುಗಳ ಮೇಲೆ ನಿಗಾವಹಿಸುವುದರಿಂದ ಅತ್ಯಂತ ವೈಜ್ಞಾನಿಕವಾಗಿ ಮತ್ತು ಪರಿಣಾಮಕಾರಿಯಾಗಿ ಪ್ರವಾಹ ನಿರ್ವಹಣೆಯನ್ನು ಮಾಡಬಹುದು. ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇವುಗಳ ಮೇಲೆ ನಿಗಾ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್ ತಿಳಿಸಿದರು. ಗುರುವಾರ(ಜು.27) ಅತಿವೃಷ್ಟಿಯಿಂದ ಬಾಧಿತಗೊಂಡಿರುವ ಗ್ರಾಮಗಳು …

Read More »

ಇವರು ಪೋಲಿಸರಾ?ಅಥವಾ ರಾಕ್ಷಸರಾ….??

ಬೆಳಗಾವಿ-ಬೆಳಗಾವಿಯ ನಡು ರಸ್ತೆಯಲ್ಲಿ ವಿಕಲಾಂಗನ ಮೇಲೆ ಖಾಕಿ ಕ್ರೌರ್ಯ ತೋರಿಸಿದ್ದು,ವಿಕಲಾಂಗನಿಗೆ, ಬೂಟಿನಿಂದ ಒದ್ದು, ಲಾಠಿ ಮುರಿಯುವಂತೆ ಥಳಿಸಿರುವ ಪೋಲಿಸರು ಆ ವಿಕಲಾಂಗನನ್ನು ಮನಬಂದಂತೆ ಥಳಿಸಿ,ಆತನಿಗೆ ನಡು ರಸ್ತೆಯಲ್ಲೇ ಮಲಗಿಸಿ ಅಮಾನವೀಯವಾಗಿ ನಡೆದುಕೊಂಡ ವಿಡಿಯೋ ಈಗ ರಾಜ್ಯಾದ್ಯಂತ ವೈರಲ್ ಆಗಿದೆ. ಮಂಗಳವಾರ ರಾತ್ರಿ ನಡೆದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ನಗರದ ಖಾನಾಪೂರ ರಸ್ತೆಯ ಹೊಟೇಲ್ ವೊಂದರ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಉದ್ಯಮಭಾಗ ಠಾಣೆ ಪಿಎಸ್ ಐ ಸರ್ದಾರ ಮುತ್ತಟ್ಟಿ,ಪೇದೆಗಳಾದ …

Read More »

ಬೆಳಗಾವಿ ಜಿಲ್ಲೆಯ ಯಾವ ಡ್ಯಾಂ ನಲ್ಲಿ ಎಷ್ಟು ನೀರು ಸಂಗ್ರಹ ಆಗಿದೆ,ಎಷ್ಟು ಬಾಕಿ ಇದೆ ಗೊತ್ತಾ..??

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ನಿರೀಕ್ಷೆಗೆ ಮೀರಿ ಜಿಲ್ಲೆಯ ಜಲಾಶಯಗಳಲ್ಲಿ ನೀರು ಸಂಗ್ರಹವಾಗುತ್ತಿದ್ದು ಬಹುತೇಕ ಎಲ್ಲ ಜಲಾಶಯಗಳು ತುಂಬುವ ಹಂತ ತಲುಪಿವೆ. ಬೆಳಗಾವಿ ಮಹಾನಗರಕ್ಕೆ ನೀರು ಪೂರೈಸುವ ರಾಕಸಕೊಪ್ಪ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.ಮಲಪ್ರಭಾ ನದಿಯ ನವೀಲುತೀರ್ಥ ಜಲಾಶಯ ಹಾಗೂ ಹಿಡಕಲ್ ಜಲಾಶಯಗಳು ತುಂಬುವ ಹಂತ ತಲುಪಿವೆ,ಜೊತೆಗೆ ಕೃಷ್ಣಾ ನದಿಯ ಒಳ ಹರಿವು 1 ಲಕ್ಷ 40 ಸಾವಿರ …

Read More »

ಬೆಳಗಾವಿ ಜಿಲ್ಲೆಯಲ್ಲಿ ಕಣ್ಣಿಗೆ ನೋವು ಬಂದಿದೆ ಹುಷಾರ್..!!

ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಕಣ್ಣಿನ ನಂಜು, ಮದ್ರಾಸ್ ಐಯ್, ಹಳ್ಳಿಯ ಭಾಷೆಯಲ್ಲಿ ಇದಕ್ಕೆ ಕಣ್ಣು ನೋವು ಅಂತಾನೆ ಕರೀತಾರೆ ಈ ಸಾಂಕ್ರಾಮಿಕ ವೈರಸ್ ಈಗ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದ್ದು ಸಾರ್ವಜನಿಕರು ಈ ಬಗ್ಗೆ ಜಾಗೃತಿ ವಹಿಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ವೈರಸ್ ನ ಲಕ್ಷಣಗಳು ಕಣ್ಣು ಕೆಂಪಾಗುವದು ಕಣ್ಣು ಚುಚ್ಚುವದು.ಕಣ್ಣಿನಿಂದ ನೀರು ಮತ್ತು ಪಿಚ್ಚು ಬರುವದು,ನಂತರ ಜ್ವರ ಬರುವದು ಈ ರೀತಿಯ ಲಕ್ಷಣ ಗಳಿದ್ದು …

Read More »

ಬೆಳಗಾವಿ : ಗೋಡೆ ಕುಸಿದು ಯುವಕನ ಸಾವು.

ಬೆಳಗಾವಿ-ಮಳೆಯಿಂದ ಮನೆಯ ಗೋಡೆ ಕುಸಿದು ಯುವಕ ಸಾವನ್ನೊಪ್ಪಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ದುರ್ಘಟನೆ ನಡೆದಿದೆ.ಕಾಶಿನಾಥ ಅಪ್ಪಾಸಾಬ ಸುತಾರ (23) ಮೃತ ದುರ್ದೈವಿಯಾಗಿದ್ದಾನೆ.ಸತತವಾಗಿ ಸುರಿದ ಮಳೆಯಿಂದಾಗಿ ಮನೆಯ ಗೋಡೆ ಕುಸಿತದಿಂದ ಸಾವು ಸಂಭವಿಸಿದೆ. ಯುವಕನ ಮೈ ಮೇಲೆ ಗೋಡೆ ಕುಸಿತದ ಕಲ್ಲು ಮಣ್ಣು ಬಿದ್ದು ಸ್ಥಳದಲ್ಲೇ ಮೃತನಾಗಿದ್ದು,ಸ್ಥಳಕ್ಕೆ ಅಥಣಿ ಪಿಎಸ್ಐ ಹಾಗೂ ಸಿಪಿಐ ಭೇಟಿ ಪರಿಶೀಲನೆ ಮಾಡಿದ್ದಾರೆ.ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ.ನಡೆದಿದೆ.

Read More »

ನಾಳೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ…!!

ಬೆಳಗಾವಿ, ): ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಗುರುವಾರ(ಜು.27) ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಹವಾಮಾನ ಇಲಾಖೆಯು ಗುರುವಾರದಂದು ಯಲ್ಲೋ ಅಲರ್ಟ್ ಘೋಷಿಸಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ‌ ನೀಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ***

Read More »

ಬೆಳಗಾವಿ ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ.

ಬೆಳಗಾವಿ, -ಬೆಳಗಾವಿ ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಕೆಳಹಂತದ ಸೇತುವೆಗಳು ಮುಳುಗಡೆಯಾಗುತ್ತವೆ. ಆದ್ದರಿಂದ ಜನರಿಗೆ ಅನುಕೂಲವಾಗುವಂತೆ ಶಾಶ್ವತ ಪರ್ಯಾಯ ಮಾರ್ಗ ನಿರ್ಮಾಣದ ಸಾಧ್ಯತೆಗಳನ್ನು ಪರಿಶೀಲಿಸಿ ವರದಿ ಕಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದ ಹವಾಮಾನ ಮತ್ತು ಮಳೆ-ಬೆಳೆಗಳಿಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಬುಧವಾರ (ಜು.26) ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಪ್ರತಿವರ್ಷ 30 ಕೆಳಹಂತದ ಸೇತುವೆಗಳು ಮುಳುಗಡೆಯಾಗುವುದರಿಂದ …

Read More »

ಜಿಲ್ಲೆಯ ಫಾಲ್ಸ್ ಗಳ ಸಮೀಪ ಹೋಗದಂತೆ ನಿರ್ಬಂಧ

ಬೆಳಗಾವಿ, ): ಜಿಲ್ಲೆಯಾದ್ಯಂತ ಹಲವಾರು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲ ವಾಟರ್ ಫಾಲ್ಸ್ ಗಳ ಸಮೀಪ ಸಾರ್ವಜನಿಕರು ತೆರಳುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಫಾಲ್ಸ್ ಸಮೀಪಕ್ಕೆ ತೆರಳಿದಾಗ ಕಾಲುಜಾರಿ ಬಿದ್ದು ಅನೇಕ ಜನರು ಪ್ರಾಣ ಕಳೆದುಕೊಂಡ ಘಟನೆಗಳು ರಾಜ್ಯದಾದ್ಯಂತ ಸಂಭವಿಸುತ್ತಿರುವುದು ವರದಿಯಾಗಿದೆ. ಇಂತಹ ದುರ್ಘಟನೆಗಳನ್ನು ತಪ್ಪಿಸುವ ಉದ್ಧೇಶದಿಂದ ಜಿಲ್ಲೆಯಲ್ಲಿರುವ ಫಾಲ್ಸ್ ಸಮೀಪ ತೆರಳುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದಲ್ಲದೇ ಅರಣ್ಯ ಪ್ರದೇಶದಲ್ಲಿರುವ …

Read More »

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ -ಶಿರಾಡಿ ಘಾಟ್ ಸುರಂಗ ನಿರ್ಮಾಣ,ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರ್ಡ್ ನಿರ್ಮಾಣ,ಬೆಳಗಾವಿ ನಗರದ ಹಳೆಯ NH 4 ನ ಪುಣೆ ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ರಾಜ್ಯದ 20 ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಚರ್ಚಿಸಿದ್ದಾರೆ. ನವದೆಹಲಿಯಲ್ಲಿ ಭೇಟಿಯಾದ ಅವರು ಯೋಜನೆಗಳಿಗೆ ವೇಗ ನೀಡಲು ಮನವಿ ಮಾಡಿದ್ದಾರೆ ಕೇಂದ್ರ ಸಚಿವರು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ …

Read More »

ದೂದಸಾಗರ್ ಫಾಲ್ಸ್ ಬಳಿ, ಗುಡ್ಡ ಕುಸಿತ, ರೇಲ್ವೇ ಸಂಚಾರ ಸ್ಥಗಿತ.

ದೂಧಸಾಗರ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ : ರೈಲು ಸಂಚಾರದಲ್ಲಿ ವ್ಯತ್ಯಯ ಬೆಳಗಾವಿ : ಕರ್ನಾಟಕ ಹಾಗೂ ಗೋವಾ ರಾಜ್ಯದ ಗಡಿಯಲ್ಲಿರುವ ದೂದಸಾಗರ ಫಾಲ್ಸ್‌ ಬಳಿ ಇರುವ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತವಾಗಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ರಾಜ್ಯದ ಗಡಿ ಭಾಗವಾದ ಖಾನಾಪುರ ತಾಲೂಕಿನಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಗಡಿಯಲ್ಲಿ ಸತತವಾಗಿ ಸುರಿಯುತ್ತಿರುವ ಧಾರಕಾರ ಮಳೆಯ ರಬ್ಬಸಕ್ಕೆ ದೂಧ್ ಸಾಗರ ಜಲಪಾತದ ಬಳಿ …

Read More »