Breaking News

Breaking News

ಬೆಳಗಾವಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲೋಕಾಯುಕ್ತ ಬಲೆಗೆ

ಬೆಳಗಾವಿ-ಭೂ ಪರಿವರ್ತನೆ ಮಾಡಿಕೊಡಲು 40 ಸಾವಿರ ಲಂಚ ಪಡೆಯುತ್ತಿರುವಾಗ ಬೆಳಗಾವಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಹಾಗು ಗ್ರೇಡ್ 2 ಕಾರ್ಯದರ್ಶಿ ಇಬ್ಬರೂ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಬೆಳಗಾವಿ ತಾಪಂ ಸಿಒ ರಾಮರೆಡ್ಡಿ ಪಾಟೀಲ,ಹಾಗೂ ಗ್ರೇಡ್ 2 ಕಾರ್ಯದರ್ಶಿ ವೈಜನಾಥ ಸನದಿ ಇಬ್ಬರೂ ಲಂಚದ ಹಣದ ಸಮೇತ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ ಎಂದು ಲೋಕಾಯುಕ್ತ ಎಸ್ಪಿ ಹಣಮಂತರಾಯ ಬೆಳಗಾವಿ ಸುದ್ದಿ ಡಾಟ್ ಕಾಮ್ ಗೆ ತಿಳಿಸಿದ್ದಾರೆ. ಬೆಳಗಾವಿ …

Read More »

ಬೆಳಗಾವಿಯ ನಕಲಿ ದವಾಖಾನೆಗಳಿಗೆ ಬಿಗ್ ಬ್ರೇಕ್….!!!

ಬೆಳಗಾವಿ- ಬೆಳಗಾವಿ ನಗರದಲ್ಲಿ ನಕಲಿ ವೈದ್ಯರ ಮತ್ತು ನಕಲಿ ಕ್ಲಿನಿಕ್ ಗಳ ಹಾವಳಿ ಹಚ್ಚಾಗಿದ್ದು ಬೆಳಗಾವಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಆರೋಗ್ಯಾಧಿಕಾರಿಗಳು ಬೆಳಗಾವಿಯಲ್ಲಿ ಬಿರುಸಿನ ಕಾರ್ಯಾಚರಣೆ ನಡೆಸಿದ್ದಾರೆ. ಬೆಳಗಾವಿ ಭಡಕಲ್ ಗಲ್ಲಿಯ ಶಿವಾ ಕ್ಲಿನಿಕ್ ನೋಂದಣಿ‌ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು ನಿಯಮ ಉಲ್ಕಂಘಿಸಿದ ಡಾ.ಎಸ್.ಎ.ದೇವನಗಾವಿ ಇವರಿಗೆ ದಂಡ ವಿಧಿಸಲಾಗಿದೆ. ಬೆಳಗಾವಿಯ ಭಡಕಲ್ ಗಲ್ಲಿಯ ಶಿವಾ ಕ್ಲಿನಿಕ್ ನಲ್ಲಿ ತೆಳ್ಳಗೆ ಇದ್ದವರಿಗೆ ದಪ್ಪು ಮಾಡಲು, ಮತ್ತು ದಪ್ಪು ಇದ್ದವರಿಗೆ ತೆಳ್ಳಗೆ …

Read More »

ಬೆಳಗಾವಿಯಲ್ಲಿ ಇಬ್ಬರು ಅಪರ ಜಿಲ್ಲಾಧಿಕಾರಿ ನೇಮಿಸಲು ದೇಶಪಾಂಡೆ ಸಲಹೆ..

ಪಾರದರ್ಶಕ, ನ್ಯಾಯಬದ್ಧ, ಸರಳೀಕೃತ ಆಡಳಿತ ಕಲ್ಪಿಸಬೇಕಿದೆ: ಅಧ್ಯಕ್ಷ ಆರ್.ವಿ.ದೇಶಪಾಂಡೆ ಬೆಳಗಾವಿ, -ನಾಗರಿಕರಿಗೆ ಉತ್ತಮ ಸೌಲಭ್ಯ ಹಾಗೂ ಸರಕಾರಿ ಯೋಜನೆಗಳ ಪ್ರಯೋಜನ ದೊರಕಬೇಕಾದರೆ ಆಡಳಿತದಲ್ಲಿ ಸುಧಾರಣೆ ಅತ್ಯಗತ್ಯವಾಗಿದೆ. ಇತ್ತೀಚೆಗೆ ಆಡಳಿತದಲ್ಲಿ ಸಾಕಷ್ಟು ಸುಧಾರಣೆಯಾಗಿದ್ದರೂ‌ ಪಾರದರ್ಶಕತೆ ಕೊರತೆ ಎದ್ದು ಕಾಣುತ್ತಿದ್ದು, ಇದನ್ನು ನಿವಾರಿಸಬೇಕಿದೆ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ(ಜೂ.28) ನಡೆದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ …

Read More »

ಅವರೇ ಸಾಹುಕಾರ್ ಅಲ್ವಾ, ನಾನು ಹೆಸರಿಗಷ್ಟೇ ಲಕ್ಷ್ಮೀ

ಬೆಳಗಾವಿ- ದುಡ್ಡು ನನ್ನ ಹತ್ತಿರ ಎಲ್ಲಿದೆರ್ರೀ ನೀವೇ ಅವರಿಗೆ ಸಾಹುಕಾರ್ ಅಂತೀರಾ ನಾನು ಹೆಸರಿಗಷ್ಟೇ ಲಕ್ಷ್ಮೀ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ಬೆಳಗಾವಿಯಲ್ಲಿ ಮೊದಲ ಬಾರಿಗೆ ಮಾದ್ಯಮಗಳ ಜೊತೆ ಮಾತನಾಡಿದ ಅವರು ಲೋಕಸಭೆ ಚುನಾವಣೆಯಲ್ಲಿ ಸೋಲಾಗಿದೆ.ಯಾವ ಕಾರಣಕ್ಕೆ ಸೋಲಾಗಿದೆ ಎಂದು ತಿಳಿದುಕೊಳ್ಳುತ್ತಿದ್ದೇನೆ.ಸೋಲು ಮತ್ತು ಗೆಲುವು ಎರಡನ್ನೂ ನಾನು ಸಮಾನವಾಗಿ ಸ್ವೀಕರಿಸಿದ್ದೇನೆ. ಹಿಂದೆ ನಡೆದ ಎಂಎಲ್ಸಿ ಚುನಾವಣೆಯಲ್ಲಿ ನನ್ನ ಸಹೋದರನನ್ನು ಅತ್ಯಧಿಕ ಮತಗಳ ಅಂತರದಿಂದ …

Read More »

ರಾಜಿ-ಸಂಧಾನ ಮಾಡದೇ ತ್ವರಿತ ಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

ಅನುಸೂಚಿತ ಜಾತಿ/ಅನುಸೂಚಿತ ಪಂಗಡ ದೌರ್ಜನ್ಯ ನಿಯಂತ್ರಣ: ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಬೆಳಗಾವಿ, – ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೂರುಗಳು ದಾಖಲಾದಾಗ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ವಿನಾಕಾರಣ ವಿಳಂಬ ಮಾಡಿದಲ್ಲಿ ಸಂಬಂಧಿಸಿದ ಅಧಿಕಾರಿಗಳ‌ ವಿರುದ್ದ ಕ್ರಮ‌ ಜರುಗಿಸಲಾಗುವುದು ಜಿಲ್ಲಾಧಿಕಾರಿ‌ ನಿತೇಶ್ ಪಾಟೀಲ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ (ಜೂ.26) ಜರುಗಿದ ಅನುಸೂಚಿತ ಜಾತಿ/ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ …

Read More »

ಫುಡ್ ಟೆಸ್ಟೀಂಗ್…..ಕಳಪೆ ಆದ್ರೆ ಶಿಸ್ತಿನ ಕ್ರಮ- ಮೇಡಂ ವಾರ್ನೀಂಗ್….!

ಕಳಪೆ ಪೂರಕ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ಯರಗಟ್ಟಿ : ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ …

Read More »

ಹೊಸತನ ಹೊಸ ಹುರುಪು ಬೆಳಗಾವಿ ಅಭಿವೃದ್ಧಿಗೆ ಹೊಸ ಮಾರ್ಗ….!!

ಬೆಳಗಾವಿ ಸಂಸದರಾಗಿ ಜಗದೀಶ್ ಶೆಟ್ಟರ್ ಆಯ್ಕೆಯಾದ ಬಳಿಕ ಬೆಳಗಾವಿ ಅಭಿವೃದ್ಧಿ ಕುರಿತು ಚಿಂತನೆ ಶುರುವಾಗಿದೆ.ದೆಹಲಿಯಲ್ಲಿ ಇರುವ ಶೆಟ್ಟರ್ ರೇಲ್ವೆ ಮಂತ್ರಿಗಳನ್ನು ಭೇಟಿಯಾಗಿ ಹಳೆಯ ಯೋಜನೆ ಬೇಗನೆ ಪೂರ್ಣಗೊಳಿಸುವಂತೆ ಆಗ್ರಹಿಸಿ ಹೊಸ ಬೇಡಿಕೆಕೆಗಳನ್ಬು ಈಡೇರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಬೆಳಗಾವಿ – ಕಿತ್ತೂರು – ಧಾರವಾಡ ಮಾರ್ಗಕ್ಕೆ ಹೊಸ ರೈಲು ಮಾರ್ಗ ಯೋಜನೆ ಶೀಘ್ರವಾಗಿ ಆರಂಭಿಸುವಂತೆ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ ಅವರಿಗೆ ಮನವಿ ಸಲ್ಲಿಸಿದ ಬೆಳಗಾವಿ ಸಂಸದರಾದ ಶ್ರೀ ಜಗದೀಶ ಶೆಟ್ಟರ …

Read More »

ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರ ದಂಡು.ಡಿಸಿಎಂ ಹುದ್ದೆಗೆ ಫುಲ್ ಡಿಮ್ಯಾಂಡು……!!

ಬೆಳಗಾವಿ- ಸಿಎಂ ಸಿದ್ರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಇಬ್ಬರೂ ಸಹ ದೆಹಲಿಗೆ ಹಾರಿದ್ದಾರೆ.ಅವರ ಹಿಂದೆ.ಮುಂದೆ ಈಗಾಗಲೇ ಡಿಸಿಎಂ ಸ್ಥಾನದ ಆಕಾಂಕ್ಷಿಗಳೂ ಸಹ ದೆಹಲಿಗೆ ಹೋಗಿದ್ದು ಇಂದು ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಕರ್ನಾಟಕ ಕಾಂಗ್ರೆಸ್ ಬೀಡು ಬಿಟ್ಟಿದೆ ಕರ್ನಾಟಕದಲ್ಲಿ ಜಿಲ್ಲಾ ಪಂಚಾಯತಿ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯಲಿದೆ.ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದು ಬಂದಿದ್ದು ಲೋಕಸಭೆ ಚುನಾವಣೆ ಮುಗಿದ ಬಳಿಕ ಸಿಎಂ ಡಿಸಿಎಂ …

Read More »

ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ

*ಗೋಕಾಕ- ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ*: ಸಾರ್ವಜನಿಕರ ಯಾವುದೇ ಸಣ್ಣ-ಪುಟ್ಟ ಸಮಸ್ಯೆಗಳಿದ್ದರೂ ಸ್ಥಳದಲ್ಲಿಯೇ ಅಧಿಕಾರಿಗಳು ಪರಿಹರಿಸಬೇಕು. ವಿನಾಕಾರಣ ಅವರಿಗೆ ಅನಗತ್ಯ ತೊಂದರೆಗಳನ್ನು ನೀಡಿದರೇ ಸಹಿಸುವದಿಲ್ಲ. ಅಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಅಧಿಕಾರಿಗಳ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು. ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವದಿಲ್ಲವೆಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ …

Read More »

ಬೈಲವಾಡದಲ್ಲಿ ಟ್ರ್ಯಾಕ್ಟರ್ ಚಲಾಯಿಸಿ ಎಲ್ಲರ ಗಮನ ಸೆಳೆದ ಮಂತ್ರಿ…..

ಬೈಲಹೊಂಗಲ-ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಇಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ನಯಾನಗರದಲ್ಲಿ ಸಮಗ್ರ ಬೇಸಾಯ ಪದ್ದತಿ ಅಳವಡಿಸಿಕೊಂಡಿರುವ ರೈತ ಪಕೀರಪ್ಪ ಅರೋಳಿ ಅವರ ಜಮೀನಿಗೆ ಭೇಟಿ‌ ನೀಡಿ ಪರಿಶೀಲಿಸಿದರು. ಆಡು ಸಾಕಾಸಿಕೆ,ಮೇವು ಬೆಳೆ ತಾಕು,ಕೃಷಿ ಹೊಂಡ ,ಎರೆಹುಳು ಗೊಬ್ಬರ ತೊಟ್ಟಿ, ರೇಷ್ಮೆ ಬೆಳೆ ತಾಕುಗಳಿ ಸಚಿವರು ಭೇಟಿ ನೀಡಿದರು. ಬೈಲಹೊಂಗಲ ಪಕ್ಕದ ಬೈಲವಾಡ ಗ್ರಾಮದಲ್ಲಿ‌ ಟ್ರ್ಯಾಕ್ಟರ್ ಚಲಾಯಿಸಿ ಕೃಷಿ ಸಚಿವರು ಎಲ್ಲರ ಗಮನ ಸೆಳೆದರು.ಶಾಸಕರಾದ ಮಹಾಂತೇಶ್ ಕೌಜಲಗಿ, …

Read More »