Breaking News
Home / Breaking News

Breaking News

ಜಗದೀಶ್ ಶೆಟ್ಟರ್ ಕುವೆಂಪು ನಗರಕ್ಕೆ ಹೋಗಿದ್ದು ಯಾಕೆ ಗೊತ್ತಾ.??

ಬೆಳಗಾವಿ-ಬೆಳಗಾವಿ ನಗರದಲ್ಲಿ ಬೆಳಗಿನ ಜಾವ ಕೋಳಿ ಕೂಗುವ ಮುನ್ನ ನಗರದಲ್ಲಿ ಜಗದೀಶ್ ಶೆಟ್ಟರ್ ಅವರ ಅವಾಜ್ ಕೇಳುತ್ತಿದೆ.ತಪ್ಪದೇ ದಿನನಿತ್ಯ ಚಹಾ ಪೇ ಚರ್ಚಾ ಮೂಲಕ ನಗರದಲ್ಲಿ ಇರುವ ಪ್ರಭಾವಿ ಮುಖಂಡರ ಮನೆಗಳಿಗೆ ಭೇಟಿ ನೀಡಿ ಬೆಂಬಲ ಯಾಚಿಸುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಇವತ್ತು ಬೆಳಗಾವಿಯ ಕುವೆಂಪು ನಗರದಲ್ಲಿ ಕಾಣಿಸಿಕೊಂಡರು. ಬಿಜೆಪಿ ಮುಖಂಡ ಭೀಮಶಿ ಜಾರಕಿಹೊಳಿ ಅವರ ಮನೆಗೆ …

Read More »

ಹೃದಯಾಘಾತದಿಂದ ನರೇಗಾ ಕಾರ್ಮಿಕ ಸಾವು

ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲಿಯೇ ಸೋಮವಾರ ಸಾವನ್ನಪ್ಪಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತ ಕಾರ್ಮಿಕ. ಗ್ರಾಮದಲ್ಲಿ ನರೇಗಾ ಯೋಜನೆಯ ಹಳ್ಳ ಹೂಳೆತ್ತುವ ಕಾಮಗಾರಿಯಲ್ಲಿ ಕೂಲಿ ಮಾಡುತ್ತಿದ್ದರು.‌ ಆಗ ತೀವ್ರ ಹೃದಯಾಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ತಾಲ್ಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ವಿಜಯ ಪಾಟೀಲ, ಪಿಡಿಒ ವಿಜಯಲಕ್ಷೀ ಆನಿಗೋಳ, ಗ್ರಾಮ ಪಂಚಾಯಿ ಸದಸ್ಯರು ಭೇಟಿ ನೀಡಿ ಮೃತ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿ ಸರ್ಕಾರದಿಂದ ಬರುವ …

Read More »

ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ

ಕುಮಟಾ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ಮಿರ್ಜಾನ್ ಶಾಖಾ ಮಠದ ನಿಶ್ಚಲಾನಂದನಾಥ ಸ್ವಾಮೀಜಿಯವರನ್ನ ಭೇಟಿಯಾಗಿ ಆಶೀರ್ವಾದ ಪಡೆದರು. ಇದೇವೇಳೆ ನಿಶ್ಚಲಾನಂದನಾಥರು, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿಯವರೊಂದಿಗೆ ದೂರವಾಣಿ ಕರೆ ಮಾಡಿ ಡಾ.ಅಂಜಲಿ ಅವರಿಗೆ ನೀಡಿದರು. ಅವರೊಂದಿಗೂ ಮಾತನಾಡಿದ ಡಾ.ನಿಂಬಾಳ್ಕರ್, ಅವರ ಆಶೀರ್ವಾದವನ್ನೂ ಕೇಳಿದರು. ಬಳಿಕ ಕೆಲ ಹೊತ್ತು …

Read More »

ಅಕ್ರಮ ಗೋ ಸಾಗಾಟ ; ಟ್ರಕ್ ಚಾಲಕನ ಮೇಲೆ ನೈತಿಕ ಪೊಲೀಸ್ ಗಿರಿ

ಬೆಳಗಾವಿ : ಅಕ್ರಮ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಹಿನ್ನಲೆಯಲ್ಲಿ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ನಗರದ ಹೊರವಲಯದಲ್ಲಿ ಭಾನುವಾರ ಸಂಜೆ ನಡೆದಿದೆ. ಮಹಾರಾಷ್ಟ್ರದಿಂದ ಹುಬ್ಬಳ್ಳಿಗೆ ಹೊರಟ್ಟಿದ್ದ ಲಾರಿಯಲ್ಲಿ ಸುಮಾರು 12 ಕ್ಕೂ ಹೆಚ್ಚು ಗೋವುಗಳನ್ನು ಅಕ್ರಮ ಸಾಗಾಟ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ವಿಷಯ ತಿಳಿದ ಹಿಂದೂಪರ ಸಂಘಟನೆಯ 50 ಕ್ಕೂ ಅಧಿಕ ಯುವಕರು ಬೆಳಗಾವಿ ಹೊರವಲಯದ ಸುವರ್ಣಸೌಧದ ಬಳಿ ಲಾರಿ ತಡೆದು ಗೋವುಗಳನ್ನು ರಕ್ಷಣೆ …

Read More »

28 ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ..

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆಯ ರಂಗೇರಿದೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಚುನಾವಣಾ ಪ್ರಚಾರದ ಅವಧಿ ಮುಕ್ತಾಯವಾಗುವ ಹಂತದಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಈಗ ಉತ್ತರ ಕರ್ನಾಟಕದ ಜಿಲ್ಲೆಗಳತ್ತ ಮುಖ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎಪ್ರಿಲ್ 28 ರಂದು ಬೆಳಗಾವಿಗೆ ಬರುವ ಮಹೂರ್ಥ ಫಿಕ್ಸ್ ಆಗಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿ ಜಿಲ್ಲೆಗೆ ಬರೋದು ಫಿಕ್ಸ್ ಆಗಿತ್ತು. ಆದ್ರೆ …

Read More »

ಯೂಟ್ಯೂಬರ್ ಗಳ ಮೇಲೆ ನಿಗಾವಹಿಸಲು ಸೂಚನೆ….

ಮಾಧ್ಯಮ ಕಣ್ಗಾವಲು ಘಟಕಕ್ಕೆ ಚುನಾವಣಾ ಸಾಮಾನ್ಯ ವೀಕ್ಷಕ ಎಂ.ಕೆ.ಅರವಿಂದ ಕುಮಾರ್ ಭೇಟಿ. ಬೆಳಗಾವಿ, -ಲೋಕಸಭಾ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಟಿವಿ ಚಾನೆಲ್, ದಿನಪತ್ರಿಕೆಗಳು ಮಾತ್ರವಲ್ಲದೇ ಸಾಮಾಜಿಕ‌ ಜಾಲತಾಣಗಳಲ್ಲಿ ನೀಡುವ ಜಾಹೀರಾತುಗಳು ಮತ್ತು‌ ಪ್ರಚಾರಕಾರ್ಯಗಳ ಖರ್ಚುವೆಚ್ಚದ ಮೇಲೆಯೂ ನಿಗಾ ವಹಿಸಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಹಿರಿಯ ಐ.ಎ.ಎಸ್ ಅಧಿಕಾರಿ ಎಂ.ಕೆ.ಅರವಿಂದ ಕುಮಾರ್ ಅವರು‌ ನಿರ್ದೇಶನ ನೀಡಿದರು. ಚುನಾವಣೆ ಹಿನ್ನೆಲೆಯಲ್ಲಿ ವಾರ್ತಾಭವನದಲ್ಲಿ ಸ್ಥಾಪಿಸಲಾಗಿರುವ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು(ಎಂಸಿಎಂಸಿ) …

Read More »

ಸಾಹುಕಾರ್ ಪುತ್ರಿ ಪ್ರಿಯಾಂಕಾ ಕೋಟ್ಯಾಧೀಶೆ.

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿರುವ ಪ್ರಿಯಾಂಕಾ ಸತೀಶ ಜಾರಕಿಹೊಳಿ ಅವರು ಸಾಮಾಜಿಕ ಸೇವೆಯಲ್ಲಿ ಸಕ್ರೀಯವಾಗಿದ್ದು ರಾಜಕೀಯ ರಂಗದಲ್ಲಿಯೂ ಅನುಭವ ಪಡೆದಿದ್ದಾರೆ.ತಂದೆ ಸತೀಶ್ ಅವರಂತೆ ಸರಳ ವ್ಯಕ್ತಿತ್ವವನ್ನು ಹೊಂದಿರುವ ಅವರು ಆಸ್ತಿ ಸಂಪಾದನೆಯಲ್ಲಿ ಕೋಟ್ಯಾಧೀಶರು ಅನ್ನೋದು ವಿಶೇಷ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ತಮ್ಮ ಆದಾಯ ಪ್ರಮಾಣ ಪತ್ರ ಸಲ್ಲಿಸಿರುವ ಪ್ರಿಯಾಂಕಾ ಸತೀಶ ಜಾರಕಿಹೊಳಿ ಅವರು 7.29 ಕೋಟಿ ರೂ ಚರಾಸ್ತಿ ಮತ್ತು 1.82 ಕೋಟಿ …

Read More »

18 ರಂದು ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಕೆ- ಪ್ರಿಯಾಂಕಾ ಜಾರಕಿಹೊಳಿ

ಏಪ್ರಿಲ್ 18ಕ್ಕೆ ನಾಮಪತ್ರ ಸರಳ ರೀತಿಯಲ್ಲಿ ಸಲ್ಲಿಸುತ್ತೇನೆ: ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನು ಏಪ್ರಿಲ್ 18 ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ. ಕಾರಣ ತಾವೆಲ್ಲರೂ ಸಹಕರಿಸಬೇಕು ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಏಪ್ರಿಲ್ 18 ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ. ಅಂದು …

Read More »

ಮಿನಿಸ್ಟರ್ ಲಕ್ಷ್ಮೀ ಹೆಬ್ಬಾಳಕರ್ ಪುತ್ರನ ಆಸ್ತಿ ಎಷ್ಟು ಗೊತ್ತಾ..???

ಲಕ್ಷ್ಮೀ ಪುತ್ರ ಮೃಣಾಲ್ ಆಸ್ತಿ 13 ಕೋಟಿ….!! ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಇವತ್ತು ನಾಮಪತ್ರ ಸಲ್ಲಿಸಿದ್ದಾರೆ ನಾಮಪತ್ರದ ಜೊತೆ ಸಲ್ಲಿಸಿದ ದಾಖಲೆಗಳ ಪ್ರಕಾರ ಅವರ ಬಳಿ ₹13.63 ಕೋಟಿ ಮೌಲ್ಯದ ಆಸ್ತಿ ಇದೆ. ₹10.01 ಕೋಟಿ ಮೌಲ್ಯದ ಚರಾಸ್ತಿ, ₹3.62 ಕೋಟಿ ಸ್ಥಿರಾಸ್ತಿ ಇದೆ. ₹4.20 ಕೋಟಿ ಮೌಲ್ಯದ ವಿವಿಧ ಶೇರ್‌ಗಳಿವೆ. ₹6.16 ಕೋಟಿ ಸಾಲ ಮಾಡಿರುವ ಅವರ ಬಳಿ ಯಾವುದೇ ವಾಹನವಿಲ್ಲ. …

Read More »

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ ಎನ್ನುವದು ಪಬ್ಲಿಕ್ ಡಿಮ್ಯಾಂಡ್ ಕೂಡಾ ಇದೆ. ಧಾರವಾಡ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೆ ಏನು ಸಂಬಂಧ ? ಎಂದು ಎಲ್ಲರೂ ವಿಚಾರ ಮಾಡಬಹುದು ಧಾರವಾಡ ಅಭ್ಯರ್ಥಿ ಬದಲಾದ್ರೆ ಅದರ ಎಫೆಕ್ಟ್ ಬೆಳಗಾವಿ ಜಿಲ್ಲೆಗೂ ಆಗುವ ಎಲ್ಲ ಸಾಧ್ಯತೆಗಳಿವೆ. ಕಾಂಗ್ರೆಸ್ ಪಕ್ಷ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ …

Read More »