Breaking News

Breaking News

ರಮೇಶ ಕತ್ತಿ ಕಾಂಗ್ರೆಸ್ ಸೇರ್ತಾರೆ,ಲೋಕಸಭೆಗೆ ಚಿಕ್ಕೋಡಿಯಿಂದ ನಿಲ್ತಾರೆ…!!

ಬೆಳಗಾವಿ: ಜಿಲ್ಲೆಯ ರಾಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆಯುವ ಸಾಧ್ಯತೆ ಇದ್ದು, ಬಿಜೆಪಿ ಮುಖಂಡ, ಮಾಜಿ ಸಂಸದ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಸದ್ದು ಮಾಡುತ್ತಿದೆ. ವಿಧಾನಸಭೆ ಕದನದ ಬಳಿಕ ಈಗ ಮುಂಬರುವ ಲೋಕಸಭೆ ಕದನಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಣ ಸಿದ್ದಗೊಳಿಸುತ್ತಿದ್ದು, ಜಿಲ್ಲೆಯಲ್ಲಿ ೧೧ ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಈ ಬಾರಿ ಜಿಲ್ಲೆಯ ಎರಡೂ ಲೋಕಸಭಾ …

Read More »

ನಮ್ಮ ಚಿಂತಿ ನಿಮಗ್ಯಾಕ್ ? ಸಾಹುಕಾರ್ ಪ್ರಶ್ನೆ.

ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಗೋಕಾಕ: ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ, ಸರ್ಕಾರದ ಆಡಳಿತ ಸರಿಯಾಗಿ ನಡೆಸದಿದ್ದರೆ ಅಷ್ಟೇ ಟೀಕಿಸಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಬಿಜೆಪಿಯವರಿಗೆ ಟಾಂಗ್‌ ನೀಡಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಆಂತರಿಕ ವಿಷಯಗಳ ಬಗ್ಗೆ ನಮ್ಮ ನಾಯಕರು ಸರಿಪಡಿಸುತ್ತಾರೆ, ಕಾಂಗ್ರೆಸ್‌ ಪಕ್ಷದ …

Read More »

ಪರಿಸರ ಉಳಿದರೆ ಮಾತ್ರ ಜೀವ ಸಂಕುಲ ಉಳಿಯಲು‌ ಸಾಧ್ಯ.

ಬೆಳಗಾವಿ: ಇಲ್ಲಿನ ಬಿ.ಕೆ.ಮಾಡೆಲ್ ಪ್ರೌಢಶಾಲೆಯಲ್ಲಿ ಇಂದು ವಿಶ್ವ ಪರಿಸರ ದಿನ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ‌ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಇಕೋ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಗರ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಿಜ್ವಾನ್ ನಾವಗೇಕರ್ ಅವರು ಮಾತನಾಡಿ, ಪರಿಸರ ಉಳಿದರೆ ಮಾತ್ರ ಜೀವ ಸಂಕುಲ ಉಳಿಯಲು‌ ಸಾಧ್ಯ. ಗಿಡ ಮರಗಳನ್ನು ಹೆಚ್ಚೆಚ್ಚು ಬೆಳೆಸುವ ಮೂಲಕ ನಮ್ಮ ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆಧ್ಯ …

Read More »

200 ಯುನಿಟ್ ಯಾರಿಗುಂಟು,ಯಾರಿಗಿಲ್ಲ, ಗೈಡ್ ಲೈನ್ಸ್ ಬಿಡುಗಡೆ…

ಉಚಿತ ವಿದ್ಯುತ್ ಗೆ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರ ಬೆಳಗಾವಿ- ಕರ್ನಾಟಕ ಸರ್ಕಾರ 200 ಯೂನಿಟ್​ ಉಚಿತ ವಿದ್ಯುತ್​ ನೀಡುವುದಾಗಿ ಆದೇಶ ಹೊರಡಿಸಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ 200 ಯೂನಿಟ್​ ಉಚಿತ ವಿದ್ಯುತ್​ ಸೇರಿತ್ತು. ಇದೀಗ ಗೃಹಜ್ಯೋತಿ ಯೋಜನೆಯನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಮಾನದಂಡಗಳನ್ನು ಬಿಡುಗಡೆ ಮಾಡಿದೆ. ಜುಲೈ ತಿಂಗಳ ವಿದ್ಯುತ್ ಬಿಲ್​ನಿಂದ ಈ ಗೃಹಜ್ಯೋತಿ ಯೋಜನೆ ಜಾರಿಯಾಗಲಿದೆ. ಆದರೆ ಈ ಯೋಜನೆಯ …

Read More »

ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಳಗಾವಿಗೆ ಬರ್ತಾರೆ.

ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಬಿಜೆಪಿಯಲ್ಲಿ ಆತ್ಮಾವಲೋಕನ ಪರ್ವ ಶುರುವಾಗಿದೆ. ಇಂದು ಸೋಮವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಬೆಳಗಾವಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಇಂದು ಸಾಯಂಕಾಲ 4 ಗಂಟೆಗೆ ಬೆಳಗಾವಿಯ ಡಾ. ಗುರುದೇವ ರಾನಡೆ ಮಂದಿರ ಎಸಿಪಿಆರ್ ನ ನವೀಕೃತ ಕಟ್ಟಡದ ಲೋಕಾರ್ಪಣೆ ಮತ್ತು ಪಾತವೇಟು ಗಾಡ್ ನಿಯತಕಾಲಿಕೆಯ 200ನೇ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಹೆಸರಿನ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಜಿ …

Read More »

ಬೆಳಗಾವಿ: ಮಾಜಿ ಸೈನಿಕನ ಮರ್ಡರ್.

ಆಸ್ತಿ ವಿವಾದ : ಬರ್ಬರ ಹತ್ಯೆ ಆಸ್ತಿ ವಿಚಾರವಾಗಿ ಸಹೋದರರ ಮಧ್ಯೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ತಿಗಡಿ ಗ್ರಾಮದ ನಿವಾಸಿ ಸುರೇಶ್ ಖಣಗಾಂವಿ ಹತ್ಯೆಯಾದವ. ಸದಾ ಖಣಗಾಂವಿ ಗಂಭೀರವಾಗಿ ಗಾಯಗೊಂಡವ.ಶಂಕರ್ ಖಣಗಾಂವಿ ಕೊಲೆ ಮಾಡಿದ ವ್ಯಕ್ತಿ.ಹತ್ಯೆಗೀಡಾದ ಸುರೇಶ್ ಮಾಜಿ ಸೈನಿಕನಾಗಿದ್ದು, ಸದ್ಯ ಕೃಷಿ ಮಾಡಿಕೊಂಡು ಜಮೀನಿನಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದರು. ಆಸ್ತಿ ವಿಚಾರವಾಗಿ ಆರೋಪಿ ಶಂಕರ್ ಖಣಗಾಂವಿ …

Read More »

ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿ ಕಚೇರಿ ಕಾಂಪ್ಲೇಕ್ಸ್ ಆಗೋದು ಗ್ಯಾರಂಟಿ…!!

ಬೆಳಗಾವಿ ನಗರದಲ್ಲಿ ಸರಕಾರಿ ಕಚೇರಿಗಳ ಬಹುಮಹಡಿ ಕಟ್ಟಡ‌ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಬೆಳಗಾವಿ, – ನಗರದ ಹೃದಯಭಾಗದಲ್ಲಿ ಇರುವ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಇತರೆ ಕಚೇರಿಗಳ ಜಾಗೆಯಲ್ಲಿಯೇ ಸರಕಾರಿ ಕಚೇರಿಗಳ ಸುಸಜ್ಜಿತ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ಶನಿವಾರ(ಜೂ.3) ಸ್ಥಳ ಪರಿಶೀಲನೆ ನಡೆಸಿತು. ಲೋಕೋಪಯೋಗಿ ಇಲಾಖೆಯ ಸಚಿವರಾಗಿರುವ ಸತೀಶ್ ಜಾರಕಿಹೊಳಿ ಅವರ ನಿರ್ದೇಶನದಂತೆ ನಗರಕ್ಕೆ ಆಗಮಿಸಿದ ತಂಡವು ಸ್ಥಳವನ್ನು ವೀಕ್ಷಿಸಿ ಅಗತ್ಯ ಮಾಹಿತಿಯನ್ನು …

Read More »

ಬೆಳಗಾವಿ ಜಿಲ್ಲೆಯಲ್ಲೂ ಗ್ಯಾರಂಟಿ ಮೀಟೀಂಗ್…!!

“ಗ್ಯಾರಂಟಿ”ಗಳ ಸಮರ್ಪಕ ಅನುಷ್ಠಾನ; ಸಂಭವನೀಯ ಪ್ರವಾಹ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನಿರ್ದೇಶನ ಬೆಳಗಾವಿ, -: ಗೃಹಲಕ್ಷ್ಮೀ, ಯುವನಿಧಿ, ಅನ್ನಭಾಗ್ಯ ಸೇರಿದಂತೆ ಐದೂ “ಗ್ಯಾರಂಟಿ”ಗಳನ್ನು ಜಾರಿಗೊಳಿಸಲಾಗುವುದು ಎಂದು ಸರಕಾರ ಘೋಷಿಸಿದೆ. ಇವುಗಳ ಸಮರ್ಪಕ ಅನುಷ್ಠಾನ, ಫಲಾನುಭವಿಗಳ ಗುರುತಿಸುವಿಕೆ ಹಾಗೂ ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹ ನಿರ್ವಹಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. …

Read More »

ಲಕ್ಷ್ಮೀ ಮೇಡಂ ಅವರಿಗೆ ಪವರ್ ಫುಲ್ ಇನ್ ಚಾರ್ಜ್…!!

ಬೆಳಗಾವಿ- ನಿರಂತರ ರಾಜಕೀಯ ಸಂಘರ್ಷ ನಡೆಸಿ,ಘಟಾನುಘಟಿ ರಾಜಕೀಯ ನಾಯಕರ ಪ್ರತಿರೋಧ ಎದುರಿಸಿ ಎರಡನೇಯ ಬಾರಿಗೆ ವಿಧಾನಸೌಧದ ಮೆಟ್ಟಲೇರಿ,ಮಂತ್ರಿಯೂ ಆಗಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಹತ್ವದ ಉಸ್ತುವಾರಿ ಸಿಗುವ ಸಾಧ್ಯತೆ ಇದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗುವದು ಬಹುತೇಕ ಖಚಿತವಾಗಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಹುಬ್ಬಳ್ಳಿ- ಧಾರವಾಡ ಜಿಲ್ಲಾ ಉಸ್ತುವಾರಿಯ …

Read More »

ಐದು ಗ್ಯಾರಂಟಿ ಪಕ್ಕಾ. ಸಿಎಂ ಸಿದ್ರಾಮಯ್ಯ ಹೊಡೆದ್ರು ಶಿಕ್ಕಾ. ಚಿಂತಿ ಬೇಡ ಅಕ್ಕಾ..!!

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಮೊದಲ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆಯನ್ನು ಜುಲೈ 1 ರಿಂದ ಜಾರಿ ಮಾಡಲಾಗುವುದು ಎಂದರು. 12 ತಿಂಗಳ ಸರಾಸರಿ ಆಧರಿಸಿ, ಅದಕ್ಕೆ ಶೇಕಡಾ 10 ರಷ್ಟು ಸೇರಿಸಿ, ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು, ಗೃಹಜ್ಯೋತಿಯ …

Read More »