Breaking News

Breaking News

ಹೊಲದ ರಸ್ತೆಗಾಗಿ ಕಲಹ ನಡು ರಸ್ತೆಯಲ್ಲೇ ಮರ್ಡರ್…

ಚಿಕ್ಕೋಡಿ-ಜಮೀನಿನಲ್ಲಿ ರಸ್ತೆ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಗಲಾಟೆಯಾಗಿ,ಓರ್ವನ ಕೊಲೆಯಲ್ಲಿ ಗಲಾಟೆ ಅಂತ್ಯವಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಹೊರವಲಯದ ನೇಜ – ಶಮನೇವಾಡಿ ರಸ್ತೆ ಬಳಿ ಈ ಘಟನೆ ನಡೆದಿದೆ.ಸುನೀಲ್ ಖೋತ್ (45) ಕೊಲೆಯಾದ ವ್ಯಕ್ತಿ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯ ಸುನೀಲ್ ಖೋತ್ ಸಾವನ್ನೊಪ್ಪಿದ್ದಾನೆ.ಸುನೀಲ್ ಶಮನೇವಾಡಿ ಗ್ರಾಮದ ನಿವಾಸಿಯಾಗಿದ್ದಾನೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಲವು ವರ್ಷಗಳಿಂದ ರಸ್ತೆ ವಿಚಾರವಾಗಿ ಕಲಹ …

Read More »

ಬೆಳಗಾವಿ- ಗೋಕಾಕ್ ರಸ್ತೆಯಲ್ಲಿ ಪೋಲೀಸರಿಗೆ ಸಿಕ್ಕಿದ್ದೇನು ಗೊತ್ತಾ.?

ಬೆಳಗಾವಿ- ಬೆಳಗಾವಿ- ಗೋಕಾಕ್ ರಸ್ತೆಯಲ್ಲಿ ಬೆಳಗಾವಿಗೆ ಸಾಗಿಸಲಾಗುತ್ತಿದ್ದ ಗಾಂಜಾ ,ಬೆಳಗಾವಿಯ ಸಿಇಎನ್ ಸೈಬರ್ ಕ್ರೈಂ ಪೋಲೀಸರು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ನಗರದ ಸಿಇಎನ್ ಠಾಣೆಯ ಎಸಿಪಿ ಪ್ರಭು ಮತ್ತು ಪಿಐ ಬಿ.ಆರ್ ಗಡ್ಡೇಕರ ನೇತ್ರತ್ವದ ತಂಡ ಬೆಳಗಾವಿ ತಾಲ್ಲೂಕಿನ ಕಬಲಾಪೂರ ಹತ್ತಿರ ದಾಳಿ ಮಾಡಿ ಸಮೀರ್ ರಾಜೇಸಾಬ್ ಲತ್ತೆಮ್ಮನವರ ಸಾ.ಧಾರವಾಡ ಎಂಬ ಆರೋಪಿತನಿಂದ ಒಂದು ಕೆಜಿ 22 ಗ್ರಾಂ ಗಾಂಜಾ ಮತ್ತು ಬೈಕ್ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಮಹಾನಗರದಲ್ಲಿ ಗಾಂಜಾ …

Read More »

ಭೂ‌.ನ್ಯಾಯಮಂಡಳಿಯಲ್ಲಿ ಅಶ್ಪಾಕ್ ತಹಶೀಲ್ದಾರ್ ಗೆ ಸ್ಥಾನ.

ಬೆಳಗಾವಿ- ಬೆಳಗಾವಿ ತಾಲ್ಲೂಕು ಭೂ ನ್ಯಾಯ ಮಂಡಳಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತ ಅಶ್ಪಾಕ್ ತಹಶೀಲ್ದಾರ್ ಅವರನ್ನು ನಾಮನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ತಾಲ್ಲೂಕಿನ ಸಂತಿಬಸ್ತವಾಡ ಗ್ರಾಮದ ಅಶ್ಪಾಕ್ ಮಹ್ಮದ್ ನಿಸಾರ್ ತಹಶೀಲ್ದಾರ್ ಹಲವಾರು ವರ್ಷಗಳಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಶ್ರಮಿಸುತ್ತಿದ್ದು ಇವರ ಪಕ್ಷದ ಸೇವೆಯನ್ನು ಗುರುತಿಸಿ ಬೆಳಗಾವಿ ತಾಲ್ಲೂಕಿನ ಭೂ ನ್ಯಾಯಮಂಡಳಿಯ ಸದಸ್ಯರನ್ನಾಗಿ ಇವರನ್ನು ನಾಮನಿರ್ದೇಶನ ಮಾಡಲಾಗಿದೆ. ಬೆಳಗಾವಿ ತಾಲ್ಲೂಕು ನ್ಯಾಯ …

Read More »

ರಮೇಶ್ ಕತ್ತಿ, ರಾಜೀನಾಮೆ ಪತ್ರದಲ್ಲಿ ಏನಿದೆ ಗೊತ್ತಾ…?

  ಮಾನ್ಯ ಮುಖ್ಯ ಕಾರ್ಯನಿರ್ವಾಹಕರು ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ ವಿಷಯ- ನನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು. ಮಾನ್ಯರೇ.. ಈ ಕೆಳಗೆ ಸಹಿ ಮಾಡಿರುವ ನಾನು ಶ್ರೀ ರಮೇಶ್ ವಿಶ್ವನಾಥ ಕತ್ತಿ,ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ, ಇದರ ಅಧ್ಯಕ್ಷ ಸ್ಥಾನಕ್ಕೆ,ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ.ಕಾರಣ ನನ್ನ ರಾಜೀನಾಮೆಯನ್ನು ಅಂಗೀಕರಿಸಲು ಈ ಮೂಲಕ ವಿನಂತಿಸಿಕೊಳ್ಳುತ್ತೇನೆ. ನನ್ನ ಅವಧಿಯಲ್ಲಿ ನನಗೆ ಸಹಕರಿಸಿದ …

Read More »

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಕತ್ತಿ…

ಬೆಳಗಾವಿ-ಬೆಳಗಾವಿ ಜಿಲ್ಲೆಯ ಪಾಲಿಗೆ ಬ್ರೇಕಿಂಗ್ ಸುದ್ದಿ ಹೊರಬಿದ್ದಿದೆ.ಬೆಳಗಾವಿ ಡಿಸಿಸಿ ಬ್ಯಾಂಕ್ ನಲ್ಲಿ ನಡೆದ ಮಹತ್ತರ ಬೆಳವಣಿಗೆಯಿಂದಾಗಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ರಾಜೀನಾಮೆ ನೀಡಿದ್ದಾರೆ. ಬ್ಯಾಂಕ್ ನ ಜನರಲ್ ಮ್ಯಾನೇಜರ್ ಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿರುವಅಧ್ಯಕ್ಷ ರಮೇಶ ಕತ್ತಿ ವಿರುದ್ಧ 14ಜನ ನಿರ್ದೇಶಕರು ಸಿಡಿದೆದ್ದಿದ್ದರುನಿನ್ನೆ ರಮೇಶ ಕತ್ತಿ ಕರೆದ ಸಭೆಗೆ ಗೈರಾಗಿ ಪ್ರತ್ಯೇಕ ಸಭೆ ನಡೆಸಿದ್ದ ನಿರ್ದೇಶಕರು ರಮೇಶ ಕತ್ತಿ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ …

Read More »

ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕಾರಣದಲ್ಲಿ ‌ಮಿಂಚಿನ ಬೆಳವಣಿಗೆ

ಬೆಳಗಾವಿ-ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕಾರಣದಲ್ಲಿ ‌ಮಿಂಚಿನ ಬೆಳವಣಿಗೆಗಳು ನಡೆದಿವೆ.ಲೋಕಸಭೆ ಚುನಾವಣೆಯ ಸೈಡ್ ಎಫೆಕ್ಟ್ ಈಗ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಸ್ಥಾನದ ಖುರ್ಚಿಗೆ ಆಗಿದೆ. ಮಾಜಿ ಸಂಸದರಾದ ರಮೇಶ್ ಕತ್ತಿ ಮತ್ತು ಅಣ್ಣಾಸಾಹೇಬ್ ಜೊಲ್ಲೆ ಮಧ್ಯೆ ಕಿತ್ತಾಟ ನಡೆದಿದ್ದು ಈ ಕಿತ್ತಾಟ ಈಗ ರಮೇಶ್ ಕತ್ತಿ ಖುರ್ಚಿಗೆ ಕುತ್ತು ತಂದಿದೆಯಾ..? ಎನ್ನುವ ಪ್ರಶ್ನೆ ಈಗ ಎಲ್ಲರನ್ನು ಕಾಡುತ್ತಿದೆ.ರಮೇಶ್ ಕತ್ತಿ ವಿರುದ್ಧ ಮತ್ತೊಂದು ಹಂತದ ಸಮರ ಶುರುವಾಗಿದೆ. ಅಣ್ಣಾಸಾಹೇಬ್ ಜೊಲ್ಲೆ ರಮೇಶ್ ಕತ್ತಿ …

Read More »

ಹೊಸ ಬಾಂಬ್ ಸಿಡಿಸಿದ ಮಾಜಿ ಶಾಸಕ ಪಿ.ರಾಜೀವ್….!!!

ಬೆಳಗಾವಿ-ಬೆಳಗಾವಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಹೊಸ ಬಾಂಬ್ ಸಿಡಿಸಿದ್ದಾರೆ. ಅವರು ಸಿಡಿಸಿದ ಬಾಂಬ್ ಚರ್ಚೆಯಾಸ್ಪದವಾಗಿದೆ. ಬೆಳಗಾವಿ ಜಿಲ್ಲೆಯ ಸಚಿವರಿಂದ ಭೂ ಕಬಳಿಕೆ ಆಗಿದೆ ಎಂದು ಪಿರಾಜೀವ ಗಂಭೀರ ಆರೋಪ ಮಾಡಿದ್ದಾರೆ.ಬೆಳಗಾವಿ ಜಿಲ್ಲೆ ಸಚಿವರೊಬ್ಬರ ಭೂ ಕಬಳಿಕೆ‌‌‌ ಮಾಡಿರುವ ದಾಖಲೆ ಸಂಗ್ರಹ ಮಾಡುತ್ತಿದ್ದೇವೆ. ಶೇಕಡಾ 70 ರಷ್ಟು ದಾಖಲೆ ಸಂಗ್ರಹವಾಗಿವೆ. ಪೂರ್ತಿ ದಾಖಲೆ ಸಿಕ್ಕ ಬಳಿಕವೇ ನಾನೇ ಆ ಸಚಿವರ ದಾಖಲೆ ಬಿಡುಗಡೆ ಮಾಡ್ತಿನಿ ಎಂದು ಪಿ.ರಾಜೀವ್ ಹೇಳಿದ್ದಾರೆ. …

Read More »

ಬೆಂಗಳೂರಿನಲ್ಲಿ ಕಿತ್ತೂರು ಉತ್ಸವಕ್ಕೆ ಅದ್ಧೂರಿ ಚಾಲನೆ…

ಸ್ವಾಭಿಮಾನ-ನಾಡಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ: ಸಿಎಂ ಸಿದ್ದರಾಮಯ್ಯ ಬೆಂಗಳೂರು ಅ 2: ಸ್ವಾಭಿಮಾನ-ನಾಡಭಕ್ತಿ, ದೇಶಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು. ವಿಧಾನಸೌಧ ಮುಂದಿನ ಮೆಟ್ಟಿಲುಗಳ ಬಳಿ “ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ …

Read More »

ಸಂಸತ್ತಿನ ಅಂಗಳಕ್ಕೆ,ಬೆಳವಡಿ ಮಲ್ಲಮ್ಮನ ಸವಾರಿ….!!

ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ್ ಶೆಟ್ಟರ್ ಅವರು ವೀರರಾಣಿ ಬೆಳಗಡಿ ಮಲ್ಲಮ್ಮ ಮಹಿಳಾ ಪ್ರತಿಷ್ಠಾನ(ರಿ), ಬೆಳವಡಿ ಸಂಘಟನೆಯ ಪದಾಧಿಕಾರಿಗಳ ಜೊತೆಯಲ್ಲಿ ಕೇಂದ್ರ ಸಂಸದೀಯ ಸಚಿವರಾದ ಕಿರಣ್ ರಿಜಿಜು ಅವರನ್ನು ನವದೆಹಲಿಯ ನಿವಾಸದಲ್ಲಿ ಭೇಟಿ ಮಾಡಿ, ನೂತನ ಸಂಸದ ಭವನ ಆವರಣದಲ್ಲಿ ವೀರ ರಾಣಿ ಬೆಳವಡಿ ಮಲ್ಲಮ್ಮಳ EQUESTRIAN STATUE (ಕುದುರೆ ಸವಾರಿ ಮೂರ್ತಿ) ಸ್ಥಾಪನೆ ಮಾಡುವಂತೆ ಮನವಿ ಮಾಡುಕೊಂಡರು. ವೀರ ರಾಣಿ ಬೆಳವಡಿ ಮಲ್ಲಮ್ಮ ಒಬ್ಬ ಧೀರ ಮಹಿಳೆ, …

Read More »

ಬೆಳಗಾವಿಯ ದಿವ್ಯಾ ಗಾಣಿಗೇರ ರಾಜ್ಯಕ್ಕೆ ಪ್ರಥಮ

ಬೆಂಗಳೂರು-ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ಬಾಪೂಜಿ ಪ್ರಬಂಧ ಸ್ಪರ್ಧೆ ಪ್ರೌಢಶಾಲಾ ವಿಭಾಗದಲ್ಲಿ ಬೆಳಗಾವಿಯ ದಿವ್ಯಾ ಗಾಣಿಗೇರ ರಾಜ್ಯಕ್ಕೆ ಪ್ರಥಮ ಪಡೆದು ಬೆಳಗಾವಿಗೆ ಕೀರ್ತಿ ತಂದಿದ್ದಾಳೆ. *ಪ್ರೌಢಶಾಲೆ ವಿಭಾಗ ಫಲಿತಾಂಶ* ದಿವ್ಯಾ ಶ್ರೀಶೈಲ ಗಾಣಿಗೇರ,ಸರ್ಕಾರಿ ಪ್ರೌಢಶಾಲೆ, ಕೆಎಸ್‌ಆರ್‌ಪಿ,ಮಚ್ಚೆ,ಬೆಳಗಾವಿ(ಪ್ರಥಮ),ಸಮರ್ಥ ನಾಗರಾಜ …

Read More »