ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಬೆಳಗಾವಿಯ ಜಿಲ್ಲಾ ಕ್ರೀಡಾಂಗಣ ದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯ ಬಳಿಕ ಮಾದ್ಯಮಗೋಷ್ಠಿ ನಡೆಸಿದ ಅವರು,ಮುಂದಿನ ವರ್ಷ ಬೆಳಗಾವಿ ಜಿಲ್ಲಾ ಕ್ರೀಡಾಂಗಣದ ಲೀಜ್ ಅವಧಿ ಮುಗಿಯುತ್ತದೆ ಮುಂದಿನ ವರ್ಷ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮ ಎಲ್ಲಿ ನಡೆಯುತ್ತದೆ ಎಂದು ಮಾದ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ …
Read More »ಬೆಳಗಿನ ಜಾವ ಪೀರನವಾಡಿಯಲ್ಲಿ ರಾಯಣ್ಣಮೂರ್ತಿ ಪ್ರತಿಷ್ಠಾಪನೆಗೆ ಯತ್ನ
ಬೆಳಗಾವಿ- ಇಂದು ಕ್ರಾಂತಿವೀರ, ಶೂರ ಸಂಗೊಳ್ಳಿ ರಾಯಣ್ಣನ ಜಯಂತಿ ಇದ್ದು ,ಇವತ್ತು ಬೆಳಗಿನ ಜಾವ ಪೀರನವಾಡಿ ಸರ್ಕಲ್ ನಲ್ಲಿ ನೂರಾರು ಅಭಿಮಾನಿಗಳು ಸೇರಿ ರಾಯಣ್ಣನ ಮೂರ್ತಿಪ್ರತಿಷ್ಠಾಪನೆಗೆ ಯತ್ನಿಸಿದ ಘಟನೆ ನಡೆದಿದೆ. ಕಳೆದ ನಾಲ್ಕು ವರ್ಷಗಳಿಂದ ರಾಯಣ್ಣನ ಅಭಿಮಾನಿಗಳು ಬೆಳಗಾವಿ ಪಕ್ಕದ ಪೀರನವಾಡಿ ಗ್ರಾಮದ ಪ್ರವೇಶ ದ್ವಾರದಲ್ಲಿರುವ ಸರ್ಕಲ್ ನಲ್ಲಿ, ಅಭಿಮಾನಿಗಳು ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಪ್ರಯತ್ನ ಮಾಡುತ್ತಲೇ ಬಂದಿದ್ದು ಇಂದು ಬೆಳಗಿನ ಜಾವ ಐದು ಘಂಟೆ ಸುಮಾರಿಗೆ ನೂರಾರು ಅಭಿಮಾನಿಗಳು …
Read More »ಭೂ ಸುಧಾರಣೆ ಕಾಯ್ದೆ ವಿರೋಧಿಸಿ ಬೆಳಗಾವಿಯಲ್ಲಿ ರೈತರ ಪ್ರತಿಭಟನೆ
ಬೆಳಗಾವಿ: ನೂತನ ಭೂ ಸುಧಾರಣಾ ತಿದ್ದುಪಡಿ ಕಾಯಿದೆ ಹಾಗೂ ಎಪಿಎಂಸಿ ಕಾಯಿದೆ ವಿರೋಧಿಸಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಿಂದ ಕೇಂದ್ರ ಸಚಿವ ಸುರೇಶ ಅಂಗಡಿ ಕಚೇರಿವರೆಗೆ ಪ್ರತಿಭಟನೆ ನಡೆಸಿದರು. ರಾಜ್ಯ ಸರಕಾರ ಈಚೆಗೆ ತಿದ್ದುಪಡಿ ಮಾಡಿರುವ ನೂತನ ಎಪಿಎಂಸಿ ಕಾಯಿದೆ ಹಾಗೂ ಭೂ ಸುಧಾರಣಾ ಕಾಯಿದೆಯಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ. ಭೂ ಸುಧಾರಣಾ ತಿದ್ದುಪಡಿ ಕಾಯಿದೆಯಿಂದ ಬಲಾಢ್ಯರು, ಕೈಗಾರಿಕೋದ್ಯಮಿಗಳು …
Read More »ಬೆಳಗಾವಿ ಜಿಲ್ಲಾಧಿಕಾರಿಗಳ ಜೊತೆ ಪುನರ್ ಚರ್ಚೆಗೆ ಗಣೇಶ ಮಹಾ ಮಂಡಳ ನಿರ್ಧಾರ
ಬೆಳಗಾವಿ- ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸಾರ್ವಜನಿಕ ಗಣೇಶ ಉತ್ಸವಕ್ಕೆ ಅನುಮತಿ ನೀಡದಿದ್ದರೂ ಬೆಳಗಾವಿ ಜಿಲ್ಲೆಯಲ್ಲಿ ಗಣೇಶ ಉತ್ಸವ ಆಚರಣೆಗೆ ಷರತ್ತು ಭದ್ಧ ಅನುಮತಿ ನೀಡಿರುವ ಜಿಲ್ಲಾಡಳಿತದ ಕ್ರಮವನ್ನು ಬೆಳಗಾವಿಯ ಗಣೇಶ ಮಹಾಮಂಡಳ ಸ್ವಾಗತಿಸಿದೆ . ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ,ಮಂದಿರಗಳಲ್ಲಿ ಮಾತ್ರ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗಿದ್ದು ಈ ಕುರಿತು ಬೆಳಗಾವಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಪುನರ್ ಸಮಾಲೋಚನೆ ನಡೆಸಲು ಗಣೇಶ ಮಹಾಮಂಡಳ ನಿರ್ಧರಿಸಿದ್ದು ಇಂದು ಸಂಜೆ ಅಥವಾ ನಾಳೆ ಮಹಾ …
Read More »ಲಂಚ ಪ್ರಕರಣ: ಕಲಕಾಂಬ ಗ್ರಾಪಂ ಪಿಡಿಓ ಬಂಧನ
ಬೆಳಗಾವಿ,-ಫಿರ್ಯಾದಿ ಶ್ರೀ.ರೋಹಣ. ಚಂದ್ರಕಾAತ. ಪಾಟೀಲ್, ಸಾ: ಕಲಕಾಂಬ ತಾ:ಜಿ: ಬೆಳಗಾವಿ ಪಿರ್ಯಾದಿಯವರ ತಂದೆ ಮತ್ತು ದೊಡ್ಡಪ್ಪ ಹೆಸರನಲ್ಲಿ ಜಂಟಿಯಾಗಿರುವ ಮನೆಗಳಾದ ಆಸ್ತಿ ನಂ.೧೨೪ಸಿ ಮತ್ತು ಅಸ್ತಿ ನಂ. ೩೬೩ ನೆದ್ದವುಗಳನ್ನು ವಾಟ್ನಿ ಮಾಡಿಕೊಂಡು ನಂತರ ಫಿರ್ಯಾದಿಯ ತಂದೆಯವರ ಪಾಲಿಗೆ ಬಂದ ಮನೆ ನಂ.೧೨೪ ಸಿ ನೆದ್ದನ್ನು ಪಂಚಾಯತಿಯಲ್ಲಿ ದಾಖಲ ಮಾಡಿ ಉತ್ತಾರ ನೀಡಲು ಅರ್ಜಿ ಸಲ್ಲಿಸಿದ ನಂತರ ಫಿರ್ಯಾದಿಯು ಆಪಾದಿತ ಸರ್ಕಾರಿ ನೌಕರನಾದ ಶ್ರೀ. ಶ್ರೀಶೈಲ. ದೇವೆಂದ್ರ. ನಾಗಠಾಣ, ಪಂಚಾಯತ …
Read More »ಈ ಬಾರಿಯ ಗಣೇಶ ಉತ್ಸವದಲ್ಲಿ ಮೆರವಣಿಗೆ ಪಟಾಕಿ ಏನೂ ಇಲ್ಲ…..!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೋವೀಡ್ ಹಾವಳಿ ಹೆಚ್ಚಾಗಿರುವದರಿಂದ ಈ ಬಾರಿಯ ಗಣೇಶ ಉತ್ಸವವನ್ನು ಕಟ್ಟುನಿಟ್ಟಾಗಿ ಆಚರಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಬಾರಿಯ ಸಾರ್ವಜನಿಕ ಗಣೇಶ ಮಂಡಳಿಗಳು ಮಂಟಪದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡದೇ ಸಮೀಪದ ಮಂದಿರಗಳಲ್ಲಿ ಪ್ರತಿಷ್ಠಾಪನೆ ಮಾಡಬೇಕು,ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡುವ ಗಣೇಶನ ಮೂರ್ತಿ 4 ಫೂಟ್ ಗಿಂತ ಎತ್ತರ ಇರಬಾರದು ಮನೆಯಲ್ಲಿ ಪ್ರತಿಷ್ಠಾಪನೆ ಮಾಡುವ ಗಣೇಶನ ಮೂರ್ತಿ ಎರಡು ಪೂಟ್ ಗಿಂತ ಎತ್ತರ ಇರಬಾರದು,ಗಣೇಶ ಮೂರ್ತಿಯನ್ನು …
Read More »ಬೆಳಗಾವಿಯಲ್ಲಿ ಶಾಸಕಿ ಅಂಜಲಿ ಭಾವಚಿತ್ರಕ್ಕೆ ಬೆಂಕಿ…..
ಬೆಳಗಾವಿ- ಮನಗುತ್ತಿ ಗ್ರಾಮದಲ್ಲಿ ನಡೆದ ಶಿವಾಜಿ ಪ್ರತಿಮೆಯ ಕುರಿತು ನಡೆದ ಘಟನೆಯ ಸತ್ಯಾ ಸತ್ಯತೆಯನ್ನು ತಿಳಿದುಕೊಳ್ಳದೇ ಕರ್ನಾಟಕ ಸರ್ಕಾರದ ವಿರುದ್ಧ ಟ್ವೀಟ್ ಮಾಡಿರುವ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಕರವೇ ಕಾರ್ಯಕರ್ತರು ಆಕ್ರೋಶ ವ್ಯೆಕ್ತ ಪಡಿಸಿದರು. ಬೆಳಗಾವಿಯ ಕನ್ನಡ ಸಾಹಿತ್ಯಭವನ ದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಕರವೇ ಕಾರ್ಯಕರ್ತರು ಶಾಸಕಿ ಅಂಜಲಿ ನಿಂಬಾಳ್ಕರ್ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿದರು,ಅಂಜಲಿ ನಿಂಬಾಳ್ಕರ್ ಭಾವಚಿತ್ರಕ್ಕೆ ಬೆಂಕಿ …
Read More »ಆಕ್ಸಿಜನ್ ಯಂತ್ರಗಳ ಖರೀಧಿಗೆ ಅನುದಾನ ನೀಡಿದ ಅಭಯ ಪಾಟೀಲ
ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವೀಡ್ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದ್ದು,ರೋಗಿಗಳಿಗೆ ಸುಧಾರಿತ ಆಕ್ಸಿಜನ್ ಯಂತ್ರಗಳ ಖರೀಧಿಗೆ ಶಾಸಕ ಅಭಯ ಪಾಟೀಲ ಭೀಮ್ಸ್ ಆಸ್ಪತ್ರೆಗೆ ವಿಶೇಷ ಅನುದಾನ ನೀಡಿದ್ದಾರೆ. ಭೀಮ್ಸ್ ಆಸ್ಪತ್ರೆಯಲ್ಲಿ high flow nasal canuala oxygenation ಯಂತ್ರಗಳ ಖರೀಧಿಗೆ ಶಾಸಕರ ಅನುದಾನ ನೀಡುವಂತೆ ಭೀಮ್ಸ್ ನಿರ್ದೇಶಕರು ಶಾಸಕ ಅಭಯ ಪಾಟೀಲರಿಗೆ ಪತ್ರ ಬರೆದಿದ್ದರು ಭೀಮ್ಸ್ ಮನವಿಗೆ ತಕ್ಷಣ ಸ್ಪಂದಿಸಿರುವ ಶಾಸಕ ಅಭಯ ಪಾಟೀಲ ಉಪ ವಿಭಾಗಾಧಿಕಾರಿಗಳಿಗೆ ಪತ್ರ …
Read More »ಬೆಂಕಿ ಹಚ್ಚಿದವರು ದೇಶದ್ರೋಹಿಗಳು
ಬೆಳಗಾವಿ-ಪೊಲೀಸ್ ಠಾಣೆಗೆ ಆವರಣಕ್ಕೆ ನುಗ್ಗಿ ಬೆಂಕಿ ಹಚ್ಚಿದವರು ದೇಶದ್ರೋಹಿಗಳು ಎಂದು ಬೆಂಗಳೂರಿನ ಗಲಬೆ ಕುರಿತು,ಬೆಳಗಾವಿಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ನಡೆದ ಘಟನೆ ಅತ್ಯಂತ ಖಂಡನೀಯವಾಗಿದೆ.ಇಂದು ಇಡೀ ಜಗತ್ತು ಭಾರತದತ್ತ ಮುಖ ಮಾಡಿ ನೋಡುತ್ತಿದೆ, ದೇಶದಲ್ಲಿ ಕೊರೊನಾ ಮಹಾಮಾರಿ ಇದ್ದು ಶಾಂತತೆ ಕಾಪಾಡಬೇಕು, ದೇಶದ ಆರ್ಥಿಕತೆ ಸುಧಾರಿಸಲು ಪ್ರಧಾನಿ ಕೆಲಸ ಮಾಡುವ ವೇಳೆ ಕೆಲವು ದುಷ್ಟ ಶಕ್ತಿ …
Read More »ಅಂಜಲಿ ನಿಂಬಾಳ್ಕರ್ ಕ್ಷಮೆಯಾಚಿಸಲಿ- ಕರವೇ
ಖಾನಾಪೂರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಮನಗುತ್ತಿ ಘಟನೆಯ ವಾಸ್ತವತೆಯನ್ನು ತಿಳಿದುಕೊಳ್ಳದೇ ಕರ್ನಾಟಕ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಘಟಕ ಆರೋಪಿಸಿದೆ. ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ ಶಾಸಕಿ ಅಂಜಲಿ ನಿಂಬಾಳ್ಕರ್ ಟ್ವೀಟ್ ಮಾಡಿದ್ದನ್ನು ಖಂಡಿಸಿದ್ದಾರೆ. ಅಂಜಲಿ ನಿಂಬಾಳ್ಕರ್ ಒಬ್ಬ ಶಾಸಕಿಯಾಗಿ ಮನಗುತ್ತಿಯ ಘಟನೆಯ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡು …
Read More »