Breaking News

Breaking News

ನೂರು ವರ್ಷದ ಹರ್ಷ, ನಮ್ಮ ಬೆಳಗಾವಿ ಶೈನಿಂಗ್…..!!

ಬೆಳಗಾವಿ – ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗ ಏಕೈಕ ಕಾಂಗ್ರೆಸ್ ಮಹಾ ಅಧಿವೇಶನ ನಡೆದಿತ್ತು,ಈ ಅಧಿವೇಶನ ನಡೆದಿದ್ದು ಬೆಳಗಾವಿ ಮಹಾನಗರದಲ್ಲಿ ಅದು ಬೆಳಗಾವಿ ಪಾಲಿಗೆ ಹೆಮ್ಮೆಯ ವಿಚಾರ, ಈ ಅಧಿವೇಶನ ನಡೆದು ನೂರು ವರ್ಷಗಳು ಗತಿಸಿವೆ ಹೀಗಾಗಿ ಬೆಳಗಾವಿ ಈಗ ರಾಷ್ಟ್ರದ ಗಮನ ಸೆಳೆಯುತ್ತಿದೆ. ಮಹಾತ್ಮ ಗಾಂಧಿ ಅವರು ಬೆಳಗಾವಿಯಲ್ಲಿ ನಡೆಸಿದ ಕಾಂಗ್ರೆಸ್ ಅಧಿವೇಶನಕ್ಕೆ ಈಗ ಶತಮಾನೋತ್ಸವದ ಸಂಭ್ರಮ ಈ ಕಾರ್ಯಕ್ರಮ ಡಿಸೆಂಬರ್ 26,ಹಾಗೂ 27 ರಂದು ಎರಡು …

Read More »

ಸೋನಿಯಾ, ರಾಹುಲ್,ಪ್ರೀಯಾಂಕಾ, ಬೆಳಗಾವಿಯಲ್ಲೇ ತಂಗುತ್ತಾರೆ.

ಬೆಳಗಾವಿ-ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೇಸ್ ಅಧಿವೇಶನ ನಡೆದು ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿಶತಮಾನೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ,ಈ ಕುರಿತು ಪೂರ್ವ ಭಾವಿ ಸಭೆ ನಡೆಸಿದ ಡಿಸಿಎಂ ಡಿಕೆಶಿ. ಸಭೆಯ ಬಳಿಕ ಮಾಧ್ಯಮಗೋಷ್ಠಿ‌ ನಡೆಸಿ ಸಮಾವೇಶದ ಕುರಿತು ಮಾಹಿತಿ ಹಂಚಿಕೊಂಡರು. ಗಾಂಧೀ ಬಾವಿಯಲ್ಲಿ ನೀರು ತಂದು ಚಲ್ಲಿ ಗೃಹಜ್ಯೋತಿ ಘೋಷಣೆ …

Read More »

ಹನಿ ಟ್ರ್ಯಾಪ್ ಲಕ್ಷ ಲಕ್ಷ ಡಿಮ್ಯಾಂಡ್ ಆರೋಪಿಗಳು ಅರೆಸ್ಟ್

ಬೆಳಗಾವಿ-ಹನಿ ಟ್ರ್ಯಾಪ್ ಮಾಡಿ ಲಕ್ಷ.. ಲಕ್ಷ.. ಹಣಕ್ಕೆ ‌ಬೇಡಿಕೆಯಿಟ್ಟಿದ್ದ ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ.ಲಾಡ್ಜ್‌ನಲ್ಲಿ ತಂಗಿದ್ದ ಪುರುಷ ಮಹಿಳೆ ರೂಂಗೆ ಹೋಗಿ ವಿಡಿಯೋ ಮಾಡಿಕೊಂಡಿದ್ದ ಕೀಚಕರು,ಲಾಡ್ಜ್ ನಲ್ಲಿ ಮಲಗಿದ್ದ,ಜೋಡಿಯ ಅರೆನಗ್ನ ವಿಡಿಯೋ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದರು ವಿಡಿಯೋ ಮಾಡಿಟ್ಟುಕೊಂಡು 10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು.9 ಲಕ್ಷ ಹಣ ಪಡೆದುಕೊಂಡು ಮತ್ತೆ 1 ಲಕ್ಷಕ್ಕೆ ಕಾಡುತ್ತಿದ್ದರು.ಒಂದು ಲಕ್ಷ ಕೊಡು ಇಲ್ಲವಾದರೆ ನಿನ್ನ ಖಾಸಗಿ ಕ್ಷಣದ ವಿಡಿಯೋ ಬಿಡುಗಡೆ ಮಾಡ್ತಿವಿ ಎಂದು ಬೆದರಿಕೆ …

Read More »

ಬೆಳಗಾವಿ ಜಿಲ್ಲೆಯಲ್ಲಿ, ಮೂರು ಮಕ್ಕಳಿಗೆ ಜನ್ಮ ನೀಡಿದ ತಾಯಿ

ಮೂಡಲಗಿ : ಮಹಿಳೆಯೊಬ್ಬರು ಮೂರು ಮಕ್ಕಳಿಗೆ ಜನ್ಮ ನೀಡಿದ ಘಟನೆ ಮೂಡಲಗಿ ಪಟ್ಟಣದ ಆರೋಗ್ಯ ಆಧಾರ್ ಆಸ್ಪತ್ರೆಯಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ನಿವಾಸಿ ಪೂಜಾ ಕಾಲತಿಪ್ಪಿ ಎಂಬುವರು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಎರಡು ಗಂಡು ಒಂದು ಹೆಣ್ಣು ಈ ಮೂರು ಮಕ್ಕಳ ಆರೋಗ್ಯ ಉತ್ತಮವಾಗಿದೆ ಎಂದು ಅವುಗಳನ್ನು ಪರೀಕ್ಷಿಸಿದ ಮಕ್ಕಳು ತಜ್ಞ ಮಹಾಂತೇಶ ಕಡಾಡಿ ತಿಳಿಸಿದ್ದಾರೆ. ಆಸ್ಪತ್ರೆಯ ವೈದ್ಯರಾದ ಮಯೂರಿ ಕಡಾಡಿ, ವಿಜಯ್ ಬೆನಕಟ್ಟಿ, ಬಸವರಾಜ್ …

Read More »

ಎಸ್ ಎಂ ಕೃಷ್ಣ ನಿಧನ, ನಾಳೆ ಸರ್ಕಾರಿ ರಜೆ ಘೋಷಣೆ,

ಎಸ್​ಎಂ ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ; ನಾಳೆ ಸರ್ಕಾರಿ ರಜೆ ಘೋಷಣೆ, ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಅಂತ್ಯಕ್ರಿಯೆ ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ …

Read More »

ವಿಧಾನಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ಪ್ರತಿಧ್ವನಿ

ಬೆಳಗಾವಿ – ವಿಧಾನಸಭೆಯಲ್ಲಿ ಮೊದಲ ದಿನವೇ ಪಂಚಮಸಾಲಿ ಮೀಸಲಾತಿ ಹೋರಾಟ ಪ್ರತಿಧ್ವನಿಸಿತುವಿಧಾನಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಬಳಿಕ ಸಭಾದ್ಯಕ್ಷರು ಸುವರ್ಣಸೌಧದಲ್ಲಿ ಅನಾವರಣಗೊಳಿಸಿದ ಅನುಭವ ಮಂಟಪದ ಚಿತ್ರದ ಕುರಿತು ಸದನಕ್ಕೆ ಮಾಹಿತಿ ನೀಡುವಾಗ ಮದ್ಯಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸರ್ಕಾರ ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕುತ್ತಿದೆ. ಹೋರಾಟ ತಡೆಯುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದಾಗ ಇದಕ್ಕೆ ಧ್ವನಿಗೂಡಿಸಿದ ಬಸನಗೌಡ ಪಾಟೀಲ ಯತ್ನಾಳ ಸರ್ಕಾರದ …

Read More »

ಬಸವರಾಜ ಹೊರಟ್ಟಿ ಅವರ ಪಟ್ಟಿಯಲ್ಲಿ ಎಂಈಎಸ್ ನಿಷೇಧದ ವಿಚಾರವೂ ಸೇರಲಿ- ಕರವೇ

ಬೆಳಗಾವಿ -ನಾಳೆಯಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಾರದಲ್ಲಿ ಎರಡು ದಿನ ಉತ್ತರ ಕರ್ನಾಟಕ ಪ್ರದೇಶದ ಅಭಿವೃದ್ಧಿಯ ಕುರಿತು ಚರ್ಚೆಗೆ ಅವಕಾಶ ನೀಡುವದಾಗಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಭರವಸೆ ನೀಡಿರುವದನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಗತಿಸಿದೆ. ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರು ಬಸವರಾಜ್ ಹೊರಟ್ಟಿ ಅವರಿಗೆ ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಇರುವ ಕಳಕಳಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಸವರಾಜ್ ಹೊರಟ್ಟಿ ಅವರು …

Read More »

ಬೆಳಗಾವಿ ಜಿಲ್ಲಾಧಿಕಾರಿಗಳ ಇದೊಂದು ಕಾರ್ಯ ಶ್ಲಾಘನೀಯ

ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರು ಮಾಡಿರುವ ಇದೊಂದು ಕಾರ್ಯ ಶ್ಲಾಘನೀಯ ಅದು ಏನಂದ್ರೆ ಸುವರ್ಣಸೌಧಕ್ಕೆ ಪಾಸ್ ಪಡೆದು ಬರುವ ಹಿರಿಯ ನಾಗರಿಕರಿಗೆ ಶಾಲಾ ಮಕ್ಕಳಿಗೆ, ಮಹಿಳೆಯರು ಸೇರಿದಂತೆ ಪಾಸ್ ಹೊಂದಿರುವ ಎಲ್ಲ ಸಾರ್ವಜನಿಕರ ಅನಕೂಲಕ್ಕಾಗಿ ಪ್ರವೇಶ ದ್ವಾರದಿಂದ ಸುವರ್ಣಸೌಧದ ಉತ್ತರ ದಿಕ್ಕಿನ ಗೇಟ್ ವರೆಗೆ ಬಸ್ ವ್ಯವಸ್ಥೆ ಮಾಡಿದ್ದಾರೆ.ನಾಲ್ಕು ಬಸ್ ಗಳು ಮತ್ತು ಎರಡು ಇಲೆಕ್ಟ್ರಿಕ್ ವಾಹನಗಳು ನಿತರವಾಗಿ ಸಂಚರಿಸುತ್ತವೆ ಸುವರ್ಣಸೌಧಕ್ಕೆ ಶಾಸಕರಿಂದ ಮಂತ್ರಿಗಳಿಂದ ಪಾಸ್ ಪಡೆದ …

Read More »

ಯು.ಟಿ ಖಾದರ್ ಹೊಸ ಇತಿಹಾದ, ಬೆಳಗಾವಿ ಸುವರ್ಣಸೌಧದೊಳಗೆ “ಅನುಭವ ಮಂಟಪ.

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಶ್ರೀ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ, ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಮತ್ತೊಂದು ಐತಿಹಾಸಿಕ ಕ್ಷಣವು, ಬೆಳಗಾವಿಯ ಸುವರ್ಣ ಸೌಧದಲ್ಲಿ ದಾಖಲಾಗಲಿದೆ. ವಿಶ್ವಗುರು ಶ್ರೀ ಬಸವಣ್ಣನವರು ಸ್ಥಾಪಿಸಿದ, “ವಿಶ್ವದ ಮೊದಲ ಸಂಸತ್ತು” ಎಂಬ ಖ್ಯಾತಿಯ, “ಅನುಭವ ಮಂಟಪದ” ಬೃಹತ್ ತೈಲವರ್ಣ ಚಿತ್ರ ಅನಾವರಣವು ಶ್ರೀ ಯು. ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ, ಚಳಿಗಾಲ ಅಧಿವೇಶನದ ಮೊದಲ ದಿನದಂದು, ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ …

Read More »

ಹುಚ್ಚು ಕೋತಿಯ ಅಟ್ಟಹಾಸಕ್ಕೆ ನಲುಗಿದ ನೀಲಜಿ ಗ್ರಾಮಸ್ಥರು

ಬೆಳಗಾವಿ-ಹುಚ್ಚು ಕೋತಿಯ ಅಟ್ಟಹಾಸಕ್ಕೆ ಬೆಳಗಾವಿ ಪಕ್ಕದ ನೀಲಜಿ ಗ್ರಾಮಸ್ಥರು ನಲುಗಿದ್ದಾರೆ.ಕಳೆದೊಂದು ವಾರದಲ್ಲಿ ಮೂವರು ಮೇಲೆ ಮೆಂಟಲ್ ಕೋತಿಯ ಡೆಡ್ಲಿ ಅಟ್ಯಾಕ್ ಮಾಡಿ ಹಲವಾರು ಜನರನ್ನು ಗಾಯಪಡಿಸಿದೆ. ಹುಚ್ಚು ಕೋತಿ‌ಯ ಡೆಡ್ಲಿ ಅಟ್ಯಾಕ್‌ಗೆ ನೀಲಜಿ ಗ್ರಾಮದ ಜನ ಕಂಗಾಲಾಗಿದ್ದಾರೆ.ಮನೆಯನ್ನೂ ಬಿಡ್ತಿಲ್ಲ, ಶಾಲೆಯನ್ನೂ ಬಿಡ್ತಿಲ್ಲ ಸಿಕ್ಕ ಸಿಕ್ಕವರ ಮೇಲೆ ಕೋತಿಯ ದಾಳಿ ಮಾಡುತ್ತಿದ್ದು ಕೋತಿ ಕಾಟಕ್ಕೆ ಜನ ಬೇಸತ್ತು ಹೋಗಿದ್ದಾರೆ. ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದಲ್ಲಿ ಕೋತಿ ಕಾಟ ಮುಂದುವರೆದಿದೆ. ಕೋತಿ ದಾಳಿ …

Read More »