Home / Breaking News (page 56)

Breaking News

ಖಾನಾಪುರ: ಶಾಲೆಗಳಿಗೆ ಇಂದು ಮಂಗಳವಾರ ರಜೆ ಘೋಷಣೆ.

ಬೆಳಗಾವಿ, -): ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ಮಂಗಳವಾರ (ಜು‌.25) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿರುತ್ತದೆ. ***

Read More »

ಎಲ್ಲ ವಿಕಲಚೇತನರಿಗೆ ವಾಹನ-ಸಚಿವೆ ಹೆಬ್ಬಾಳಕರ್..

ಬೆಳಗಾವಿ-ರಾಜ್ಯದಲ್ಲಿರುವ ಎಲ್ಲ ವಿಕಲಚೇತನರಿಗೆ ಅವರ ಅಗತ್ಯತೆ ಆಧರಿಸಿ ಒಂದು ಬಾರಿಗೆ ದ್ವಿಚಕ್ರ ವಾಹನ ನೀಡಲು ತೀರ್ಮಾನಿಸಲಾಗಿದೆ. ಆದ್ದರಿಂದ ಅರ್ಹ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಹೆಸ್ಕಾಂ ನಿರ್ಲಕ್ಷ್ಯ ದಿಂದ ವಿದ್ಯುತ್ ತಂತಿ ತಗುಲಿ ಮರಣ ಹೊಂದಿರುವವರಿಗೆ ಕೂಡಲೇ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು. ಬಾಡಿಗೆ ಕಟ್ಟಡಗಳಲ್ಲಿರುವ …

Read More »

ಹೊಸದಾಗಿ ಬೆಳಗಾವಿ ಡಿಸಿ ಕಚೇರಿ ನಿರ್ಮಿಸಲು ನಿರ್ಧಾರ.

ಬೆಳಗಾವಿ ನಗರದಲ್ಲಿ ನಿರ್ಮಿಸಲು ಉದ್ಧೇಶಿಸಲಾಗಿರುವ ನೂತನ ಜಿಲ್ಲಾಧಿಕಾರಿ ಕಚೇರಿಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಡಿಪಿ ಸಭೆಯಲ್ಲಿ ಮಾಹಿತಿಯನ್ನು ನೀಡಿದರು. ಸದ್ಯಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲಭ್ಯವಿರುವ ಒಟ್ಟಾರೆ 9 ಎಕರೆ ಜಾಗೆಯಲ್ಲಿ ಎರಡು ಎಕರೆ ಜಾಗೆಯನ್ನು ಬಳಸಿಕೊಂಡು ಜಿಲ್ಲಾಧಿಕಾರಿ ಕಚೇರಿಯನ್ನು ನಿರ್ಮಿಸಲು ಉದ್ಧೇಶಿಸಲಾಗಿದೆ. ಉಳಿದ ಜಾಗೆಯಲ್ಲಿ ಪಾರ್ಕಿಂಗ್, ಉದ್ಯಾನ ಮತ್ತಿತರ ಮೂಲಸೌಕರ್ಯ ಒದಗಿಸಲಾಗುವುದು. ಈ ಯೋಜನೆ ಕುರಿತು ಜನ ಪ್ರತಿನಿಧಿಗಳು ಮತ್ತು ಸಂಬಂಧಿಸಿದ ಇಲಾಖೆಯ …

Read More »

ಜಿಲ್ಲೆಯಲ್ಲಿ ವ್ಯಾಪಕ ಮಳೆ: ನದಿಪಾತ್ರ ಪರಿಶೀಲಿಸಿದ ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ

ನದಿಗಳ ಒಳಹರಿವು ಹೆಚ್ಚಳ; ಪ್ರವಾಹ ಭೀತಿ ಇಲ್ಲ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, ): ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಲ್ಲಿ ಒಳಹರಿವು ಹೆಚ್ಚಾಗಿದ್ದು, ಸದ್ಯಕ್ಕೆ ಪ್ರವಾಹದ ಆತಂಕವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಜತೆಗೆ ನದಿಪಾತ್ರದ ಸ್ಥಳಗಳೂ ಸೇರಿದಂತೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭಾನುವಾರ(ಜು.23) …

Read More »

ಬೆಳಗಾವಿ,ಖಾನಾಪೂರ,ಕಿತ್ತೂರು ತಾಲ್ಲೂಕುಗಳ ಶಾಲೆಗಳಿಗೆ ರಜೆ…

ವ್ಯಾಪಕ ಮಳೆ: ಖಾನಾಪುರ, ಬೆಳಗಾವಿ, ಕಿತ್ತೂರ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, ಜು.ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸೋಮವಾರ (ಜು.24) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ …

Read More »

ಬೆಳಗಾವಿಯಲ್ಲಿ ಮಳೆಯ ಅಬ್ಬರ,ಒಟ್ಟು 15 ಸೇತುವೆಗಳು ಜಲಾವೃತ….!!

  ಬೆಳಗಾವಿ-ಕಳೆದ ಆರು ದಿನಗಳಿಂದ ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ನಿರಂತರವಾಗಿ ಸುರಿಯುತ್ತಿದೆ. ಜೊತೆಗೆ ಬೆಳಗಾವಿ ಜಿಲ್ಲೆಯಾದ್ಯಂತ ವರುಣನ ಅಬ್ಬರ ಹೆಚ್ಚಾಗಿದ್ದು,ಜಿಲ್ಲೆಯ ಸಪ್ತನದಿಗಳಿಗೆ ನೀರಿನ ಒಳಹರಿವು ಹೆಚ್ಚಳವಾಗಿದ್ದು ಸಂತಸದ ಸಂಗತಿಯಾಗಿದೆ. ಘಟಪ್ರಭಾ ನದಿಯಲ್ಲಿ 25765 ಕ್ಯೂಸೆಕ್ ಒಳಹರಿವು ಇದೆ.ಮಾರ್ಕಂಡೇಯ ನದಿಗೆ 1454 ಕ್ಯೂಸೆಕ್ ಒಳಹರಿವುಇದೆ.ಹಿಪ್ಪರಗಿ ಬ್ಯಾರೆಜ್ ನಿಂದ 91200ಕ್ಯೂಸೆಕ್ ಒಳಹರಿವು,ಅಷ್ಟೇ ಪ್ರಮಾಣದಲ್ಲಿ ಹೊರಹರಿವು ಕೂಡಾ ಇದೆ.ಮಲಪ್ರಭಾ ನದಿಗೆ 11930ಕ್ಯೂಸೆಕ್ ಒಳಹರಿವು ಇದ್ದು ಮಲಪ್ರಭೆ ಸಪ್ತ ನದಿಗಳಲ್ಲಿ ಅತ್ಯಂತ ವೇಗವಾಗಿ …

Read More »

ನಾಳೆ ಒಂದು ದಿನ ಗೃಹಲಕ್ಷ್ಮೀ ನೊಂದಣಿ ಇರೋದಿಲ್ಲ…

ತಾಂತ್ರಿಕ ನಿರ್ವಹಣೆ: ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿ ಜು.23 ರಂದು ಸ್ಥಗಿತ ಬೆಳಗಾವಿ, ಜು.22(ಕರ್ನಾಟಕ ವಾರ್ತೆ): ತಾಂತ್ರಿಕ ನಿರ್ವಹಣೆ ಕಾರಣಕ್ಕಾಗಿ ಭಾನುವಾರ(ಜು.23) ಗೃಹಲಕ್ಷ್ಮೀ ಯೋಜನೆಯ ನೋಂದಣಿ ಸೇವೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಎಲ್ಲ ನೋಂದಣಿ ಕೇಂದ್ರಗಳು ಸೋಮವಾರದಿಂದ ಯಥಾಪ್ರಕಾರ ಫಲಾನುಭವಿಗಳ ನೋಂದಣಿ ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ. ****

Read More »

ಮಹಿಳೆಯನ್ನು ರಕ್ಷಿಸಿದ ಪೋಲೀಸ್ ಗೆ ಐದು ಸಾವಿರ ಹಾಗೂ ಸಿಎಂ ಪದಕಕ್ಕೆ ಶಿಫಾರಸು…!!

ಬೆಳಗಾವಿ- ಬೆಳಗಾವಿ ನಗರದ ಹೃದಯಭಾಗದಲ್ಲಿ ಇರುವ ಕಿಲ್ಲಾ ಕೆರೆಯಲ್ಲಿ ಸಾರ್ವಜನಿಕರ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಜೀವದ ಹಂಗ ತೊರೆದು ರಕ್ಷಿಸಿದ ಟ್ರಾಫಿಕ್ ಪೋಲೀಸ್ ಗೆ ಬೆಳಗಾವಿ ನಗರ ಪೋಲೀಸ್ ಆಯುಕ್ತರು ಐದು ಸಾವಿರ ರೂ ಬಹುಮಾನ ಘೋಷಿಸಿದ್ದಾರೆ. ಐದು ಸಾವಿರ ರೂ ಬಹುಮಾನ ಘೋಷಣೆ ಮಾಡುವದರ ಜೊತೆಗೆ ರಕ್ಷಕನಿಗೆ ಮುಖ್ಯಮಂತ್ರಿಗಳ ಪದಕ ನೀಡುವಂತೆ ಶಿಫಾರಸ್ಸು ಮಾಡಲಾಗುವದು ಎಂದು ನಗರ ಪೋಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಂದು ಸಂಜೆ ಬೆಳಗಾವಿಯ …

Read More »

ಕೋಟೆ,ಕೆರೆಯಲ್ಲಿ ಜಿಗಿದು,ಯುವತಿಯನ್ನು ರಕ್ಷಿಸಿದ ಟ್ರಾಫಿಕ್ ಪೋಲೀಸ್…!!

ಬೆಳಗಾವಿ-ಬೆಳಗಾವಿಯ ಕಿಲ್ಲಾ ಕೆರೆಯಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ನೋಡಿದ ತಕ್ಷಣ ಉತ್ತರ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಕಾಶಿನಾಥ ಇರಗಾರ ಬ.ನಂ 1769 ರವರು ಒಂದು ಕ್ಷಣವೂ ಯೋಚಿಸದೇ ಕೆರೆಯಲ್ಲಿ ಜಿಗಿದು ಯುವತಿಯ ಪ್ರಾಣ ರಕ್ಷಿಸಿದ್ದಾರೆ. ಬೆಳಗಾವಿಯ ಅಶೋಕ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೋಲೀಸ್ ಕಾಶಿನಾಥ್ ಜೀವದ ಹಂಗು ತೊರೆದು ಕೆರೆಯಲ್ಲಿ ಜಿಗಿದು ಮಹಿಳೆಯನ್ನು ರಕ್ಷಣೆ ಮಾಡುವ ಮೂಲಕ ಜನ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಾರ್ವಜನಿಕ ವಲಯದಲ್ಲಿ ಇಲಾಖೆಯ ವರ್ಚಸ್ಸು …

Read More »

ಗೃಹಲಕ್ಷ್ಮೀ ಅರ್ಜಿಗೆ, ದುಡ್ಡು ಇಸ್ಕೊಂಡ್ರೆ,ಲಾಗಿನ್ ಐಡಿ ಖಲ್ಲಾಸ್….!!

ಬೆಳಗಾವಿ- ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸಲು ಅರ್ಜಿದಾರರಿಂದ ಹಣ ಪಡೆದ ಗ್ರಾಮ್ ಒನ್ ಒಡೆಯನಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಕ್ಕ ಪಾಠ ಕಲಿಸಿದ್ದು,ಅರ್ಜಿದಾರರಿಂದ ಹಣ ಪಡೆದ ದೂರುಗಳು ಬಂದಲ್ಲಿ ಯಾವುದೇ ಮುಲಾಜಿಲ್ಲದೇ ಗ್ರಾಮ್ ಒನ್ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುವದು ಎಂದು ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ಗ್ರಾಮ ಒನ್ ಸಿಬ್ಬಂದಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ ಎಂದು …

Read More »