ಬೆಳಗಾವಿ ಜಿಲ್ಲೆಗೆ ಮಿಠಾಯಿ
–₹೫೦ ಕೋಟಿ ವೆಚ್ಚದಲ್ಲಿ ಬೆಳಗಾವಿಯಲ್ಲಿ ಕಿದ್ವಾಯಿ ಆಸ್ಪತ್ರೆ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪಿಸುವುದು.
ಮಹದಾಯಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ₹ ೧ ಸಾವಿರ ಕೋಟಿ ಅನುದಾನ ಕಾಯ್ದಿರಿಸಲಾಗಿದೆ
-₹ ೯೨೭ ಕೋಟಿ ವೆಚ್ಚದಲ್ಲಿ ಧಾರವಾಡ- ಕಿತ್ತೂರು- ಬೆಳಗಾವಿ ನೂತನ ರೈಲು ಮಾರ್ಗ ಯೋಜನೆ ತ್ವರಿತ ಅನುಷ್ಠಾನಕ್ಕೆ ಕ್ರಮಗೊಳ್ಳುವುದು
-ಅಥಣಿ ತಾಲೂಕಿನಲ್ಲಿ ಕೃಷಿ ಕಾಲೇಜು ಸ್ಥಾಪಿಸುವುದು
– ಎಸ್‌ಸಿ, ಎಸ್‌ಟಿ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಲ್ಲಿ ಉನ್ನತ ವಿಧ್ಯಾಭ್ಯಾಸವನ್ನು ಪ್ರೋತ್ಸಾಹಿಸಲು ದೀನ ದಯಾಳ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸ್ಥಾಪನೆ
– ಮಹಿಳಾ ಮತ್ತು ಮಕ್ಕಳ ಇಲಾಖೆ ವತಿಯಿಂದ ಬೆಳಗಾವಿಯಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯ ಪ್ರಾರಂಭಿಸುವುದು.
– ಹಿಡಕಲ್ ಜಲಾಶಯ ಪ್ರದೇಶವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಿ, ಪಕ್ಷಿಗಳ ಹಾಗೂ ಚಿಟ್ಟೆಗಳ ಸಂರಕ್ಷಣೆಗಾಗಿ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಕ್ಷಿಧಾಮ ಹಾಗೂ ಚಿಟ್ಟೆಗಳ ಉದ್ಯಾನ ಸ್ಥಾಪಿಸುವುದು.
– ಬಂದೋಬಸ್ತ್ ಕರ್ತವ್ಯಕ್ಕೆ ಆಗಮಿಸುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಂಗಲು ಅನುಕೂಲವಾಗುವಂತೆ ಬೆಳಗಾವಿಯಲ್ಲಿ ಬ್ಯಾರಕ್ ನಿರ್ಮಿಸುವುದು
– ಚೆನ್ನೈ- ಬೆಂಗಳೂರು- ಮುಂಬಯಿ ಕಾರಿಡಾರ್ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗ, ದಾವಣಗೆರೆ, ಹಾವೇರಿ , ಧಾರವಾಡ ಮತ್ತು ಬೆಳಗಾವಿಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ತೇಜನ ನೀಡುವುದು
– ಖಾನಾಪುರ ತಾಲೂಕಿನ ಜಾಂಬೋಟಿ ಜೇನು ತುಪ್ಪ ಜನಪ್ರಿಯಗೊಳಿಸಲು ಮತ್ತು ಉತ್ಪಾದನೆ ಹೆಚ್ಚಿಸಲು ಸುಧಾರಿತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ ಜಾಗತಿಕ ಮಟ್ಟದಲ್ಲಿ ಬ್ರ್ಯಾಂಡಿಂಗ್ ಮಾಡುವುದು.
-ಸೀರೆ ಬ್ರ್ಯಾಂಡ್ ಆಗಿರುವ ಶಹಾಪುರ ಸೀರೆ ಮೈಕ್ರೋಕ್ಲಸ್ಟರ್ ಅಭಿವೃದ್ಧಿ ಪಡಿಸುವುದು.
-ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಹಾಗೂ ಬೆಳಗಾವಿ ತಾಲೂಕಿನ ಕಿಣಯೆ ನಾಲಾಗಳ ಆಧುನೀಕರಣ ಯೋಜನೆ ಪೂರ್ಣಗೊಳಿಸಲಾಗುವುದು
-ಸಾಮಾನ್ಯ ಸೌಲಭ್ಯ ಕೇಂದ್ರಗಳು ಮತ್ತು ಇತರ ಮೂಲ ಸೌಕರ್ಯಗಳನ್ನು ಒಳಗೊಂಡ ಬಹುಮಹಡಿ ಕಾರ್ಖಾನೆಯ ಪರಿಕಲ್ಪನೆಯ ಅವಶ್ಯಕ ಪ್ಲಗ್ ಮತ್ತು ಪ್ಲೇ ಮೂಲ ಸೌಲಭ್ಯಗಳನ್ನು ಬೆಳಗಾವಿಯಲ್ಲಿ ಕೇಂದ್ರ ಸರ್ಕಾರದ ಟಿಐಇಎಸ್ ಯೋಜನೆ ಸಹಯೋಗದೊಂದಿಗೆ ರೂಪಿಸಲಾಗುವುದು.