Breaking News

ಬೆಳಗಾವಿಯ ಸುವರ್ಣಸೌಧದಲ್ಲಿ ಈ ವರ್ಷವೇ ಚೆನ್ನಮ್ಮ, ರಾಯಣ್ಣನ ಪ್ರತಿಮೆ: ಬೊಮ್ಮಾಯಿ

ಬೆಂಗಳೂರು, ಅಕ್ಟೋಬರ್ 02: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಇದೇ ವರ್ಷ ಬೆಳಗಾವಿ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಸಮಾರಂಭ ಆಯೋಜಿಸಲಾಗಿತ್ತು. ಅದರಲ್ಲಿ ‘ಕಿತ್ತೂರು ಚೆನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮುಖ್ಯಮಂತ್ರಿಗಳ ಮಾತನಾಡಿದರು.
ಕಿತ್ತೂರು ಉತ್ಸವ ಪ್ರಾರಂಭವಾಗಿ 25ರಿಂದ 30 ವರ್ಷ ಆಗಿದೆ. ಮಧ್ಯೆ ಮಧ್ಯೆ ಕುಂಟುತ್ತಾ ಇದ್ದ ಉತ್ಸವಕ್ಕೆ ನಮ್ಮ ಸರ್ಕಾರ ಅಧಿಕೃತ ಆದೇಶದ ಮೂಲಕ ರಾಜ್ಯ ಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಣೆ ಮಾಡುತ್ತಿದೆ. ಹಿಂದೆ ತಾವು ಬೆಳಗಾವಿ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಹೆಚ್ಚಿನ ಅನುದಾನ ನೀಡಿ 3 ದಿನಗಳ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ್ದನ್ನು ಸ್ಮರಿಸಿದರು.

ಆಗ ಜ್ಯೋತಿ ಕಿತ್ತೂರಿನಿಂದ ಬೆಂಗಳೂರಿಗೆ ಚೆನ್ನಮ್ಮಳ ಸಂದೇಶ ಹೊತ್ತು ಬರುತ್ತಿತ್ತು. ಈಗ ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಕಿತ್ತೂರು ಸಂಸ್ಥಾನದ ರಾಜಧಾನಿ ಕಿತ್ತೂರಿಗೆ ಜ್ಯೋತಿ ಯಾತ್ರೆ ಬೆಳಸಿದೆ ಎಂದು ಅವರು ಹೇಳಿದರು.

ಸ್ವಾತಂತ್ರ್ಯ ಹೋರಾಟದ ಮೊದಲ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂಬುದಾಗಿ ನಮ್ಮ ಕರ್ನಾಟಕ ವಿಶ್ವವಿದ್ಯಾಲಯ ಗೆಜೆಟಿಯರ್ ನಲ್ಲಿ ಪ್ರಕಟಗೊಂಡಿದೆ. ಇದನ್ನು ರಾಷ್ಟ್ರೀಯ ಆರ್ಚೈವ್ಸ್ ದಾಖಲೆಗಳಿಗೂ ಸಹ ಕಳಿಸಿಕೊಟ್ಟು ನೋಂದಣಿ ಮಾಡಿಸುತ್ತೇವೆ.

ಕಿತ್ತೂರಿನ ಸಮಗ್ರ ಅಭಿವೃದ್ಧಿಗೆ ಕ್ರಮ; ಕಿತ್ತೂರಿನಲ್ಲಿ ಶಿಥಿಲಗೊಡಿರುವ ಈಗಿರುವ ಅರಮನೆಯನ್ನು ಗಟ್ಟಿಗೊಳಿಸಿ, ಪಕ್ಕದಲ್ಲೇ ಹೊಸ ಅರಮನೆಯನ್ನೂ ಕಟ್ಟಿಸಲು ತೀರ್ಮಾನ ಮಾಡಲಾಗಿದೆ. ಇದರ ಜತೆಗೆ ಕಿತ್ತೂರನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಬೈಲಹೊಂಗಲ, ಸಂಗೊಳ್ಳಿ ಸೇರಿದಂತೆ ಕಿತ್ತೂರು ಸಂಸ್ಥಾನದ ಪ್ರಾಚೀನ ಕುರುಹುಗಳನ್ನು ಅಭಿವೃದ್ಧಿಪಡಿಸುವ ಚಿಂತನೆ ಸರ್ಕಾರಕ್ಕಿದೆ ಎಂದು ವಿವರಿಸಿದರು.

Check Also

ವಿಧಾನಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ಪ್ರತಿಧ್ವನಿ

ಬೆಳಗಾವಿ – ವಿಧಾನಸಭೆಯಲ್ಲಿ ಮೊದಲ ದಿನವೇ ಪಂಚಮಸಾಲಿ ಮೀಸಲಾತಿ ಹೋರಾಟ ಪ್ರತಿಧ್ವನಿಸಿತುವಿಧಾನಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಬಳಿಕ ಸಭಾದ್ಯಕ್ಷರು …

Leave a Reply

Your email address will not be published. Required fields are marked *