ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೃಷ್ಣಾ ಮತ್ತು ಘಟಪ್ರಭಾ, ಸೇರಿದಂತೆ ಹಲವಾರು ನದಿಗಳ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಸೋಮವಾರ ಮುಖ್ಯಮಂತ್ರಿ ಸಿದ್ರಾಮಯ್ಯ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಮುಖ್ಯಮಂತ್ರಿ ಸಿದ್ರಾಮಯ್ಯ ಮತ್ರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ, ಹಲವಾರು ಜನ ಮಂತ್ರಿಗಳು ಮತ್ತು ಅಧಿಕಾರಿಗಳು ಸಿಎಂ ಜೊತೆಗೆ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 11-00 ಗಂಟೆಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸುವ ಅವರು,ಗೋಕಾಕ್ ಪಟ್ಟಣಕ್ಕೆ ತೆರಳಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಮತ್ತು ಕಾಳಜಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.
ನಂತರ ಕಾಗವಾಡ ತಾಲ್ಲೂಕಿನ ಜುಗೂಳ ಗ್ರಾಮ ಅದಾದಬಳಿಕ ಚಿಕ್ಕೋಡಿ ಮಾಂಜರಿಗೆ ತೆರಳಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನಿಡುವ ಮುಖ್ಯಮಂತ್ರಿ ಸಿದ್ರಾಮಯ್ಯ ಬೆಳಗಾವಿಯ ಪ್ರವಾಸಿ ಮಂದಿರಕ್ಕೆ ಬಂದು ರಾತ್ರಿ ಬೆಂಗಳೂರಿಗೆ ತೆರಳಲಿದ್ದಾರೆ.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					