ಬೆಳಗಾವಿ- ರಾಜಕೀಯ ಲಾಭಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸಂಘಟನೆ ಮಾಡಿ ದೇಶ ಭಕ್ತ ರಾಯಣ್ಣನ ಹೆಸರಿನಲ್ಲಿ ರಾಜಕಾರಣ ಮಾಡುವದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಕ್ಷೇಪ ವ್ಯೆಕ್ತಪಡಿಸಿದ್ದಾರೆ
ಬೆಳಗಾವಿಯ ಸಾಂಬ್ರಾ ವಿಮಾಣ ನಿಲ್ದಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಿಜೆಪಿ ನಾಯಕ ಈಶ್ವರಪ್ಪನವರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ರಾಯಣ್ಣ ಬ್ರಿಗೇಡ್ ಸ್ಥಾಪಿಸಿದ್ದಾರೆ ಆದರೆ ರಾಯಣ್ಣ ಕಿತ್ತೂರ ಸಂಸ್ಥಾನದಲ್ಲಿ ವೀರ ರಾಣಿ ಕಿತ್ತೂರ ಚನ್ನಮಾಜಿಯ ಬಲಗೈ ಬಂಟನಾಗಿ ಬ್ರಿಟೀಷರಿಗೆ ಚಳ್ಳೆ ಹಣ್ಣು ತಿನ್ನಿಸಿದ ಅಪ್ರತಿಮ ಭಕ್ತನಾಗಿದ್ದು ಅವರ ಹೆಸರಿನಲ್ಲಿ ರಾಜಕಾರಣ ಮಾಡುವದು ಸರಿಯಲ್ಲ ಎಂದು ಸಿಎಂ ತಿಳಿಸಿದರು
ಕಾಳ ಸಂತೆಯಲ್ಲಿ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪೌಡರ ಮಾರಾಟವಾಗುತ್ತಿರುವ ಬಗ್ಗೆ ಮಾದ್ಯಮ ಮಿತ್ರರು ಪ್ರಶ್ನಿಸಿದಾಗ ಈ ಕುರಿತು ತನಿಖೆ ಮಾಡಿಸಿ ತಪ್ಪಿತಸ್ಥರನ್ನು ಸಸ್ಪೆಂಡ ಮಾಡುವದಾಗಿ ಸಿಎಂ ಹೇಳಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ