Breaking News

ಬೆಳಗಾವಿಯಲ್ಲಿ ಎರಡು ದಿನ ಸಿಎಂ ಬೊಮ್ಮಾಯಿ..

ಬೆಳಗಾವಿ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್ 25,ಹಾಗೂ 26 ರಂದು ಎರಡು ದಿನ ಬೆಳಗಾವಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ನೂತನವಾಗಿ ಆಯ್ಕೆಯಾಗಿರುವ ಬಿಜೆಪಿ,ಶಾಸಕರು ಸಿಎಂ ಬೊಮ್ಮಾಯಿ ಅವರನ್ನು ಅಭಿನಂದಿಸಲು ಬೆಂಗಳೂರಿಗೆ ಹೋದ ಸಂಧರ್ಭದಲ್ಲಿ 25,ಹಾಗೂ26 ರಂದು ಎರಡು ದಿನ ಬೆಳಗಾವಿಯಲ್ಲೇ ಇರುತ್ತೇನೆ,ಬೆಳಗಾವಿ ಅಭಿವೃದ್ಧಿಗೆ ಸಮಂಧಿಸಿದ. ವಿಚಾರವನ್ನು ಅಲ್ಲೇ ಚರ್ಚೆ ಮಾಡೋಣ ಎಂದು ಸಿಎಂ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ ಆದ ಬಳಿಕ ಎರಡನೇಯ ಬಾರಿಗೆ ಬೆಳಗಾವಿಗೆ ಬರುತ್ತಿರುವ ಬಸವರಾಜ ಬೊಮ್ಮಾಯಿ ಬೆಳಗಾವಿ ನಗರ ಹಾಗೂ ಜಿಲ್ಲೆಯ ಅಭಿವೃದ್ಧಿ ಕುರಿತು ಸ್ಥಳೀಯ ನಾಯಕರ ಜೊತೆ ಚರ್ಚಿಸಿ ಹಲವು ನಿರ್ಧಾರಗಳನ್ನು ಬೆಳಗಾವಿಯಲ್ಲೇ ಪ್ರಕಟಿಸುವ ಸಾಧ್ಯತೆ ಇದೆ.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬೆಳಗಾವಿ ನಗರದ ಜನತೆ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರು ಬೆಳಗಾವಿ ನಗರದ ಅಭಿವೃದ್ಧಿಯ ಕುರಿತು ಹಲವು ಮಹತ್ವದ ಯೋಜನೆಗಳನ್ನು ಘೋಷಿಸುವ ಎಲ್ಲ ಸಾಧ್ಯತೆಗಳಿದ್ದು,ಶಾಸಕ ಅಭಯ ಪಾಟೀಲ ಮತ್ತು ಅನೀಲ ಬೆನಕೆ,ನಗರದ ಅಭಿವೃದ್ಧಿಗಾಗಿ ಸಿಎಂ ಬಳಿ ಯಾವ ಯೋಜನೆಗಳನ್ನು ಪ್ರಸ್ತಾಪ ಮಾಡಬೇಕು ಎನ್ನುವದರ ಬಗ್ಗೆ ಪಟ್ಟಿ ಸಿದ್ಧಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗಾವಿಯ ಹೈಟೆಕ್ ಬಸ್ ನಿಲ್ಧಾಣದ ಕಾಮಗಾರಿ,ಹಾಗೂ ಸೂಪರ್ ಸ್ಪೇಶ್ಯಾಲಿಟಿ ಆಸ್ಪತ್ರೆ ನಿರ್ಮಾಣದ ಕಾಮಗಾರಿಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವದು,ಜೊತೆಗೆ ಬೆಳಗಾವಿ ನಗರದಲ್ಲಿರುವ ಆಕ್ರಮ ಮನೆಗಳನ್ನು ಸಕ್ರಮಗೊಳಿಸುವ ವಿಚಾರಗಳು ಸಿಎಂ ಬಳಿ ಚರ್ಚೆಗೆ ಬರಲಿವೆ ಎಂದು ಹೇಳಲಾಗುತ್ತಿದೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *