ಸವದಿ ಸ್ಥಾನ ಖಾತ್ರಿ…ಗೆ ದ್ದ ಮೂವರು ಮಂತ್ರಿ…ಉಮೇಶ ಕತ್ತಿಗೂ ಲಾಟರಿ….!!!
ಬೆಳಗಾವಿ- ಉಪ ಸಮರದಲ್ಲಿ ಬೆಳಗಾವಿ ಜಿಲ್ಲೆಯಿಂದ ಗೆದ್ದ ಮೂವರಿಗೂ ಮಂತ್ರಿ ಮಾಡುತ್ತೇವೆ,ಡಿಸಿಎಂ ಸವದಿ ಅವರು ಮುಂದುವರೆಯುತ್ತಾರೆ ,ಜೊತೆಗೆ ಉಮೇಶ ಕತ್ತಿ ಅವರು ಮಂತ್ರಿ ಆಗ್ತಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಳಗಾವಿಯಲ್ಲಿ ಮಾಹಿತಿ ನೀಡಿದ್ದಾರೆ
ಇಂದು ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಿಸಿದ ಕಮಾಂಡ್ ಆ್ಯಂಡ ಕಂಟ್ರೋಲ್ ಸೆಂಟರ್ ಉದ್ಘಾಟಿಸಿ ಪತ್ರಿಕಾಗೋಷ್ಠಿ ನಡೆಸಿದ ಅವರು ,ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಜೊತೆ ಚರ್ಚಿಸಲು ನಾಳೆ ದೆಹಲಿಗೆ ಹೋಗುತ್ತೇನೆ,ವರಿಷ್ಠರ ಜೊತೆ ಚರ್ಚೆ ಮಾಡಿ ಬೆಂಗಳೂರಿಗೆ ಮರಳಿದ ಬಳಿಕ ಎರಡು ದಿನದಲ್ಲಿ ಸಚಿವ ಸಂಪುಟವನ್ನು ವಿಸ್ತರಣೆ ಮಾಡುತ್ತೇನೆ ಎಂದು ಸಿ ಎಂ ಹೇಳಿದರು.
ಲಕ್ಷ್ಮಣ ಸವದಿ ಅವರಿಗೆ ಎಂ ಎಲ್ ಸಿ ಮಾಡ್ತೀರಾ ? ಎಂದು ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಇಲ್ಲಾ ಅಂತಾ ಹೇಳಿದ್ದು ಯಾರು ? ಎಂದು ಮರು ಪ್ರಶ್ನಿಸಿ ದೆಹಲಿಯಿಂದ ಮರಳಿದ ಬಳಿಕ ಈ ಕುರಿತು ತೀರ್ಮಾನ ತೆಗೆದುಕೊಳ್ಳಿತ್ತೇನೆ,ಎಂದರು
ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ನಡೆಯುತ್ತಿವೆ ಕಾಮಗಾರಿಗಳ ಗುಣಮಟ್ಟ ಕಾಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ,ಸುವರ್ಣ ವಿಧಾನಸೌಧಕ್ಕೆ ಯಾವ ಯಾವ ಕಚೇರಿಗಳನ್ನು ಸ್ಥಳಾಂತರ ಮಾಡಬೇಕು ಅನ್ನೋದರ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳುವದಾಗಿಸಿಎಂ ಯಡಿಯೂರಪ್ಪ ಭರವಸೆ ನೀಡಿದರು
ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಅಂತಾರಾಜ್ಯ ಗಡಿ ವಿವಾದ ಹಾಗೂ ಮಹಾದಾಯಿ ಬಗ್ಗೆ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಮಹದಾಯಿ ಸಮಸ್ಯೆಯನ್ನು ಬಗೆಹರಿಸುತ್ತೇವೆ. ಮಹಾರಾಷ್ಟ್ರದ ಜತೆ ನೀರು ವಿನಿಮಯ ಕುರಿತು ದೆಹಲಿಯಲ್ಲಿ ಚರ್ಚೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಇಲ್ಲಿನ ಪ್ರವಾಸಿಮಂದಿರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದರು.
ಸುವರ್ಣ ವಿಧಾನಸೌಧದಲ್ಲಿ ಎರಡೂತಿಂಗಳಿಗೊಮ್ಮೆ ಸಚಿವ ಸಂಪುಟದ ಸಭೆ ನಡೆಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸ್ಮಾರ್ಟ್ ಸಿಟಿ ಒಳ್ಳೆಯ ಕೆಲಸ ಆಗಿದೆ. ಇನ್ನಷ್ಟು ಚುರುಕುಗೊಳಿಸಲು ಸೂಚನೆ ಸಾಮಾಜಿಕ, ಸಾಂಸ್ಕೃತಿಕ ವಾಗಿ ಆರ್ಥಿಕವಾಗಿಯ ರಾಜ್ಯದ ಪ್ರಮುಖ ನಗರವಾಗಿ ಬೆಳೆದಿದೆ.
ಸ್ಮಾರ್ಟ್ ಸಿಟಿಯಡಿ ಕಮಾಂಡ್ ಸೆಂಟರ್ ಸ್ಥಾಪನೆ ಶ್ಲಾಘನೀಯ ಎಂದರು.
ಸಂಚಾರ ದಟ್ಟಣೆ ನಿರ್ವಹಣೆ ವಿನೂತನ ಪ್ರಯತ್ನ. ಗುಣಮಟ್ಟದ ಕಾಮಗಾರಿ ಸೂಚನೆ ನೀಡಲಾಗಿದೆ.
ಪ್ರವಾಹದಿಂದ ಉಂಟಾಗಿರುವ ಹಾನಿ ಸರಿಪಡಿಸಲು ಮೂಲಸೌಕರ್ಯಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ೮೬೫ ಕೋಟಿ ಬಿಡುಗಡೆ ಮಾಡಿದೆ.
ನಾಳೆ ದೆಹಲಿಗೆ ಪ್ರಯಾಣ:
ನಾಳೆ ದೆಹಲಿಗೆ ಪ್ರಯಾಣ. ರಾಷ್ಟ್ರೀಯ ಅಧ್ಯಕ್ಷರ ಭೇಟಿ ಎರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಗೆದ್ದಿರುವವರಿಗೆ ಮಂತ್ರಿ ಸ್ಥಾನ. ಒಬ್ಬಿಬ್ಬರನ್ನು ಕೈಬಿಡುವ ಬಗ್ಗೆ ಹೈಕಮಾಂಡ್ ನಿರ್ದೇಶನದ ಮೇರೆಗೆ ಕ್ರಮ ವಹಿಸಲಾಗುತ್ತದೆ.
ಈಗಿರುವ ಉಪ ಮುಖ್ಯಮಂತ್ರಿಗಳು ಮುಂದುವರಿಯಲಿದ್ದಾರೆ. ಹೊಸದಾಗಿ ಉಪ ಮುಖ್ಯಮಂತ್ರಿ ಸ್ಥಾನ ಇರುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ,
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ, ದುರ್ಯೋಧನ ಐಹೊಳೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.
***