ಬೆಳಗಾವಿ-೨೦೨೩ರ ವಿಧಾನಸಭೆ ಚುನಾವಣೆಯಲ್ಲಿ ನಕಾಂಗ್ರೆಸ್ ಅಧಿಕಾರಕ್ಕೆ ತರುವ ಉದ್ದೇಶದಿಂದ ಜನವರಿ ೧೧ ರಿಂದ ಬೆಳಗಾವಿಯಿಂದ ಕಾಂಗ್ರೆಸ್ ನಾಯಕರ ಬಸ್ ಯಾತ್ರೆಯನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು.
ಬಸ್ ಯಾತ್ರೆ, ಕೃಷ್ಣಾ, ಮಹದಾಯಿ ಯೋಜನೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯದ ಬಗ್ಗೆ ಹಮ್ಮಿಕೊಂಡಿರುವ ಸಮಾವೇಶ ಕುರಿತು ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೃಷ್ಣಾ, ಮಹದಾಯಿ ನೀರಾವರಿ ಯೋಜನೆಗೆ ಸಂಬಂಧಿಸಿದೆತ ಡಿ. ೩೦ ರಂದು ವಿಜಯಪುರ, ಜನವರಿ ೨ ರಂದು ಹುಬ್ಬಳ್ಳಿ-ಧಾರವಾಡದಲ್ಲಿ ಹೋರಾಟ ಮಾಡಲಾಗುವುದು. ಜ. ೮ ರಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಎಸ್‌ಸಿ, ಎಸ್‌ಟಿ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದರು.
ಪಕ್ಷದ ಎಲ್ಲ ನಾಯಕರೊಂದಿಗೆ ರಾಜ್ಯಾದ್ಯಂತ ಬಸ್ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಬಸ್‌ಯಾತ್ರೆಯನ್ನು ೧೧ ರಂದು ಬೆಳಗಾವಿಯಿಂದ ಆರಂಭಿಸಲಾಗುವುದು. ಮಹತ್ಮಾಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಮಾತ್ರ ಕಾಂಗ್ರೆಸ್ ಅಧಿವೇಶನ ನಡೆದಿದೆ. ಸ್ವಾತಂತ್ರ್ಯದ ಬಂದ ಇತಿಹಾಸವಿದೆ. ರಾಜ್ಯಮದಲ್ಲಿ ಮತ್ತೆ ಜನಪರವಾದ ಕಾಂಗ್ರೆಸ್ ಸರ್ಕಾರ ಬರಬೇಕಿದೆ ಎಂದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ