ಫಸಲ್ ಭಿಮಾ ಯೋಜನೆಯಲ್ಲಿ ಬ್ರಷ್ಟಾಚಾರ ಕಾಂಗ್ರೆಸ್ ಕಿಸಾನ್ ಸೆಲ್ ಆರೋಪ

ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿರುವ ಫಸಲ ವಿಮಾ ಯೋಜನೆಯಲ್ಲಿ ರಾಷ್ಟ್ರದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಈ ಕುರಿತು ಸಿಬಿಐಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಹಲವು ಸಂಶಯಕ್ಕೆ ಎಡೆಮಾಡಿಕೊಡುತ್ತಿದೆ ಎಂದು  ಕೆಪಿಸಿಸಿ ಕಿಸಾನ ಅಧ್ಯಕ್ಷ ಸಚಿನ ಮೀಗಾ ಆರೋಪಿಸಿದರು.
ಶುಕ್ರವಾರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಪ್ರಧಾನಿ ಮೋದಿ ಅವರು ಬೆಳಗಾವಿಗೆ ಆಗಮಿಸಿ ಫಸಲ ವಿಮಾ ಯೋಜನೆಯಲ್ಲಿ ಜಾರಿಗೆ ತಂದಿದ್ದರು. ಅದರಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಖಾಸಗಿ ಸಂಸ್ಥೆಯ ವರದಿಮಾಡಿದೆ. ಇದರ ಆಧಾರದ ಮೇಲೆ ನಮ್ಮ ಸಂಘಟನೆ ಸಿಬಿಐಗೆ ದೂರು ನೀಡಿ 60 ದಿನ ಕಳೆದರೂ ಯಾವುದೇ ಕ್ರಮಕೈಗೊಂಡಿಲ್ಲ. ಸಿಬಿಐ ಮೇಲೆ ಪ್ರಧಾನಿ ಒತ್ತಡ ಹಾಕುತ್ತಿದ್ದಾರೆ ಎಂಬ ಸಂಶೆಯ ವ್ಯಕ್ತವಾಗುತ್ತಿದೆ ಎಂದರು.

ಕಳಸಾ-ಬಂಡೂರಿ, ಮಹದಾಯಿ ವಿಚಾರದಲ್ಲಿ ಬಿಜೆಪಿಯವರು ಗೋವಾದಿಂದ ಪತ್ರ ತೆಗೆದುಕೊಂಡು ಉತ್ತರ ಕರ್ನಾಟಕದ ಜನತೆಗೆ ನೀರು ಕೊಡುತ್ತೇವೆ ಎಂದು ಯಡಿಯೂರಪ್ಪನವರು ಪೊಳ್ಳು ಭರವಸೆ ನೀಡಿದ್ದಾರೆ ಎಂದರು.
ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಬಿಜೆಪಿ ಮುಖಂಡರು ರಾಜಕೀಯ ಮಾಡುತ್ತಿದ್ದಾರೆ. ಯಡಿಯೂರಪ್ಪ ಗೋವಾದ ಒಂದು ಪತ್ರ ಹಿಡಿದುಕೊ‌ಂಡು ಉತ್ತರ ಕರ್ನಾಟಕದ ಜನಕ್ಕೆ ನೀರುಕೊಡುತ್ತೇನೆ ಎಂದು ಹೇಳಿ ಮೋಸ ಮಾಡಿದ್ದಾರೆ. ಮಹದಾಯಿ ನದಿ‌ ನೀರು ಹಂಚಿಕೆಯಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದರು.

ರಾಷ್ಟ್ರದ ಎಐಸಿಸಿ ಅಧ್ಯಕ್ಷ ರಾಹುಲ ಗಾಂಧಿ ಬಸ್ ನಲ್ಲಿ ಪ್ರವಾಸ ಹಮ್ಮಿಕೊಂಡ ಹಿನ್ನೆಲೆಯಲ್ಲಿ ರೈತರೊಂದಿಗೆ ಸಂವಾದ ಮಾಡುವುದಾಗಿ ಸಂದೇಶ ರವಾನಿಸಿದ್ದಾರೆ.
ಹೈದರಾಬಾದ್ ಕರ್ನಾಟಕ ಹಾಗೂ ಬೆಳಗಾವಿಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಆ ಸಂದರ್ಭದಲ್ಲಿ ಎಲ್ಲ ವಿಷಯವನ್ನು ಅವರ ಮುಂದೆ ಇಡಲಾಗುವುದು ಎಂದರು.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *