ಬೆಂಗಳೂರು :ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವ ದಿನೇಶ್ ಗುಂಡೂರಾವ್ ಒಂದು ವೇಳೆ ಕೃತಕ ಬಣ್ಣದ ಕಾಟನ್ ಕ್ಯಾಂಡಿ ಮಾರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಬಣ್ಣ ಬಳಸದ ಕಾಟನ್ ಕ್ಯಾಂಡಿ ಮಾರಬಹುದು ಎಂದಿದ್ದಾರೆ. ಸದ್ಯಕ್ಕೆ ಗೋಬಿ ಮಂಚೂರಿ ನಿಷೇಧಿಸಿಲ್ಲ. ಆದರೆ ಕೃತಕ ಬಣ್ಣ ಬಳಸಿದ್ದು ಗೊತ್ತಾದರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಅಪಾಯಕಾರಿಯಾದ ಕಾಟನ್ ಕ್ಯಾಂಡಿ ಬ್ಯಾನ್ ಆಗಿದೆ. ಇನ್ನು ಗೋಬಿ ಮಂಚೂರಿಗೆ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುತ್ತದೆ. ಕ್ಯಾಂಡಿ ಬ್ಯಾನ್ ಮಾರಾಟ ಮಾಡಿದರೇ ಮತ್ತು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣ ಬಳಸಿದರೇ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.
ಕಲರ್ ಕಾಟನ್ ಕ್ಯಾಂಡಿಯನ್ನು ರಾಜ್ಯದಲ್ಲಿ ಬ್ಯಾನ್ ಮಾಡಲಾಗಿದ್ದು, ಗೋಬಿ ಮಂಚೂರಿಯಲ್ಲೂ ಕೃತಕ ಬಣ್ಣ ಬಳಸುವಂತಿಲ್ಲ ಎಂದು ಹೇಳಿದರು.
ಕಾಟನ್ ಕ್ಯಾಂಡಿಯಲ್ಲಿ ಬಳಸುವ ಬಣ್ಣದಲ್ಲಿ ಅಪಾಯಕಾರಿ ಅಂಶಗಳಿವೆ. ಅದನ್ನು ಬ್ಯಾನ್ ಮಾಡಲಾಗುತ್ತದೆ. ಆದರೆ ಬಣ್ಣ ಬಳಸದೆ ತಯಾರಿಸುವ ಕಾಟನ್ ಕ್ಯಾಂಡಿಗೆ ಅವಕಾಶವಿದೆ.ಒಂದು ವೇಳೆ ಕಲರ್ ಕಾಟನ್ ಕ್ಯಾಂಡಿ ಮಾರಿದರೆ ಕಾನೂನು ರೀತಿಯ ಕ್ರಮ ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.
ಪ್ರಸಿದ್ಧ ಖಾದ್ಯ ಗೋಬಿ ಮಂಚೂರಿಯು ಸಸ್ಯಹಾರಿ ಪದಾರ್ಥವಾದ ಕಾರಣ ಅದನ್ನು ಬ್ಯಾನ್ ಮಾಡಲಾಗದು. ಆದರೆ ಅದಕ್ಕೆ ಕೃತಕ ಬಣ್ಣ ಬಳಸುವಂತಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ 171 ಗೋಬಿ ಮಂಚೂರಿಯನ್ ಸ್ಯಾಂಪಲ್ ಸಂಗ್ರಹ ಮಾಡಲಾಗಿದೆ. ಅದರಲ್ಲಿ 107 ಸ್ಯಾಂಪಲ್ ನಲ್ಲಿ ಕೃತಕ ಬಣ್ಣ ಪತ್ತೆಯಾಗಿದೆ. ಗೋಬಿ ಮಂಚೂರಿಯನ್ ನಲ್ಲಿ ಟಾರ್ ಟ್ರಾಸೈನ್, ಸಮ್ ಸೆಟ್ ಯೆಲ್ಲೋ ಮತ್ತು ಕಾರ್ಮಿಸನ್ ಬಳಕೆ ಮಾಡಲಾಗಿದೆ ಎಂದರು.
ಗೋಬಿ ಮಂಚೂರಿಯನ್ನು ನಿಷೇಧಿಸುತ್ತಿಲ್ಲ. ಆದರೆ ಕೃತಕ ಬಣ್ಣ ಬಳಕೆ ಮಾಡುವಂತಿಲ್ಲ. ಒಂದು ವೇಳೆ ಕೃತಕ ಬಣ್ಣ ಬಳಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ