ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ನೂರರ ಗಡಿ ದಾಟಿದ ಕೋವಿಡ್ ಸೋಂಕಿತ ಪ್ರಕರಣಗಳು…!
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ ಆಗಿದ್ದು ನೂರರ ಗಡಿದಾಟಿದೆ. ಜಿಲ್ಲೆಯಲ್ಲಿ ಮತ್ತೆ ಕೊರೊನಾ ಆತಂಕದ ಭೀತಿ ಎದುರಾಗಿದ್ದು ಜಿಲ್ಲಾಡಳಿತ ಅನಾಹುತ ಸಂಭವಿಸುವ ಮುನ್ನವೇ ಎಚ್ಚೆತ್ತುಕೊಳ್ಳಬೇಕಿದೆ.
ಬೆಳಗಾವಿ ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿರುವ ಇಂದಿನ ಕೋವಿಡ್ ಬುಲೆಟಿನ್ ನಲ್ಲಿ 110ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ. ಅಥಣಿಯಲ್ಲಿ 12, ಬೆಳಗಾವಿ ತಾಲೂಕಿನಲ್ಲಿ 14, ಹುಕ್ಕೇರಿ 02, ಚಿಕ್ಕೋಡಿ, ಗೋಕಾಕ,ಖಾನಾಪೂರ, ಸವದತ್ತಿ ತಾಲೂಕಿನಲ್ಲಿ ತಲಾ 5 ಸೋಂಕಿತ ಪ್ರಕರಣಗಳು ದಾಖಲಾಗಿದ್ದರೆ ರಾಮದುರ್ಗ ತಾಲೂಕಿನಲ್ಲಿ ಅತಿಹೆಚ್ಚು 62 ಸೋಂಕಿತ ಪ್ರಕರಣ ದಾಖಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 331 ಸಕ್ರಿಯ ಪ್ರಕರಣಗಳಿದ್ದು ಇನ್ನೂ 1449ಜನರ ಕೋವಿಡ್ ವರದಿ ಬರಬೇಕಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕಳೆದ ಒಂದು ವಾರಗಳಿಂದ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ನಿರಂತರವಾಗಿ ಏರುತ್ತಿದ್ದು ಅನಾಹುತ ಸಂಭವಿಸುವ ಮುನ್ನವೇ ಬೆಳಗಾವಿ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಿದೆ.