ಹಳೇ ವೈಷಮ್ಯದ ಕಾರಣ 13 ಜನ ಸೇರುಕೊಂಡು ಬೀಯರ್ ಬಾಟಲಿ,ಹಾಗೂ ಕುಡುಗೋಲಿನಿಂದ ಯುವಕನ ಮೇಲೆ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ.
ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನ ಮರ್ಡರ್ ಆಗಿದೆ ಎಂದು ಹೇಳಲಾಗುತ್ತಿದೆ.ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಶಾಲಾ ಮೈದಾನದಲ್ಲಿ ಈ ಘಟನೆ ನಡೆದಿದೆ.ರವಿ ತಿಮ್ಮನ್ನವರ್ (23) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.
ಕುಡಗೋಲು, ಬೀರ್ ಬಾಟಲಿಯಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.13ಕ್ಕೂ ಹೆಚ್ಚು ದುಷ್ಕರ್ಮಿಗಳಿಂದ ನಡೆದ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನನ್ನು,ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನೊಪ್ಪಿದ್ದಾನೆ.
ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿ ತನಿಖೆ ಶುರುವಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ