ಬೆಳಗಾವಿ- ಮದುವೆ ಮಾಡಿಕೊಂಡ ಮೂರು ತಿಂಗಳಲ್ಲೇ ಬೀರುಗಾಳಿ ಬೀಸಿತು ಬದುಕೆಂಬ ಹಡಗು ಮುಳುಗಿತು.ಮೂರು ತಿಂಗಳಲ್ಲೇ ಅವಳು ಇಹಲೋಕ ತ್ಯಜಿಸಿದ್ದು ಯ್ಯಾಕೆ..? ಎನ್ನುವ ಪ್ರಶ್ನೆಗೆ ಪೋಲೀಸರು ಉತ್ತರ ಹುಡುಕಬೇಕಾಗಿದೆ.
ಮೂರು ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ವಿವಾಹಿತ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿಧ್ರಾವಕ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆದಿದೆ.
19 ವರ್ಷದ ಜ್ಯೋತಿ ಚೋಪ್ಡೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಳೆದ ಮೂರು ತಿಂಗಳ ಹಿಂದಷ್ಟೇ ಉಚಗಾಂವ ಮೂಲದ ಕಟ್ಟಡ ಕಾರ್ಮಿಕ ನಾಗಿ ಕೆಲಸ ಮಾಡುತ್ತಿದ್ದ ನಿಖಿಲ ಚೋಪ್ಡೆ ಎಂಬುವರ ಜೊತೆ ಅದ್ಧೂರಿಯಾಗಿ ಮದುವೆ ಮಾಡಿಕೊಂಡಿದ್ದರು. ಕಳೆದ ಹಲವು ದಿನಗಳ ಹಿಂದಷ್ಟೇ ತವರು ಮನೆಗೆ ಬಂದಿದ್ದಳು. ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ
. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕಾಕತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ