ಬೆಳಗಾವಿ-ಬೆಳಗಾವಿ- ಇತ್ತೀಚಿಗೆ ಯಕ್ಸಂಬಾದಲ್ಲಿ ಇಬ್ಬರು ಪೋಲೀಸ್ ಪೇದೆಗಳ ಜೊತೆ ನಡೆದ ಗಲಾಟೆಗೆ ಸಮಂಧಿಸಿದಂತೆ ಹಲ್ಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಸಿ ಆ ಪಿ ಎಫ್ ಯೋಧನಿಗೆ ಜಾಮೀನು ಸಿಕ್ಕಿದೆ.
*ಚಿಕ್ಕೋಡಿ 1ನೇ ಜೆಎಂಎಫ್‌ಸಿ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿಯ 1ನೇ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ನೀಡಿದೆ. ಮಾಸ್ಕ್ ಹಾಕದ ವಿಚಾರಕ್ಕೆ ಪೇದೆ – ಸಿಆರ್‌ಪಿಎಫ್ ಯೋಧನ ಮಧ್ಯೆ ಗಲಾಟೆ ನಡೆದಿತ್ತು ಕರ್ತವ್ಯನಿರತ ಪೇದೆ ಮೇಲೆ ಹಲ್ಲೆ ಆರೋಪದಡಿ ಸಿಆರ್‌ಪಿಎಫ್ ಯೋಧನ ಬಂಧನವಾಗಿತ್ತು
ಏಪ್ರಿಲ್ 23ರಂದು ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ನಡೆದಿದ್ದ ಘಟನೆ ಯೋಧನ ಕೈಗೆ ಕೋಳ ಹಾಕಿದ್ದ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು
ಬೆಳಗಾವಿ ಜಿಲ್ಲೆ ಸದಲಗಾ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು
ಜಾಮೀನು ಆದೇಶದೊಂದಿಗೆ ವಕೀಲರು ಚಿಕ್ಕೋಡಿಯಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಪ್ರಯಾಣ ಬೆಳೆಸಿದ್ದು ಒಂದು ಗಂಟೆಯಲ್ಲಿ ಯೋಧನ ಬಿಡುಗಡೆಯಾಗಲಿದೆ.