Breaking News

ಬೆಳಗಾವಿ ಪಕ್ಕದ ಪೀರನವಾಡಿಗೂ ಪಸರಿಸಿದ ಕಿಲ್ಲರ್ ಕೊರೊನಾ…!!

 

ಬೆಳಗಾವಿ-ಇಂದು ಬೆಳಗಾವಿಯಲ್ಲಿ ಹೊಸದಾಗಿ ಪತ್ತೆಯಾಗಿರುವ ಕೊರೋನಾ ಸೊಂಕಿತ ಪೀರನವಾಡಿ ಗ್ರಾಮದವನಾಗಿದ್ದು ಜಿಲ್ಲಾಧಿಧಿಕಾರಿಗಳು ಮೂರು ಕಿಲೋ ಮೀ ಪ್ರದೇಶವನ್ನು ಬಫರ್ ಝೋನ್ ಅನ್ನಾಗಿ ಪರಿವರ್ತಿಸಿ ಆದೇಶಿಸಿದ್ದಾರೆ

ಈತ ಒಬ್ಬನೇ ದೇಹಲಿಗೆ ಹೋಗಿ ಬಂದಿದ್ದ ಇಂದು ಬೆಳಿಗ್ಗೆ ಪೀರನವಾಡಿಯ ಈ ವ್ಯೆಕ್ತಿಗೆ ಕೊರೋನಾ ಸೊಂಕು ಇರುವದು ದೃಡವಾದ ಹಿನ್ನಲೆಯಲ್ಲಿ ಹತ್ತು ವರ್ಷ ದ ಮಗು ಮತ್ತು ಮನೆಯ ಎಲ್ಲ ಸದಸ್ಯ ರನ್ನು ಕ್ವಾರಂಟೈನ್ ಮಾಡಲಾಗಿದೆ.

ಕರೊನಾ ಸೋಂಕು ಪತ್ತೆ: ಪೀರನವಾಡಿ ಗ್ರಾಮ ಕಂಟೈನ್ಮೆಂಟ್ ಝೋನ್ ಆಗಿ ಜಿಲ್ಲಾಧಿಕಾರಿ ಘೋಷಣೆ

: ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಪೀರನವಾಡಿ ಗ್ರಾಮದಲ್ಲಿ ಕರೊನಾ ವೈರಸ್ ಸೋಂಕು ದೃಢಪಟ್ಟಿರುವುದರಿಂದ(ಪಾಸಿಟಿವ್) ಸದರಿ ಗ್ರಾಮದ ಭೌಗೋಳಿಕ ಪ್ರದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶವಾಗುವವರೆಗೆ ನಿಷೇಧಿತ(ಕಂಟೈನ್ಮೆಂಟ್ ಝೋನ್) ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

ಈ ಗ್ರಾಮದ ನಿವಾಸಿಗಳ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಸಂಬಂಧಿಸಿದ ಗ್ರಾಮದ ಭೌಗೋಳಿಕ ಪ್ರದೇಶವನ್ನು ನಿಷೇಧಿತ ಪ್ರದೇಶ (Containment Zone) ಎಂದು ಘೋಷಿಸಲಾಗಿದೆ. ಅದರಂತೆ ನಿಷೇಧಿತ ಪ್ರದೇಶದ ಹೊರಗಿನ 2 ಕಿ.ಮೀ. ವ್ಯಾಪ್ತಿಯನ್ನು (Buffer Zone) ಎಂದು ಘೋಷಿಸಲಾಗಿದೆ.

ಗ್ರಾಮದ 3 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ವ್ಯಕ್ತಿ/ ಜನರು ಕಾಲ್ನಡಿಗೆ, ಇನ್ಯಾವುದೋ ವಾಹನಗಳ ಮೂಲಕ ಒಳ ಪ್ರವೇಶಿಸುವುದು ಹಾಗೂ ನಿರ್ಗಮಿಸುವುದನ್ನು ನಿರ್ಬಂಧಿಸಲಾಗಿದೆ. ಕರ್ತವ್ಯ ನಿರತ ವಾಹನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ.

ಸದರಿ ನಿಷೇಧಿತ ಪ್ರದೇಶಗಳ ೩ ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲ ನಿವಾಸಿಗಳು ಮುಂದಿನ ಆದೇಶವಾಗುವರೆಗೆ ತಮ್ಮ ಮನೆಯಲ್ಲಿಯೇ ಇದ್ದುಕೊಂಡು ಆರೋಗ್ಯ ಇಲಾಖೆ ಅಧಿಕಾರಿಗಳು ನೀಡುವ ಸಲಹೆ ಸೂಚನೆಗಳನ್ನು ತಪ್ಪದೆ ಪಾಲಿಸಿಕೊಂಡು ಬರಬೇಕು, ಸದರಿ ನಿಷೇಧಿತ ಪ್ರದೇಶಗಳ 3 ಕಿ.ಮೀ. ವ್ಯಾಪ್ತಿಯಲ್ಲಿರುವ ನಿವಾಸಿಗಳು ತಮ್ಮ ಬಡಾವಣಿಯ ಓಣಿಯ ಗಲ್ಲಿಯಲ್ಲಿ ಶುಚಿತ್ವವನ್ನು ತಪ್ಪದೆ ಕಾಪಾಡಿಕೊಂಡು ಬರಬೇಕು.
ನಿಷೇಧಿತ ಪ್ರದೇಶಗಳ ೩ ಕೀ.ಮೀ. ವ್ಯಾಪ್ತಿಯಲ್ಲಿ ಐದಕ್ಕೂ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ, ಧಾರ್ಮಿಕ ಉತ್ಸವ, ಉರುಸು, ಮದುವೆ, ಕ್ರೀಡೆ, ಸಂತೆ, ಜಾತ್ರೆ, ಸಮ್ಮೇಳನ,ನಾಟಕೋತ್ಸವ, ವಿಚಾರ ಗೋಷ್ಟಿ ಮುಂತಾದವುಗಳನ್ನು ಜರುಗಿಸುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ನಿಷೇಧಿತ ಪ್ರದೇಶದಲ್ಲಿನ ಎಲ್ಲಾ ಕಚೇರಿಗಳು (ಸರಕಾರಿ ಕಚೇರಿಗಳನ್ನು ಹೊರತುಪಡಿಸಿ), ಅಂಗಡಿ, ಮಳಿಗೆ, ದಾಸ್ತಾನು ಕೇಂದ್ರಗಳನ್ನು (ದಿನಸಿ, ಹಾಲು, ಹಣ್ಣು, ತರಕಾರಿ ಮತ್ತು ಔಷಧಿ ಅಂಗಡಿಗಳು ಹೊರತುಪಡಿಸಿ) ಮುಚ್ಚುವುದು.
ಅಗತ್ಯ ವಸ್ತುಗಳಾದ (ದಿನಸಿ, ಹಾಲು, ಹಣ್ಣು ಮತ್ತು ತರಕಾರಿಗಳನ್ನು ಪ್ರತಿದಿನ ಬೆಳಿಗ್ಗೆ ೮ ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಖರೀದಿಸಲು
ಅವಕಾಶವಿರುತ್ತದೆ.

ಆಗತ್ಯ ವಸ್ತುಗಳನ್ನು ಖರೀದಿಸುವ ಸ್ಥಳದಲ್ಲಿ ಆರೋಗ್ಯದ ಹಿತದೃಷ್ಟಿಯಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯಗೊಳಿಸಿದೆ.

ಈ ಗ್ರಾಮದ ಎಲ್ಲಾ ಮನೆಗಳಲ್ಲಿ ಸದಸ್ಯರು ಅವರ ಮನೆ ಬಿಟ್ಟು ಹೊರಗಡೆ ತಿರುಗಾಡುವಂತಿಲ್ಲ ಮತ್ತು ಇತರರ ಮನೆಗಳಿಗೆ ಹೋಗುವಂತಿಲ್ಲ. ಸದರಿ ಪ್ರದೇಶದಲ್ಲಿರುವ ಎಲ್ಲಾ ಮನೆಗಳ ಸದಸ್ಯರು ಗೃಹ ಸಂಪರ್ಕ ತಡೆ (HomeQuarantine) ಯಲ್ಲಿರುವುದು.

ಗ್ರಾಮದಲ್ಲಿ ವಾಸಿಸುತ್ತಿರುವ ಜನರ ಆರೋಗ್ಯವನ್ನು ಆರೋಗ್ಯ ಇಲಾಖೆಯು ತಂಡಗಳನ್ನು ರಚಿಸಿಕೊಂಡು ಪರಿಶೀಲಿಸಬೇಕು.

ನಿಷೇಧಿತ ಪ್ರದೇಶದ ಹೊರಗಿನ ೨ ಕಿ.ಮೀ. ವ್ಯಾಪ್ತಿಯನ್ನು ಬಫರ್ ಝೋನ್ ಎಂದು ಘೋಷಿಸಲಾಗಿರುವುದರಿಂದ ಆರೋಗ್ಯದ ದೃಷ್ಟಿಯಿಂದ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಬೇಕು.

ಸದರಿ ಆದೇಶವನ್ನು ಮತ್ತು ಸೂಚನೆಗಳನ್ನು ಕಟ್ಟುನಿಟ್ಟಾಗಿ ಕಾರ್ಯಗತಗೊಳಿಲು ಪೀರನವಾಡಿ ಪಂಚಾಯತ ಅಭಿವೃದ್ಧಿ ಅಧಿಕಾರಿಯನ್ನು ನೋಡಲ್ ಅಧಿಕಾರಿ ಎಂದು ಜಿಲ್ಲಾಧಿಕಾರಿಗಳು ನೇಮಿಸಿದ್ದಾರೆ.

ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಹಯೋಗದೊಂದಿಗೆ ಸದರಿ ಆದೇಶ ಜಾರಿಗೆ ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಸದರಿ ಆದೇಶಗಳನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ರ ಪ್ರಕಾರ ಕ್ರಮ‌ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.
***

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *