ಬೆಳಗಾವಿ : ಸರಕಾರಿ ವಿವಿಧ ವಸತಿ ಶಾಲೆ ಮತ್ತು ವಸತಿ ನಿಯಗಳಲ್ಲಿ ವ್ಯಾಸಾಂಗ್ಯ ಮಾಡಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪ್ರತಿಭಾನ್ವಿತ 574 ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಿಸುವ ಸಲುವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ.ಎಸ್. ತಿಳಿಸಿದರು.
ಅವರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅವರು, 2017-18ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಶೇ.91ಕ್ಕಿಂತ ಮತ್ತು ದ್ವೀತಿಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿ ಅಗ್ರಶೇಯಾಂಕವನ್ನು ಪಡೆದ ಸಮಾಜ ಕಲ್ಯಾಣ , ಹಿಂದುಳಿದ ವರ್ಗಗಳ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳು ಮತ್ತು ಸರ್ಕಾರಿ ವಸತಿ ಶಾಲೆಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಸನ್ಮಾನಿಸುವ ಸಮಾರಂಭವನ್ನು ಖಾಸಗಿ ಪ್ರಯೋಜಕತ್ವದಲ್ಲಿ ಆಯೋಜಿಸಲಾಗುತ್ತಿದೆ ಎಂದರು.
ಜಿಲ್ಲೆಯ ವಿವಿಧ ಇಲಾಕೆ ಅಧಿಕಾರಿಗಳ ದೇಣಿಗೆ ಮತ್ತು ದಾನಿಗಳ ಸಹಭಾಗಿತ್ವದಲ್ಲಿ ನಡೆಸುತ್ತಿರುವ ಕಾರ್ಯಕ್ರಮ ಸರ್ಕಾರೇತರ ಕಾರ್ಯಕ್ರಮವಾಗಿದೆ. ಜೂ.21ರಂದು ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಬೆಳಗ್ಗೆ 10ಗಂಟೆಗೆ ನಡೆಯುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಚಿವ ರಮೇಶ ಜಾರಕಿಹೊಳಿ, ಸಂಸದರು, ಶಾಸಕರು ಭಾಗವಹಿಸಲಿದ್ದಾರೆ ಎಂದು ಡಿಸಿ ಜಿಯಾವುಲ್ಲಾ.ಎಸ್.ತಿಳಿಸಿದರು.
ಜಿಪಂ ಸಿಇಒ ಆರ್.ರಾಮಚಂದ್ರನ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಬೂದೆಪ್ಪಾ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.