ಬೆಳಗಾವಿ- ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ್ ಕತ್ತಿ ಮಂತ್ರಿಸ್ಥಾನಕ್ಕಾಗಿ ದೆಹಲಿಯಲ್ಲಿ ಲಾಭಿ ನಡೆಸಿದ್ದರೆ,ಇತ್ತ ಬೆಂಗಳೂರಿನಲ್ಲಿ ಡಿಸಿಂ ಲಕ್ಷ್ಮಣ ಸವದಿ ತಮ್ಮ ಸ್ಥಾನ ಭದ್ರ ಪಡಿಸಿಕೊಳ್ಳಲು ಪರದಾಡುತ್ತಿದ್ದಾರೆ.
ಫೆಬ್ರುವರಿ 17 ರಂದು ವಿಧಾನ ಪರಿಷತ್ತಿನ ಚುನಾವಣೆ ನಡೆಯಲಿದೆ ಈ ಚುನಾವಣೆಯಲ್ಲಿ ಅಡಳಿತಾರೂಢ ಬಿಜೆಪಿಗೆ ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಮಾಸ್ಟರ್ ಪ್ಲ್ಯಾನ್ ಸಿದ್ಧ ಪಡಿಸಿವೆ.ಬಿಜೆಪಿಯ ಅಭ್ಯರ್ಥಿ ಲಕ್ಷ್ಮಣ ಸವದಿ ಅವರನ್ನು ಸೋಲಿಸುವದಕ್ಕಾಗಿಯೇ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಪಕ್ಷೇತರ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.ಪರಿಷತ್ತಿನ ಚುನಾವಣೆಯಲ್ಲಿ ಅಡ್ಡ ಮತದಾನದ ಆತಂಕ ಬಿಜೆಪಿಯನ್ನು ಕಾಡುತ್ತಿದೆ.
ಸಚಿವ ಸಂಪುಟದ ವಿಸ್ತರಣೆಯಲ್ಲಿ ಸಚಿವ ಸ್ಥಾನದಿಂದ ವಂಚಿತರಾದ ಅತೃಪ್ತ ಶಾಸಕರ ಗುಂಪು ರೆಡಿಯಾಗಿದೆ.ಈ ಅತೃಪ್ತ ಶಾಸಕರನ್ನು ತಮ್ಮ ಬಲೆಗೆ ಹಾಕಿಕೊಂಡು ಬಿಜೆಪಿ ಸರ್ಕಾರಕ್ಕೆ ಪಾಠ ಕಲಿಸಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ,ಪರಿಷತ್ತಿನ ಚುನಾವಣೆಯಲ್ಲಿ ಅತೃಪ್ತ ಬಿಜೆಪಿ ಶಾಸಕರು ಅಡ್ಡ ಮತದಾನ ಮಾಡುವದು ಗ್ಯಾರಂಟಿ ಎಂದು ಬಿಜೆಪಿಯಲ್ಲೇ ಗುಸು..ಗುಸು ಆರಂಭವಾಗಿದೆ.
ಈ ಇಕ್ಕಟ್ಟಿನಿಂದ ಪಾರಾಗಲು ಮುಖ್ಯಮಂತ್ರಿ ಯಡಿಯೂರಪ್ಪ ಹಿರಿಯ ಶಾಸಕ ಉಮೇಶ್ ಕತ್ತಿ ಅವರನ್ನು ಮಂತ್ರಿ ಮಾಡಲು ಅನುಮತಿ ನೀಡುವಂತೆ ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ.ಅದಕ್ಕಾಯೇ ಉಮೇಶ್ ಕತ್ತಿ ದೆಹಲಿಯಲ್ಲಿ ಠಿಖಾಣಿ ಹೂಡಿದ್ದಾರೆ.
ಫೆಬ್ರುವರಿ 17 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ ಅಧಿವೇಶನದ ಮೊದಲ ದಿನವೇ ವಿಧಾನ ಪರಿಷತ್ತಿನ ಸ್ಥಾನಕ್ಕೆ ಮತದಾನ ನಡೆಯಲಿದೆ .ಈ ಮತದಾನದಲ್ಲಿ ಅಡ್ಡ ಮತದಾನ ನಡೆಯುವ ಎಲ್ಲ ಸಾದ್ಯತೆಗಳಿವೆ ಅದಕ್ಕು ಮೊದಲು ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಿ ಉಳಿದ ಅತೃಪ್ತ ಶಾಸಕರಿಗೆ ಸಮಾಧಾನ ಪಡಿಸಲು ಬಿಜೆಪಿ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ.
ವಿಧಾನ ಪರಿಷತ್ತಿನ ಚುನಾವಣೆ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಅಗ್ನಿ ಪರೀಕ್ಷೆಯಾದರೆ.ಇದೇ ಚುನಾವಣೆ ಉಮೇಶ್ ಕತ್ತಿ ಅವರಿಗೆ ಮಂತ್ರಿ ಸ್ಥಾನದ ದೀಕ್ಷೆಗೆ ಕಾರಣವಾಗಬಹುದು ಎನ್ನುವದು ರಾಜಕೀಯ ವಿಶ್ಲೇಷಕರ ಲೆಕ್ಕಾಚಾರ
ಒಟ್ಟಾರೆ ಬೆಳಗಾವಿ ಜಿಲ್ಲೆಯ ರಾಜಕಾರಣ,ಜಿಲ್ಲೆಯ ರಾಜಕೀಯ ಜಗಳ ರಾಜ್ಯ ನಾಯಕರಿಗೆ ಬಿಸಿ ತುಪ್ಪವಾಗಿದೆ. ಈ ಅಗ್ನೀ ಪರೀಕ್ಷೆಯಲ್ಲಿ ಯಾರು ಸೋಲುತ್ತಾರೆ,ಯಾರು ಗೆಲ್ಲುತ್ತಾರೆ ಅನ್ನೋದನ್ನು ಕಾದು ನೋಡಬೇಕಾಗಿದೆ.