Breaking News

ಹಿಂದಿ ಹೇರಿಕೆ ಬೇಡ ಅಂದ್ರು,ಬೆಳಗಾವಿ ಮಂದಿ…!!

ಬೆಳಗಾವಿ: ಹಿಂದಿ ದಿವಸ್‌ ಆಚರಣೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣಗೌಡ ಬಣದ ಜಿಲ್ಲಾ ಘಟಕದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ‍್ರತಿಭಟನೆ ನಡೆಸಿದರು.

ಇಲ್ಲಿನ ರೈಲ್ವೆ ನಿಲ್ದಾಣ ಎದುರು ಬುಧವಾರ ಪ್ರತಿಭಟನೆ ನಡೆಸಿದ ಅವರು, ‘ಔದ್ಯೋಗಿಕ, ಶೈಕ್ಷಣಿಕ ರಂಗಗಳಲ್ಲಿ ಎಲ್ಲ ಭಾಷಿಕರಿಗೂ ಸಮಾನ ಅವಕಾಶಗಳು ಸಿಗಬೇಕು. ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು, ಎಂಟನೇ ಪರಿಚ್ಛೇದದಲ್ಲಿರುವ ಎಲ್ಲ 22 ಭಾಷೆಗಳನ್ನು ಆಡಳಿತ ಭಾಷೆಗಳಾಗಿ ಮಾಡಬೇಕು. ಹಿಂದಿ ದಿವಸ್‌, ಹಿಂದಿ ಸಪ್ತಾಹ, ಹಿಂದಿ ಪಕ್ವಾಡದಂಥ ಕಾರ್ಯಕ್ರಮಗಳನ್ನು ತಕ್ಷಣವೇ ನಿಲ್ಲಿಸಬೇಕು. ಯಾವ ಭಾಷೆಗೂ ಹೆಚ್ಚಿನ ಮಾನ್ಯತೆ ಕೊಡಬಾರದು. ಯಾವ ಭಾಷೆಯನ್ನು ನಿರ್ಲಕ್ಷಿಸಬಾರದು’ ಎಂದು ಒತ್ತಾಯಿಸಿದರು.

‘ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ. ಹಾಗಾಗಿ ರಾಜ್ಯದಲ್ಲಿ ಸಂಚರಿಸುವ ಎಲ್ಲ ರೈಲುಗಳು ಹಾಗೂ ನಿಲ್ದಾಣಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು. ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯವಹಾರದಲ್ಲಿ ಕನ್ನಡ ಬಳಕೆಗೆ ಒತ್ತು ನೀಡಬೇಕು’ ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಆಗ್ರಹಿಸಿದರು.

ಸಂಚಾಲಕ ಮಹಾದೇವ ತಳವಾರ, , ಜಿಲ್ಲಾ ಘಟಕದ ಉಪಾಧ್ಯಕ್ಷ ಸುರೇಶ ಗವನ್ನವರ ಇದ್ದರು.

Check Also

ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಯುವಕನ ಆತ್ಮಹತ್ಯೆ

ಬೆಳಗಾವಿ-70 ಸಾವಿರ ಬೆಲೆಯ,ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಷ್ಟೊಂದು ದುಬಾರಿ ಐಪೋನ್ …

Leave a Reply

Your email address will not be published. Required fields are marked *