ಈ ಬಾರಿಯೂ ನಡೆಯಲಿದೆ, ಮೌಢ್ಯ ವಿರೋಧಿ ಪರಿವರ್ತನಾ ದಿನ”

ಗೋಕಾಕ: ಸನ್ಮಾನ್ಯ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷ ನಡೆಯುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದಂದು (ಡಿ.6) ಆಚರಿಸಲಾಗುವ “ಮೌಢ್ಯ ವಿರೋಧಿ ಪರಿವರ್ತನಾ ದಿನ” ಕಾರ್ಯಕ್ರಮವನ್ನು ಗೋಕಾಕನ ಮರಾಠ ಸಮಾಜದ ಸ್ಮಶಾನ ಭೂಮಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕರಾದ ರವೀಂದ್ರ ನಾಯ್ಕರ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯಾದ್ಯಂತ ಜನ ಸಮುದಾಯಲ್ಲಿ ವೈಚಾರಿಕ ಜಾಗೃತಿ ಮತ್ತು ಸ್ವಾಭಿಮಾನವನ್ನು ಮೂಡಿಸುವಲ್ಲಿ ಮಾನವ ಬಂಧುತ್ವ ವೇದಿಕೆ ಅನೇಕ ಕಾರ್ಯಕ್ರಮಗಳನ್ನು ಸಂಘಟಿಸುತ್ತ ಬಂದಿದೆ. ಇದರಲ್ಲಿ ಪ್ರತಿವರ್ಷ ಆಚರಿಸುವ “ಮೌಢ್ಯ ವಿರೋಧಿ ಪರಿವರ್ತನಾ ದಿನ”ವು ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದೆ.

ಕಳೆದ ವರ್ಷಗಳಲ್ಲಿ ಸ್ಮಶಾನದಲ್ಲಿ ನಡೆದ ಕಾರ್ಯಕ್ರಮಗಳು 24 ಗಂಟೆಯಂತೆ ನಡೆಯುತ್ತಿದ್ದವು ಹಾಗೂ ಕಾರ್ಯಕ್ರಮಕ್ಕೆ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ಮಾಡಲಾಗುತ್ತಿತ್ತು. ಸುಮಾರು 50 ಸಾವಿರ ಜನ ಕಾರ್ಯಕ್ರಮದಲ್ಲಿ ಪಾಲ್ಗೊಳುತ್ತಿದ್ದರು. ಆದರೆ ಈಗ ಕೊರೋನ ಇರುವ ಸಲುವಾಗಿ ಅಷ್ಟು ಜನರಿಗೆ ಸೇರಿಸುವುದು ಕಷ್ಟವಾಗಿದೆ. ಆದ್ದರಿಂದ ಕೊರೋನ ನಿಯಮಾವಳಿಯ ಪ್ರಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳುವ ಪ್ರತಿಯೊಬ್ಬರು ದಯವಿಟ್ಟು ಕೊರೋನ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.

ಈ ವೈಚಾರಿಕ ಕಾರ್ಯಕ್ರಮದಲ್ಲಿ ನಾಡಿನ ಪ್ರಗತಿಪರ ಸ್ವಾಮೀಜಿಗಳು, ಚಿಂತಕರು ಹಾಗೂ ವಿಚಾರವಾದಿಗಳು ಪಾಲ್ಗೊಳಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ವಿವರ: ಬೆಳಿಗ್ಗೆ 11 ಗಂಟೆಗೆ ವೈಚಾರಿಕ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಕಾರ್ಯಕ್ರಮದ ಬಳಿಕ ಮಧ್ಯಾಹ್ನ ಸತೀಶ್ ಜಾರಕಿಹೊಳಿಯವರು ಕಾರ್ಯಕರ್ತರೊಂದಿಗೆ ಉಪಹಾರ ಸೇವಿಸಲಿದ್ದಾರೆ. ಕೊರೋನಾ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಕಾರ್ಯಕ್ರಮವನ್ನು ಸರಳ ರೀತಿಯಲ್ಲಿ ಆಚರಿಸಲಾಗುವುದು. ಇದರ ನೇರ ಪ್ರಸಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗುವುದು ಹಾಗೂ ಮಾಧ್ಯಮ ಮಿತ್ರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದ ಮೂಲಕ ಕಾರ್ಯಕ್ರಮವನ್ನು ಪ್ರಸಾರ ಮಾಡಬೇಕೆಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ವಿವೇಕ ಜತ್ತಿ, ಮುನ್ನಾ ಭಾಗವಾನ್, ರಿಯಾಝ್ ಚೌಗಲಾ ಮತ್ತಿತರರು ಪಾಲ್ಗೊಂಡಿದ್ದರು.

Check Also

ಚನ್ನಮ್ಮಾಜಿಯ ಮೂರ್ತಿ ತೆರವು ವಿವಾದ, ಸಂಧಾನ ಸಫಲ

ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮನ ಅಶ್ವಾರೂಢ ಪ್ರತಿಮೆ ತೆರವಿಗೆ ಪೊಲೀಸ್‌ರು ಮತ್ತು ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು ಮುಂದಾದ ವೇಳೆ …

Leave a Reply

Your email address will not be published. Required fields are marked *