ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಕೊಲೆ ಆಗಿದೆ ಎಂದು ವರದಿಯಾಗಿದೆ. 1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ 68 ವರ್ಷದ ಓಂ ಪ್ರಕಾಶ್ ಅವರು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು. ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದ ಓಂಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ