Breaking News

ರಾಜ್ಯದಲ್ಲಿ ಮತ್ತೊಂದು ಬಾರಿ ಕಾಂಗ್ರೆಸ್ ಸರ್ಕಾರ-ಪರಮೇಶ್ವರ

 

ಬೆಳಗಾವಿ-ರಾಜ್ಯದಲ್ಲಿ ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರನ್ನು ಸಂಘಟಿಸಲು ಕಾಂಗ್ರೆಸ್ ಉಪಾಧ್ಯಕ್ಷ  ರಾಹುಲ ಗಾಂಧಿ ಡಿಸೆಂಬರ ೧೭ ರಂದು ಬೆಳಗಾವಿಗೆ ಆಗಮಿಸುತ್ತಿದ್ದು ಈ ಸಮಾವೇಶದಲ್ಲಿ ಕೇಂದ್ರ ಸರ್ಕಾರದ ವೈಫಲ್ಯತೆಗಳನ್ನು ಪ್ರಚಲಿತ ಸಮಸ್ಯೆಗಳ ಕುರಿತು ಈ ಸಮಾವೇಶದಲ್ಲಿ ಚರ್ಚಿಸಲಾಗುವದು ಎಂದು ಕೆಪಿಸಿಸಿ ಅಧ್ಯಕ್ಷ ಡಾ ಜಿ ಪರಮೇಶ್ವರ ತಿಳಿಸಿದ್ದಾರ

ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸಮಾವೇಶಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ ಗಾಂಧಿ  ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸೇರಿ ರಾಜ್ಯ ಮತ್ತು ರಾಷ್ಟ್ರೀಯ ಮುಖಮಖಂಡರು ಆಗಮಿಸುತ್ತಿದ್ದಾರೆ

೨೦೧೮ರ ಚುನಾವಣೆ ಪೂರ್ವ ಸಿದ್ಧತೆಯಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ..ಕರ್ನಾಟಕದ ನಾಲ್ಕು ವಿಭಾಗದಲ್ಲಿ ಸಮಾವೇಶ, ಅನಂತರ ಹಂತ ಹಂತವಾಗಿ ಸಮಾವೇಶ ಆಯೋಜಿಸಲಾಗುತ್ತಿದೆ..ಪ್ರಥಮ ಸಮಾವೇಶ ಬೆಳಗಾವಿಯಲ್ಲಿ ನಡೆಯುತ್ತಿದೆ ಎಂದರು

ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ನೀಡಿದ ಎಲ್ಲ ಆಹ್ವಾಸನೆಗಳನ್ನ ಈಡೇರಿಸಿ ಚುನಾವಣೆಗೆ ಹೋಗುತ್ತೇವೆ…ಮತ್ತೆ ೨೦೧೮ರಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲಿದೆ…ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ…ಮುಂಚೂಣಿಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಸೇರಿ ಅನೇಕ ಮುಖಂಡರು ಇರುತ್ತಾರೆ..
ದಲಿತ ನಾಯಕತ್ವದ ಚರ್ಚೆ ಪಕ್ಷದಲ್ಲಿ ನಡೆಯುತ್ತಿಲ್ಲ..
ಸತೀಶ್ ಜಾರಕಿಹೊಳಿ ಅವರನ್ನ ಕಾಂಗ್ರೆಸ್ ಪಕ್ಷ ನಿರ್ಲಕ್ಷಿಸಿಲ್ಲ..ಎಲ್ಲರೂ ಒಗ್ಗಟ್ಟಾಗಿ ಮುಂದಿನ ಚುನಾವಣೆ ಎದುರಿಸುತ್ತೇವೆ ಪಕ್ಷದಲ್ಲಿ ಯಾವದೇ ಭಿನ್ನಾಭಿಪ್ರಾಯ ಇಲ್ಲ ಮುಂದಿನ ಬಾರಿಯೂ ಕಾಂಗ್ರೆಸ್ ಅಧಿಕಾರಕ್ಜೆ ಬರಲಿದೆ ಎಂದು ಪರಮೇಶ್ವರ ವಿಶ್ವಾಸ ವ್ತಕ್ತಪಡಿಸಿದರು

ಪಕ್ಷದ ಸಂಘಟನೆಯ ಹಿತದೃಷ್ಟಿಯಿಂದ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತೇವೆ ಹೊಸ ಉತ್ಸಾಹಿ ಮುಖಗಳಿಗೆ ಅವಕಾಶ ಕೊಡುತ್ತೇವೆ ಎಂದು ಪರಮೇಶ್ವರ ತಿಳಿಸಿದರು

ಕೆಪಿಸಿಸಿ ಅಧ್ಯಕ್ಷರಿಗೆ, ದಿನೇಶ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳಕರ, , ಶಾಸಕ ಗಣೇಶ ಹುಕ್ಕೇರಿ ವಿನಯ ನಾವಲಗಟ್ಟಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು

 

Check Also

ಸಂಘ ದೋಷ, ಗೆಳೆಯನ ಜೊತೆ ಸೇರಿ ಗಂಡನ ಮರ್ಡರ್ ಮಾಡಲು ಸುಫಾರಿ ಕೊಟ್ಟ ಹೆಂಡತಿ…..!!!

ಬೆಳಗಾವಿ-ಅದೊಂದು ಸುಖ ಸಂಸಾರವಾಗಿತ್ತು ಸಾಲಕ್ಕಾಗಿ ಆ ಸಂಘ ಈ ಸಂಘವೆಂದು ಅಲೆದಾಡಿದ ಮನೆಯ ಯಜಮಾನಿ ಯುವಕನ ಜೊತೆ ಗೆಳೆತನ ಮಾಡಿ …

Leave a Reply

Your email address will not be published. Required fields are marked *