Breaking News

ಜಾರಕಿಹೊಳಿ‌ ಬಿ.ಎಲ್.ಸಂತೋಷ್ ಭೇಟಿಯಾಗೋದು ಅಪರಾಧಾನಾ?- ಸಚಿವ ಸುಧಾಕರ್ ಪ್ರಶ್ನೆ

ಕೊರೊನಾ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ-ಸಚಿವ ಸುಧಾಕರ್

ಬೆಳಗಾವಿ- ಕೊರೊನಾ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ, ಅಧಿಕೃತ ಆದ್ಮೇಲೆ ನಿಮಗೂ ಗೊತ್ತಾಗುತ್ತೆ ಎಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ್ರು ಕೇಂದ್ರ ಸರ್ಕಾರ, ಪ್ರಧಾನಿಯವರು ಕ್ಲಿನಿಕಲ್ ಟ್ರಯಲ್ ನಡೆಸಿರುವ ಕಂಪನಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಅಡ್ವಾನ್ಸ್ ಆಗಿ ಮೂರನೇ ಹಂತ ತಲುಪಿದ ಕಂಪನಿ ಜೊತೆ ಕೇಂದ್ರ ಸಮಾಲೋಚನೆ ನಡೆದಿದ್ದು, ಅದೇ ರೀತಿ ಕಂಪನಿಗಳ ಜೊತೆ ಕೇಂದ್ರ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ. ಯಾವ ಕಂಪನಿಗೆ WHO ಅಧಿಕೃತ ಅಂತಾ ಘೋಷಣೆ ಮಾಡ್ತಾರೆ ಆ ಲಸಿಕೆ ಸಿಗುವ ಕೆಲಸ ಆಗುತ್ತೆ ಎಂದರು.

ಭಾರತ ದೇಶದಲ್ಲಿ ದೊಡ್ಡ ಮಟ್ಟಿಗೆ ಲಸಿಕೆ ಸಿಗುವ ಕೆಲಸ ಆಗುತ್ತೆ, ಆರೋಗ್ಯ ಇಲಾಖೆಯಲ್ಲಿ ಜನಪರ ಬದಲಾವಣೆಗಳು ನಡೀತಾ ಇವೆ, ಅಂತಾರಾಷ್ಟ್ರೀಯ ಗುಣಮಟ್ಟದ 108 ಆ್ಯಂಬುಲೆನ್ಸ್ ಸರ್ವೀಸ್‌ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ,ಕಾಲೇಜಿನ ವಿದ್ಯಾರ್ಥಿಗಳು ಹಾಗೂ ನಾವು ಯಾರೂ ಸಹ ಹೊರೆತಾಗಿಲ್ಲ, ಎಷ್ಟು ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಬಂದಿದೆ ನಿಖರ ಮಾಹಿತಿ ಇಲ್ಲ, ಉನ್ನತ ಶಿಕ್ಷಣ ಸಚಿವರ ಜೊತೆ ಮಾತನಾಡಿ ಮಾಹಿತಿ ಪಡೆಯುತ್ತೇನೆ, ಲಸಿಕೆ ಬಂದ್ರೆ ಅದರ ಸಂಗ್ರಹಕ್ಕೆ ಎಲ್ಲ ವ್ಯವಸ್ಥೆ ಆಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

ಕೇಂದ್ರ ಆರೋಗ್ಯ ಸಚಿವರ ಜೊತೆ ವಿಡಿಯೋ ಸಂವಾದವೂ ಆಗಿದೆ, ಕೊರೊನಾ ಲಸಿಕೆ ಬಂದ್ಮೇಲೆ ವಿತರಣೆ ನಿಧಾನ ಆಗಬಾರದಂತೆ ಸಕಲ ವ್ಯವಸ್ಥೆ ಮಾಡಿಕಡಿದ್ದೇವೆ. ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲಸಿಕೆ ವಿತರಿಸುವ ವ್ಯವಸ್ಥೆ ಆಗಿದೆ.ಎಂದು ಬೆಳಗಾವಿಯಲ್ಲಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

*ಜಾರಕಿಹೊಳಿ‌ ಬಿ.ಎಲ್.ಸಂತೋಷ್ ಭೇಟಿಯಾಗೋದು ಅಪರಾಧಾನಾ?*

ರಮೇಶ್ ಜಾರಕಿಹೊಳಿ‌ ಬಿ.ಎಲ್.ಸಂತೋಷ್ ಭೇಟಿ ವಿಚಾರವಾಗಿ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಾ.ಕೆ ಸುಧಾಕರ್ ರಮೇಶ್ ಜಾರಕಿಹೊಳಿ‌ ಬಿ.ಎಲ್.ಸಂತೋಷ್ ಭೇಟಿಯಾಗೋದು ಅಪರಾಧಾನಾ?*ಎಂದು ಸಚಿವ ಡಾ.ಕೆ.ಸುಧಾಕರ್ ಪ್ರಶ್ನೆ ಮಾಡಿದ್ರು. ರಮೇಶ್ ಜಾರಕಿಹೊಳಿ‌ ದೆಹಲಿಗೆ ಹೋಗೋದು ಅಪರೂಪ ಏನಲ್ವಲ್ಲ, ರಮೇಶ್ ಜಾರಕಿಹೊಳಿ‌ ಆವಾಗಾವಾಗ ದೆಹಲಿಗೆ ಹೋಗ್ತಾ ಇರ್ತಾರೆ, ನೀರಾವರಿ ಇಲಾಖೆ ಕಡತಗಳ ನಿಂತಿರುತ್ತೆ, ಕೋರ್ಟ್ ಇಸ್ಯೂ ಇರುತ್ತೆ, ಬಿ.ಎಲ್.ಸಂತೋಷ್‌ಜೀ ನಮ್ಮ ಪಕ್ಷದ ದೊಡ್ಡ ಮಟ್ಟದ ನಾಯಕರು, ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ, ಒಬ್ಬ ಸಾಮಾನ್ಯ ಕಾರ್ಯಕರ್ತನಿಗೂ ಉನ್ನತ ಮಟ್ಟದ ನಾಯಕನ ಭೇಟಿಯಾಗು ಆಸೆ ಇರುತ್ತದೆ, ಸೌಜನ್ಯಯುತ ಭೇಟಿ, ಆಡಳಿತ ಹಾಗೂ ಇಲಾಖೆ, ರಾಜಕಾರಣ ಬಗ್ಗೆ ಮಾತನಾಡಿರಬಹುದು ಎಂದು ಸುಧಾಕರ್ ಹೇಳಿದ್ರು.

ಮಾಜಿ ಶಾಸಕ ಸಂಜಯ ಪಾಟೀಲ,ಶಾಸಕ ಅನೀಲ ಬೆನಕೆ ಉಸ್ಥಿತರಿದ್ದರು.

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *