Breaking News

ಬೆಳಗಾವಿಯಲ್ಲಿ ಮಾಧಕ ವಸ್ತುಗಳ ಮಾರಾಟ ದಂಧೆ ವ್ಯಾಪಕ ಪ್ರಭಾಕರ ಕೋರೆ ಕಳವಳ

ಬೆಳಗಾವಿ: ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಗೆಲ್ಲುವ ಸಾಧ್ಯತೆ ಇದ್ದ ಇನ್ನು ೩-೪ ಸ್ಥಾನಗಳಲ್ಲಿ ಬಿಜೆಪಿ ಸೋಲಿಗೆ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿರುವುದೇ ಕಾರಣವಾಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.

ನಗರದಲ್ಲಿಂದು ಕನ್ನಡ ಸಾಹಿತ್ಯ ಭವನದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಬೆಳಗಾವಿ ಉತ್ತರ ಮತ್ತು ದಕ್ಷಿಣ ಕ್ಷೇತ್ರದ ಶಾಸಕರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದಲ್ಲಿಯೂ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯುವ ವಿಶ್ವಾಸವಿತ್ತು. ಆದರೆ, ೧೬ ಸ್ಥಾನಗಳಲ್ಲಿ ಕೆಲವೇ ಅಂತರದಿಂದ ಬಿಜೆಪಿ ಸೋಲನುಭವಿಸಿದೆ. ಪರಿಣಾಮ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯುವಲ್ಲಿ ಪಕ್ಷಕ್ಕೆ ಹಿನ್ನೆಡೆಯಾಗಿರುವುದು ದುರ್ದೈವದ ಸಂಗತಿಯಾಗಿದೆ. ಇನ್ನು ೧೦ ತಿಂಗಳಲ್ಲಿ ಲೋಕಸಭಾ ಚುನಾವಣೆ ಬರಲಿದ್ದು, ಪಕ್ಷದ ಕಾರ್ಯಕರ್ತರನ್ನು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಬೆಳಗಾವಿ ಉತ್ತರ ಮತ್ತು ದಕ್ಷಿಣದಲ್ಲಿ ಈ ಬಾರಿ ಬಿಜೆಪಿ ಗೆಲುವು ಸಾಧಿಸಿರುವ ಹಿಂದೆ ಕಾರ್ಯಕರ್ತರ ಶ್ರಮವಿದೆ. ಅವರೇ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಶಕ್ತಿ ತುಂಬಿದ್ದಾರೆ. ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸುವ ಮೂಲಕ ದಾಖಲೆ ಸೃಷ್ಟಿಸಿದೆ. ಬೆಳಗಾವಿ ಪಾಲಿಕೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮೇಯರ್ ಸೇರಿದಂತೆ ೨೩ ನಗರ ಸೇವಕರು ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲಿಸಿದ್ದಾರೆ. ಎಲ್ಲರೂ ಜಾತಿ, ಮತ ಭಾಷೆ ಬಿಟ್ಟು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಬೆಳಗಾವಿ ಉತ್ತರ ಮತ್ತು ದಕ್ಷಿಣ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರ ಪರಿಶ್ರಮವೇ ಕಾರಣ. ಯಾವುದೇ ಕಾರಣಕ್ಕೂ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಬಾರದು. ಕ್ಷೇತ್ರದ ಜನತೆ ಮತ್ತು ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತ್ವರಿತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಶ್ರಮಿಸಬೇಕು. ನಗರದಲ್ಲಿ ಶಾಲಾ- ಕಾಲೇಜು ಆವರಣಗಲ್ಲಿ ಮಾದಕ ವಸ್ತುಗಳ ಮಾರಾಟ ದಂಧೆ ವ್ಯಾಪಕವಾಗಿ ನಡೆಯುತ್ತಿದೆ. ಇದಕ್ಕೆ ಮಕ್ಕಳೇ ಬಲಿಯಾಗುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಅಕ್ರಮ ಚಟುವಟಿಕೆಗಳಿಗೆ ಕ್ಷೇತ್ರದ ಶಾಸಕರು ಕಡಿವಾಣ ಹಾಕಬೇಕು ಎಂದು ಹೇಳಿದರು.

ಸಂಸದ ಸುರೇಶ ಅಂಗಡಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿಯಲ್ಲಿದೆ. ಕಾಂಗ್ರೆಸ್ ವಿರುದ್ಧ ಬಿಜೆಪಿ, ಜೆಡಿಎಸ್‌ಪರ ಜನರು ಮತ ಚಲಾಯಿಸಿದ್ದಾರೆ. ಆದರೆ, ಕಾಂಗ್ರೆಸ್ ಜೆಡಿಎಸ್‌ನೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದೆ. ಆದರೆ, ರಾಜ್ಯದಲ್ಲಿರುವುದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಸರ್ಕಾರ ಅಸ್ತಿತ್ವದಲ್ಲಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಎಂದು ಅಂಗಡಿ ಅವರು ವಿಶ್ವಾಸ ವ್ಯಕ್ತಪಡಿಸಿರು.

ಇದೇ ವೇಳೆ ಉತ್ತರ ಶಾಸಕ ಅನಿಲ ಬೆನಕೆ ಮತ್ತು ದಕ್ಷಿಣ ಶಾಸಕ ಅಭಯ ಪಾಟೀಲ ಅವರನ್ನು ಸನ್ಮಾನಿಸಲಾಯಿತುಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ರಾಜೇಂದ್ರ ಹರಕುಣಿ, ಎಂ.ಬಿ.ಜಿರಲಿ,  ನಗರ ಸೇವಕ ದೀಪಕ ಜಮಖಂಡಿ, ಲೀನಾ ಟೋಪಣ್ಣವರ ಉಪಸ್ಥಿತರಿದ್ದರು.

ಬೆಳಗಾವಿ ಉತ್ತರ ಮತ್ತು ದಕ್ಷಿಣ ಎರಡೂ ಕ್ಷೇತ್ರದಲ್ಲಿ ಯಾವುದೇ ಅಕ್ರಮ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ. ಮಾದಕ ವಸ್ತುಗಳ ಮಾರಾಟ ದಂಧೆ ವ್ಯಾಪಕ ವಾಗಿ ಸಾಗಿದೆ. ಇದಕ್ಕೆ ಹೆಣ್ಣು ಮಕ್ಕಳು, ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಖಾನಾಪುರ ರಸ್ತೆಯ ಗಚ್ಛಿ ಹೊಟೇಲ್‌ನಲ್ಲಿ ಅಕ್ರಮವಾಗಿ ಹುಕ್ಕಾ ಬಾರ್ ನಡೆಸಲಾಗುತ್ತಿದೆ. ಮಾದಕ ವಸ್ತು ಮಾರಾಟ ಮಾಡಲಾಗುತ್ತಿದೆ. ಇದನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ. ಕೂಡಲೇ ಇಂತಹ ಅಕ್ರಮ ಚಟುವಟಿಕೆಗಳಿಗೆ ಪೊಲೀಸರು ಕಡಿವಾಣ ಹಾಕಬೇಕು. ಇಲ್ಲಿದ್ದರೆ ಉಗ್ರ ಹೋರಾಟ ಅನಿವಾರ್ಯವಾಗುತ್ತದೆ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಎಚ್ಚರಿಕೆ ನೀಡಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಉಡಾನ್ ವಿಮಾನಯಾನ ಸೇವೆ ಆರಂಭಿಸುವಂತೆ ಕೋರೆ ಶೀಘ್ರವೇ ಉತ್ತರ ಕರ್ನಾಟಕದ ಶಾಸಕರ ನಿಯೋಗವೊಂದು ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ತೆರಳಲಿದೆ ಎಂದು ಅಭಯ ಪಾಟೀಲ ಹೇಳಿದರು

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *