Breaking News

ಅಂದು ಕನ್ನಡದ ಜಯರಾಂ ಇಂದು ಕನ್ನಡತಿ ಶಾಲಿನಿ, ಇಬ್ಬರಿಗೂ ಜೈ…!!

 

ಬೆಂಗಳೂರು: ಇದು ಕನ್ನಡದ ಅಭಿಮಾನ,ಇವರು ಮೂಲತಃ ಪಂಜಾಬದವರು, ಇವರು ಹೊರಡಿಸಿದ ಆದೇಶ ಕನ್ನಡದ ಆದೇಶ, ಇವರು ನಿಜವಾದ ಕನ್ನಡದ ಅಧಿಕಾರಿ,ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿ ಇರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ. ಆದ್ದರಿಂದ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ  ಎನ್ ಜಯರಾಂ ಅವರು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹತ್ತು ಹಲವು ಕನ್ನಡಪರ ನಿರ್ಧಾರಗಳನ್ನು ಮಾಡಿ,ಕನ್ನಡದ ಆದೇಶಗಳನ್ನು ಹೊರಡಿಸಿ ಮಹಾನಗರ ಪಾಲಿಕೆಯಲ್ಲಿ ನಾಡಗೀತೆಯನ್ನು ಮೊಳಗಿಸಿ, ಯಳ್ಳೂರಿನ ನಾಡದ್ರೋಹಿ ಫಲಕವನ್ನು ತೊಲಗಿಸಿ,ನಾಡದ್ರೋಹಿ ಎಂ ಇ ಎಸ್  ಷಡ್ಯಂತ್ರಗಳಿಗೆ ಬ್ರೇಕ್ ಹಾಕಿಸಿ ಕನ್ನಡದ ಕ್ರಾಂತಿ ಮಾಡಿದ್ದನ್ನು ಬೆಳಗಾವಿಯ ಜನ ಮತ್ತು ನಾಡಿನ ಕನ್ನಡಿಗರು ಎಂದಿಗೂ ಮರೆಯಲು ಸಾಧ್ಯವಿಲ್ಲ.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *