ಬೆಳಗಾವಿ- ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವದು,ಗೋರಕ್ಷಕರ ಬಹುದಿನಗಳ ಕನಸಾಗಿತ್ತು,ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಲಕ್ಷಾಂತರ ಗೋ ರಕ್ಷಕರ ಕನಸು ನನಸು ಮಾಡಿದ್ದು,ಸರ್ಕಾರದ ಕ್ರಮ ರಾಜ್ಯದಲ್ಲಿ ಹೊಸ ಇತಿಹಾಸ ಸೃಷ್ಠಿಸಿದೆ ಎಂದು ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಹರ್ಷ ವ್ಯೆಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವ ಮೂಲಕ,ರಾಜ್ಯದಹಿತವನ್ನು ಕಾಪಾಡಿದ್ದು ಅಭಿನಂದಾರ್ಹ ಸಂಗತಿಯಾಗಿದ್ದು,ಸರ್ಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಜಾರಿ ಗೊಳಿಸುವ ಮೂಲಕ ನುಡಿದಂತೆ ನಡೆದಿದೆ,ಕೊಟ್ಟ ಭರವಸೆ ಈಡೇರಿಸುವ ಮೂಲಕ ಜನರ ಪ್ರೀತಿಗೆ ಪಾತ್ರವಾಗಿದೆ ಎಂದು ಡಾ.ಸೋನಾಲಿ ಸರ್ಕಾರದ ದಿಟ್ಟ ಕ್ರಮವನ್ನು ಸ್ವಾಗತಿಸಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಸಂಧರ್ಭದಲ್ಲಿ ತಾನು ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆಯಾಗಿದ್ದು ನನ್ನ ಪೂರ್ವಜನ್ಮದ ಪುಣ್ಯವಾಗಿದೆ. ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ತನ್ನ ಜವಾಬ್ದಾರಿ ನಿಭಾಯಿಸಿದ್ದು ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆಯಾಗಿ ರಾಜ್ಯಾದ್ಯಂತ ಸಂಚರಿಸಿ ಕಾಯ್ದೆ ಅನುಷ್ಠಾನದ ಮೇಲೆ ನಿಗಾವಹಿಸುತ್ತೇನೆ.ಎಂದು ಡಾ. ಸೋನಾಲಿ ಸರ್ನೋಬತ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಈಗ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದು ,ಈ ಕಾಯ್ದೆ ಉಲ್ಲಂಘನೆ ಮಾಡುವವರ ಮೇಲೆ ನಿರಂತರವಾಗಿ ನಿಗಾ ಇಡಲಾಗುವದು,ರಾಜ್ಯದ ವಿವಿಧ ಜಿಲ್ಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಕಾಯ್ದೆ ಉಲ್ಲಂಘನೆ ಮಾಡುವವರ ಮೇಲೆ ನಿಗಾ ಇಡುವದು,ನಮ್ಮ ಜವಾಬ್ದಾರಿಯಾಗಿದ್ದು ಈ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿಭಾಯಿಸುವ ಸಂಕಲ್ಪ ಮಾಡಿರುವದಾಗಿ ಡಾ.ಸೋನಾಲಿ ಸರ್ನೋಬತ್ ತಿಳಿಸಿದ್ದಾರೆ.