Breaking News

ಖಾನಾಪೂರ ಕ್ಷೇತ್ರದಲ್ಲಿ ಡಾ.ಅಂಜಲಿ ವಿರುದ್ಧ, ಡಾ.ಸೋನಾಲಿ….!!!

ಖಾನಾಪೂರದಲ್ಲಿ ಡಾಕ್ಟರ್ ನಡೆಸಿದ್ದಾರೆ ಆಪರೇಷನ್ ಬಿಜೆಪಿ “ಬಿ” ಫಾರ್ಮ್…..!!!!

ಬೆಳಗಾವಿ-ಟೀಕೆಗಳು ಸಾಯುತ್ತವೆ ಸಾಧನೆಗಳು ಉಳಿಯುತ್ತವೆ.ರಾಜಕೀಯದಲ್ಲಿ ಟೀಕೆಗಳನ್ನು ಸಹಿಸಿಕೊಂಡು ಮುಂದಕ್ಕೆ ಹೆಜ್ಜೆ ಹಾಕಿದವರು ಲೀಡರ್ ಆಗ್ತಾರೆ ಅನ್ನೋದಕ್ಕೆ ಬೆಳಗಾವಿಯ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಅವರು ಉದಾಹರಣೆಯಾಗಿದ್ದರೆ.

ಬೆಳಗಾವಿ ಬಿಜೆಪಿ ಸಂಘಟನೆಯಲ್ಲಿ ಹಲವಾರು ಸ್ಥಾನಗಳನ್ನು ಪಡೆದುಕೊಂಡು ಜೊತೆಗೆ ಖಾನಾಪೂರ ಕ್ಷೇತ್ರದ ಬಿಜೆಪಿ ಉಸ್ತುವಾರಿ ಆಗಿರುವ ಡಾ. ಸೋನಾಲಿ,ಖಾನಾಪೂರ ಕ್ಷೇತ್ರದಲ್ಲಿ ಸದ್ದಿಲ್ಲದೆ, ಸಂಘಟನೆ ಮಾಡುವದರ ಜೊತೆಗೆ ಖಾನಾಪೂರ ಕ್ಷೇತ್ರದ ಸಮಸ್ಯೆಗಳ ಪಟ್ಟಿ ಮಾಡಿ ಸರ್ಕಾರದ ಗಮನ ಸೆಳೆಯುತ್ತಿದ್ದಾರೆ.

ಖಾನಾಪೂರ ಕ್ಷೇತ್ರದಲ್ಲಿ ನಿರಂತರವಾಗಿ ಸಂಚರಿಸಿ ಕ್ಷೇತ್ರದ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿರುವ ಡಾ. ಸೋನಾಲಿ,ಖಾನಾಪೂರ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ‌್ನು ಮಂಜೂರು ಮಾಡಿಸುವಂತೆ ಮನವಿ ಮಾಡುವದರ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಖಾನಾಪೂರದಲ್ಲಿ ಕಾಂಗ್ರೆಸ್ಸಿನ ಅಂಜಲಿ ನಿಂಬಾಳ್ಕರ್ ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷ್ಮೀ ಹೆಬ್ಬಾಳಕರ ಶಾಸಕರಿದ್ದಾರೆ,ಇವರಿಬ್ಬರ ವಿರುದ್ಧ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಈ ಎರಡೂ ಕ್ಷೇತ್ರಗಳನ್ನು ವಶಪಡಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್ ಮಾಡಿದೆ ಎನ್ನುವ ಸುದ್ಧಿ ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಪ್ರಚಾರ ಪಡೆದುಕೊಂಡಿದ್ದು, ಖಾನಾಪೂರದಲ್ಲಿ ಡಾ.ಸೋನಾಲಿ ಸರ್ನೋಬತ್ ಬೆಳಗಾವಿ ಗ್ರಾಮೀಣದಲ್ಲಿ ದಿ‌ ಸುರೇಶ ಅಂಗಡಿ ಅವರ ಪುತ್ರಿ ಶ್ರದ್ಧಾ ಶೆಟ್ಟರ್ ಇಬ್ಬರೂ ಕ್ರಿಯಾಶೀಲರಾಗಿದ್ದಾರೆ‌.

ಬಿಜೆಪಿ ಸಂಘಟನೆಯಲ್ಲಿ ಹಲವಾರು ಜವಾಬ್ದಾರಿಗಳನ್ನು ನಿಭಾಯಿಸುತ್ತಿರುವ ಡಾ.ಸೋನಾಲಿ ಅವರು ಮರಾಠಿ ಭಾಷೆಯನ್ನು ನಿರರ್ಗಳವಾಗಿ ಮಾತನಾಡುತ್ತಾರೆ.ಅವರಲ್ಲಿರುವ ಸಂಘಟನಾ ಶಕ್ತಿಯನ್ನು ನೋಡಿ ಬಿಜೆಪಿ ನಾಯಕರು ಡಾ.ಸೋನಾಲಿ ಅವರಿಗೆ ಖಾನಾಪೂರ ಕ್ಷೇತ್ರದಲ್ಲಿ ತಯಾರಿ ಮಾಡಿಕೊಳ್ಳುವಂತೆ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಡಾ. ಸೋನಾಲಿ ಸರ್ನೋಬತ್ ಅವರು ನಿರಂತರವಾಗಿ ಖಾನಾಪೂರ ಕ್ಷೇತ್ರದಲ್ಲಿ ಸಂಚರಿಸಿ ಬಿಜೆಪಿ ಸಂಘಟನೆಯನ್ನು ಮಾಡುತ್ತಿದ್ದು,ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಸಿಗುತ್ತದೆ ಎಂದು ಹೇಳಲಾಗುತ್ತಿದ್ದು, ಸದ್ದಿಲ್ಲದೇ ಅವರು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.

Check Also

ಮಂತ್ರಿಗಿರಿ ರೇಸ್ ನಲ್ಲಿ ಬೆಳಗಾವಿಯ ಜಾತ್ಯಾತೀತ ಕುಟುಂಬದ, ಶಾಸಕ!

ಬೆಳಗಾವಿ ಯಾರಿಗೆ ಸೇರಿದ್ದು ಎಂದು ವಿಚಾರಣೆ ಮಾಡಲು ಕೇಂದ್ರ ಸರ್ಕಾರಗಳು ರಚಿಸಿದ ಫಜಲ್ ಅಲಿ,ಆಯೋಗ,ಮಹಾಜನ್ ಆಯೋಗ ಬೆಳಗಾವಿಗೆ ಬಂದಾಗ ಎಲ್ಲ …

Leave a Reply

Your email address will not be published. Required fields are marked *