Breaking News
Home / Uncategorized / ಬೆಳಗಾವಿಯ ನರ್ಸ್ ಗೆ ವೈದ್ಯಕೀಯ ಶಿಕ್ಷಣ ಸಚಿವರಿಂದ ಅಭಿನಂದನೆ

ಬೆಳಗಾವಿಯ ನರ್ಸ್ ಗೆ ವೈದ್ಯಕೀಯ ಶಿಕ್ಷಣ ಸಚಿವರಿಂದ ಅಭಿನಂದನೆ

ಬೆಳಗಾವಿ-ಕೋವಿಡ್ ಸೋಂಕಿತೆಗೆ ಯಶಸ್ವಿ ಹೆರಿಗೆ ಮಾಡಿಸಿದ ನರ್ಸ್‌ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್‌ಗೆ ಸಚಿವ ಡಾ.ಕೆ.ಸುಧಾಕರ್ ಅಭಿನಂದ‌ನೆ ಸಲ್ಲಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದ,ಸೋಂಕಿತೆಗೆ ಧೈರ್ಯ ತುಂಬಿ ಹೆರಿಗೆ ಮಾಡಿಸಿದ ನರ್ಸ್ ಕಾರ್ಯ ಶ್ಲಾಘನೀಯ’ ಎಂದು.ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ ಸಚಿವ ಡಾ.ಕೆ.ಸುಧಾಕರ್ ಬೆಳಗಾವಿ ಜಿಲ್ಲೆಯ ನರ್ಸ್ ಕಾರ್ಯವನ್ನು ಕೊಂಡಾಡಿದ್ದಾರೆ.

ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದ ಹಲಗಾದ ಸೋಂಕಿತ ಗರ್ಭಿಣಿಗೆ,ಶನಿವಾರ ರಾತ್ರಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ,ಪಿಪಿಇ ಕಿಟ್ ಧರಿಸಿ ಹೆರಿಗೆ ಮಾಡಿಸಿದ ನರ್ಸ್ ರಾಣಿ ಲಖನಗೌಡ, ವೈದ್ಯ ಡಾ.ಮಂಜುನಾಥ ದಳವಾಯಿ ನೀಡಿದ ಮಾರ್ಗದರ್ಶ‌ನದಂತೆ ಹೆರಿಗೆ ಮಾಡಿಸಿದ್ದರು

ಗಂಡು ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ, ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದು ವೈದ್ಯಕೀಯ ಸಿಬ್ಬಂದಿ ಕಾರ್ಯಕ್ಕೆ ರಾಜ್ಯಮಟ್ಟದಲ್ಲಿ ಮೆಚ್ಚುಗೆ ವ್ಯೆಕ್ತವಾಗಿದೆ.

Check Also

ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರ ಮುಖಕ್ಕೆ ಕಪ್ಪು ಮಸಿ ಎರಚಿದ್ರು…!!

ಬೆಳಗಾವಿ-ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಅವರ ಮುಖಕ್ಕೆ ಮಸಿ ಬಳಿದ ಘಟನೆ ಇಂದು ಮಹಾರಾಷ್ಟ್ರದ ಪೂನೆಯಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *