Breaking News

ಸಿಎಂ ಭೇಟಿಯಾದ ಕಲ್ಲಪ್ಪ ಕುಟುಂಬ, ಡಿವೈಎಸ್ಪಿ ಸಾವಿಗೆ ಕಾರಣರಾದವರನ್ನು ಶಿಕ್ಷಿಸಿ ಎಂದು ಆಗ್ರಹ

ಬೆಂಗಳೂರು: ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಕುಟುಂಬ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದರು.
ಕಲ್ಲಪ್ಪ ಹಂಡಿಭಾಗ್ ಅವರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಶೀಘ್ರ ಕ್ರಮಕೈಗೊಳ್ಳಿ ಎಂದು ಮೃತ ಪೊಲೀಸ್ ಅಧಿಕಾರಿ ಕುಟುಂಬ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ನಮ್ಮ ಮಗ ಅಮಾಯಕನಾಗಿದ್ದು, ಪೊಲೀಸ್ ಇಲಾಖೆಯಲ್ಲಿ ಅತ್ಯಂತ ನಿಷ್ಠಾವಂತನಾಗಿ ಕಾರ್ಯನಿರ್ವಹಿಸಿದ್ದಾನೆ. ಆತನ ಆತ್ಮಹತ್ಯೆ ಹಿಂದಿನ ರಹಸ್ಯ ಭೇದಿಸಿ, ತಪ್ಪಿತಸ್ಥರನ್ನು ಶಿಕ್ಷಿಸಿ ಎಂದು ಕಲ್ಲಪ್ಪ ಪೋಷಕರು ಒತ್ತಾಯಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಸಿಎಂ, ಕಲ್ಲಪ್ಪ ಅವರ ಪತ್ನಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಈಗಾಗಲೇ ಭರವಸೆ ನೀಡಿದ್ದೇನೆ. ಇದನ್ನು ಶೀಘ್ರದಲ್ಲಿಯೇ ಕಾರ್ಯಗತಗೊಳಿಸಲಾಗುವುದು ಎಂದು ಹೇಳಿದರು.
ಕಲ್ಲಪ್ಪ ಅವರ ಸಹೋದರನಿಗೆ ಸಹಕಾರ ಸಂಘವೊಂದರಲ್ಲಿ ಉದ್ಯೋಗ ಕೊಡಿಸುವುದಾಗಿ ಇದೇ ವೇಳೆ ಶಾಸಕ ಎಸ್.ಟಿ. ಸೋಮಶೇಖರ್ ಆಶ್ವಾಸನೆ ನೀಡಿದರು. ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ, ಕಲ್ಲಪ್ಪ ಅವರ ಪತ್ನಿ ವಿದ್ಯಾ, ತಂದೆ ಮತ್ತು ತಾಯಿ, ಸಹೋದರ, ಸಹೋದರಿ ಉಪಸ್ಥಿತರಿದ್ದರು.

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *