ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಎಲ್ಲಿಲ್ಲದ ಪ್ರಯತ್ನ ನಡೆದಿದೆ ಬೆಳಗಾವಿ ಜಿಲ್ಲೆಯ ಕೆಲವು ಕಾಂಗ್ರೆಸ್ ಶಾಸಕರು ಮತ್ತು ಬ್ಲಾಕ್ ಅಧ್ಯಕ್ಷರುಗಳು ಸಹಿ ಸಂಗ್ರಹ ಮಾಡಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣು ಗೋಪಾಲ ಅವರಿಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ
ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಸಚಿವ ರಮೇಶ ವಿರುದ್ಧ ದೊಡ್ಡ ಹೋರಾಟವೇ ನಡೆದಿದೆ ಶಾಸಕರಾದ ಗಣೇಶ ಹುಕ್ಕೇರಿ,ಫಿರೋಜ್ ಸೇಠ,ಅಶೋಕ ಪಟ್ಟಣ ಸೇರಿದಂತೆ ಹಲವಾರು ಜನ ಮಾಜಿ ಶಾಸಕರು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಮತ್ತು ಜಿಲ್ಲೆಯ ಕೆಲವು ಕಾಂಗ್ರೆಸ್ ಮುಖಂಡರು ಸಚಿವ ರಮೇಶ ಜಾರಕಿಹೊಳಿ ವಿರುದ್ಧ ರಾಜ್ಯದ ನೂತನ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರಿಗೆ ಲಿಖಿತ ದೂರು ಸಲ್ಲುಸಿದ್ದಾರೆ ಎಂದು ಬಲ್ಕ ಮೂಲಗಳು ದೃಡಪಡಿಸಿವೆ
ಇನ್ನೊಂದು ಕಡೆ ರಮೇಶ ಜಾರಕಿಹೊಳಿ ಗುಂಪು ಮಾಜಿ ಸಚಿವ ಸತೀಶ ಜಾರಕಿಹೊಳಿ ವಿರುಧ್ದ ದೂರು ಸಲ್ಲಿಸಿದೆ ಸತೀಶ ಜಾರಕಿಹೊಳಿ ಅವರು ಕಳೆದ ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಮತ್ತು ಎಪಿಎಂಸಿ ಚುನಾವಣೆಯಲ್ಲಿ ನಡೆಸಿದ ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ವೇಣುಗೋಪಾಲ ಅವರಿಗೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ
ಸತೀಶ ಜಾರಕಿಹೊಳಿ ಅವರು ಬಿಜೆಪಿ ಶಾಸಕ ಸಂಜಯ ಪಾಟೀಲ ಅವರ ಜೊತೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆಸಿದ ಕಾರ್ಯಕ್ರಮಗಳ ಪೋಟೋಗಳು ಹಾಗು ಪತ್ರಿಕೆಯಲ್ಲಿ ಸಂಜಯ ಪಾಟೀಲ ಅವರ ಜೊತೆ ಪ್ರಕಟವಾದ ಜಾಹಿರಾತುಗಳನ್ನು ಲಗ್ಗತ್ತಿಸಿ ಜಿಲ್ಲೆಯ ಕಾಂಗ್ರೆಸ್ ನಾಯಕರು ವೇಣುಗೋಪಾಲ ಅವರಿಗೆ ದೂರು ಸಲ್ಲಿಸಿರುವ ವಿಷಯ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಸುದ್ಧಿ ಮಾಡಿದೆ
ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲೆಯ ಕಾಂಗ್ರೆಸ್ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಏಕೊಕ್ಷೀಯ ನಿರ್ಧಾರ ಕೈಗೊಂಡು ಕಾಂಗ್ರೆಸ್ ನಾಯಕರನ್ನು ಶಾಸಕರನ್ನು ಮಾಜಿ ಶಾಸಕರನ್ನು ಕಡೆಗಣಿಸುತ್ತಿದ್ದಾರೆ ಎಂದು ಸತೀಶ ಜಾರಕಿಹೊಳಿ ಅವರ ಗುಂಪು ವೇಣುಗೋಪಾಲ ಅವರ ಎದುರು ದೂರಿದೆ ಎಂದು ಹೇಳಲಾಗಿದೆ
ಆದರೆ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರು ಜಿಲ್ಲೆಯ ಹಿರಿಯ ಕಾರ್ಯಕರ್ತರು ಮತ್ತು ಕಾಂಗ್ರೆಸ್ ನಾಯಕರು ರಮೇಶ ಜಾರಕಿಹೊಳಿ ಅವರು ಸಚಿವ ಆದಾಗಿನಿಂದ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದೆ ಅವರು ಸಾಮಾನ್ಯ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದು ಯಾವುದೇ ಕಾರಣಕ್ಕೂ ಅವರನ್ನು ಬದಲಾವಣೆ ಮಾಡಬಾರದು ಎಂದು ಜಿಲ್ಲೆಯ ಒಂದು ಗುಂಪು ವೇಣುಗೋಪಾಲ ಬಳಿ ರಮೇಶ ಜಾರಕಿಹೊಳಿ ಪರವಾಗಿ ಬ್ಯಾಟೀಂಗ್ ನಡೆಸಿದೆ ಎಂದು ತಿಳಿದು ಬಂದಿದೆ
ಒಟ್ಟಾರೆ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ವಲಯದಲ್ಲಿ ಪರಸ್ಪರ ಕಾಲು ಜಗ್ಗುವ ಕಸರತ್ತು ನಡೆದರೆ ಅತ್ತ ಬೆಂಗಳೂರಿನಲ್ಲಿ ಕಿತ್ತಾಟ ಶುರುವಾಗಿದೆ ವೇಣುಗೋಪಾಲ ಅವರ ಬೆಂಗಳೂರು ಭೇಟಿ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಯಾವ ರೀತಿಯ ಪರಿಣಾಮ ಬೀರಲಿದೆ ಎನ್ನುವದನ್ನು ಕಾದು ನೋಡಬೇಕಾಗಿದೆ