Breaking News
Home / Breaking News / ಎಂಎಲ್ಸಿ ಚುನಾವಣೆ,ಬೆಳಗಾವಿಯಲ್ಲಿ ಮತದಾನ ಆರಂಭ..

ಎಂಎಲ್ಸಿ ಚುನಾವಣೆ,ಬೆಳಗಾವಿಯಲ್ಲಿ ಮತದಾನ ಆರಂಭ..

ಬೆಳಗಾವಿ: ವಿಧಾನ ಪರಿಷತ್‌ನ ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದೆ.ತಮ್ಮ ಹಕ್ಕು ಚಲಾಯಿಸಲು ಇಲ್ಲಿನ ವಿಶ್ವೇಶ್ವರಯ್ಯ ನಗರದ ಮತಗಟ್ಟೆಗೆ ಬೆಳಿಗ್ಗೆಯೇಮತದಾರರು ಉತ್ಸಾಹದಿಂದ ಬಂದಿದ್ದಾರೆ.

ಕೋವಿಡ್-19 ಹಿನ್ನೆಲೆಯಲ್ಲಿ ಮತಗಟ್ಟೆಯಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ದೈಹಿಕ ಅಂತರ ಕಾಯ್ದುಕೊಂಡು ಮತದಾನ ಮಾಡಲು ಅನುಕೂಲವಾಗುವಂತೆ ಮಾರ್ಕಿಂಗ್ ಮಾಡಲಾಗಿದೆ.ಸೋಮವಾರ ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

ಬೆಳಗಾವಿಯಲ್ಲಿ 95, ಬಾಗಲಕೋಟೆಯಲ್ಲಿ 48, ವಿಜಯಪುರದಲ್ಲಿ 47 ಸೇರಿ 190 ಮತಗಟ್ಟೆಗಳನ್ನು ತೆರೆಯಲಾಗಿದೆ. ಶಿಕ್ಷಕರ ಕ್ಷೇತ್ರದಲ್ಲಿ 25,388 ಹಾಗೂ ಪದವೀಧರ ಕ್ಷೇತ್ರದಲ್ಲಿ 99,598 ಮತದಾರರಿದ್ದಾರೆ.

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *