ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಭಾನುವಾರ ನಡೆದ ಘರ್ಷಣೆಯಲ್ಲಿ ಓರ್ವ ಮೃತಪಟ್ಟಿದ್ದು. ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಇನ್ನು ಘರ್ಷಣೆಯಲ್ಲಿ 200ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.
ಕರ್ಫ್ಯೂ ನಡುವೆಯು ಬೀದಿಗಿಳಿದಿರುವ ಪ್ರತಿಭಟನಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ 18 ವರ್ಷದ ಇರ್ಫಾನ್ ಅಹ್ಮದ್ ಮಲ್ಲಿಕ್ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಕೂಡಲೇ ಎಸ್ಎಂಎಚ್ಎಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಇರ್ಫಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಪಡೆ ಹಾಗೂ ಪ್ರತಿಭಟನಕಾರರ ನಡುವಿ ಘರ್ಷಣೆಯಲ್ಲಿ ಇಲ್ಲಿಯವರೆಗೂ 16 ಮಂದಿ ಪ್ರತಿಭಟನಕಾರರು ಮೃತಪಟ್ಟಿದ್ದು, 96 ಭದ್ರತಾ ಪಡೆ ಯೋಧರು ಸೇರಿ 200ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.
ಮೃತ ಉಗ್ರ ಬುರ್ಹಾನ್ ವಾನಿಯ ಅಂತ್ಯಸಂಸ್ಕಾರ ಮುಗಿದ ಮೇಲೆ ಉದ್ರಿಕ್ತರ ಗುಂಪು ಪೊಲೀಸ್ ಠಾಣೆ ಹಾಗೂ ಬಿಜೆಪಿ ಕಚೇರಿಗಳ ಮೇಲೆ ದಾಳಿ ಮಾಡಿತ್ತು. ಈ ವೇಳೆ ಸಂಘರ್ಷದಲ್ಲಿ 12 ಮಂದಿ ಪ್ರತಿಭಟನಾಕಾರರು ಸಾವನ್ನಪ್ಪಿದ್ದು, 125ಕ್ಕೂ ಹೆಚ್ಚು ಜನ ಹಾಗೂ ಭದ್ರತಾ ಸಿಬ್ಬಂದಿಗೂ ಗಾಯಗಳಾಗಿದ್ದವು.
21 ವರ್ಷದ ಬುರ್ಹಾನ್ ಮುಜಾಫರ್ ವಾನಿ ಮತ್ತು ಆತನ ಇಬ್ಬರು ಸಹಚರರನ್ನು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಯೋಧರು ಹತ್ಯೆ ಮಾಡಿದ್ದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ