ಬೆಳಗಾವಿ-ಬೆಳಗಾವಿ ಜಿಲ್ಲೆಯ ಕಾಂಗ್ರೆಸ ನಾಯಕರ ಮನೆಗಳ ಮೇಲೆ ಐಟಿ ದಾಳಿ ನಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ದಾಳಿ ಯಾವ ಕಾರಣಕ್ಕೆ ನಡೆದಿದೆ ಅನ್ನೋದು ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ
ಬೆಳಗಾವಿ ಪಾಲಿಕೆಯಲ್ಲಿ ಮಾದ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಜಿಲ್ಲೆಯಲ್ಲಿ ಐಟಿ ದಾಳಿ ನಡೆದಿದೆ ಮಾದ್ಯಮಗಳಲ್ಲಿ ವರದಿ ಪ್ರಸಾರವಾದ ಬಗ್ಗೆ ಅಷ್ಟೇ ಮಾಹಿತಿ ಗೊತ್ತು ಆದರೆ ಯಾವ ಕಾರಣಕ್ಕಾಗಿ ಅನ್ನೋದು ನನಗೆ ಗೊತ್ತಿಲ್ಲ ಎಂದರು
ರಾಜ್ಯದಲ್ಲಿ ಕೆಲವು ಶಾಸಕರು ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದು ಸರ್ಕಾರ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ ಯಾವದೇ ಪಕ್ಷದ ಶಾಸಕ ದಬ್ಬಾಳಿಕೆ ನಡೆಸಿದ್ದಲ್ಲಿ ಅವರ ವಿರುದ್ದ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಸತೀಶ ಜಾರಕಿಹೊಳಿ ತಿಳಿಸಿದರು
ಬೆಳಗಾವಿ ಖಾನಾಪೂರ ರಸ್ತೆಯ ಅಗಲೀಕರಣ ಕಾಮಗಾರಿ ಭರದಿಂದ ಸಾಗಿದೆ ಈ ರಸ್ತೆಯಲ್ಲಿರುವ ಅಂಗಡೀಕಾರರು ನ್ಯಾಯಾಲಯದಿಂದ ತಡೆಯಾದ್ಞೆ ತಂದಿದ್ದು ಇದು ಇತ್ಯರ್ಥವಾದ ಬಳಿಕ ಉಳಿದ ಅಂಗಡಿಗಳನ್ನು ತೆರವು ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವದು ಎಂದು ಸತೀಶ ಜಾರಕಿಹೊಳಿ ತಿಳಿಸಿದರು
ಬೆಳಗಾವಿ ನಗರ ಸ್ಮಾರ್ಟ ಸಿಟಿ ಯೋಜನೆಯಲ್ಲಿ ಸಿಲೆಕ್ಟ ಆಗಿದೆ ಇದಕ್ಕೆ ಪೂರಕವಾಗಿ ಎಲ್ಲ ರೀತಿಯ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಸರ್ಕಾರ ಬೆಳಗಾವಿಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಸತೀಶ ಜಾರಕಿಹೊಳಿ ಹೇಳಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ