ಬೆಳಗಾವಿ
ಕೇಂದ್ರ ಮತ್ತು ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯ ಸುವರ್ಣಸೌಧದ ಮುಂದೆ ರೈತರು ಪ್ರತಿಭಟನೆ ನಡೆಸಿದರು. ರೈತ ಮುಖಂಡರಾದ ಚೂನಪ್ಪ ಪೂಜಾರಿ, ಜಯಶ್ರೀ ಗುರನ್ನವರ ನೇತೃತ್ವ ವಹಿಸಿದ್ದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೃಷಿ ನೀತಿ ಖಂಡಿಸಿ ರೈತರು ದೆಹಲಿ ಮತ್ತು ಬೆಂಗಳೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ನೂರಾರು ರೈತರು ಗುರುವಾರ ಸುವರ್ಣ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು..
ಈ ವೇಳೆ ರೈತ ಸಂಘದ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ರಾಜು ಪವಾರ್ ಮಾತನಾಡಿ, ಸರ್ಕಾರಗಳು ರೈತರ ಬದುಕಿನೊಂದಿಗೆ ಚೆಲ್ಲಾಟ ಆಡಬಾರದು. ರೈತರಿಗೆ ಮಾರಕವಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವವರೆಗೂ ಹೋರಾಟ ಮುಂದುವರಿಯುತ್ತದೆ ಎಂದರು.
ಈ ವೇಳೆ ಹಿರೇಹಟ್ಟಿಹೊಳಿಯ ರೈತ ಮಹಿಳೆ ಮಾತನಾಡಿ, ಪ್ರವಾಹದಲ್ಲಿ ಮನೆ ಕಳೆದುಕೊಂಡಿದ್ದೇವೆ. ಬೆಳೆ ನಾಶವಾಗಿದೆ. ಆದರೆ ರೈತರಿಗೆ ಏನೂ ಸಿಗುತ್ತಿಲ್ಲ. ಸರ್ಕಾರ ರೈತರನ್ನು ಕಡೆಗಣಿಸಿದೆ. ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಸುವರ್ಣ ವಿಧಾನಸೌಧದ ಸುತ್ತಲೂ ನಿಷೇಜ್ಞಾನೆ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ಸುವರ್ಣ ಸೌಧದ ಬಳಿ ಪೋಲಿಸರು ರೈತರನ್ನು ತಡೆದರು. ಸುವರ್ಣ ವಿಧಾನಸೌಧ ಸುತ್ತಲೂ ಬಿಗಿ ಪೆÇಲೀಸ್ ಬಂದೋಬಸ್ತ ವ್ಯವಸ್ಥೆಗೊಳಿಸಲಾಗಿದೆ. ರೈತ ಮುಖಂಡರಾದ ಚೂನಪ್ಪ ಪೂಜಾರಿ, ಜಯಶ್ರೀ ಗುರನ್ನವರ ನೇತೃತ್ವ ವಹಿಸಿದ್ದು, ರಸ್ತೆಯಲ್ಲೇ ರೈತರು ಪ್ರತಿಭಟನೆ ನಡೆಸಿದರು.