ರಸ್ತೆಯಲ್ಲೇ ಅಡುಗೆ, ರಸ್ತೆಯಲ್ಲೇ ಊಟ…!!!
ಬೆಳಗಾವಿ-/ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು, ಬೆಳಗಾವಿಯ ಸುವರ್ಣಸೌಧ ಎದುರು ಪ್ರತಿಭಟನೆ ನಡೆಸಿದ್ದಾರೆ.
ಇಂದು ಬೆಳಿಗ್ಗೆಯಿಂದಲೇ ರೈತರ ಧರಣಿ ಮುಂದುವರೆದಿದೆ. ರೈತರು, ರಸ್ತೆಯಲ್ಲಿ ಅಡುಗೆ ಮಾಡಿಕೊಂಡು, ಎನ್‌ಹೆಚ್4 ಪಕ್ಕದ ಸರ್ವೀಸ್ ರಸ್ತೆಯಲ್ಲಿಯೇ ಕುಳಿತು ಊಟ ಮಾಡುವ ಮೂಲಕ ಧರಣಿ ನಿರತ ರೈತರು ನ್ಯಾಷನಲ್ ಹೈವೇ ಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.
ಊಟ ಮಾಡಿ ಮತ್ತೆ ಪ್ರತಿಭಟನೆ ಮುಂದುವರೆಸಿರುವ ರೈತರ ಧರಣಿಯಲ್ಲಿ ರಾಜ್ಯ ರೈತ ಸಂಘ, ಹಸಿರು ಸೇನೆ ಸೇರಿದಂತೆ ವಿವಿಧ ಸಂಘಟನೆಗಳು ಪಾಲ್ಗೊಂಡಿವೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ