Breaking News

ಕಾಂಗ್ರೆಸ್ ಸುದ್ಧಿಗೋಷ್ಠಿಯಲ್ಲಿ ಖುರ್ಚಿ ಕಾಳಗ …ಉಸ್ತುವಾರಿ ಮೋಹನ್ ಗೆ ಸೇಠ ಆವಾಜ್…!!!

ಕುರ್ಚಿ ಗಾಗಿ ಕಿತ್ತಾಟ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರು ಕುರ್ಚಿಗಾಗಿ ಕಿತ್ತಾಡಿದ ಪ್ರಸಂಗ ನಡೆಯಿತು. ಕಾಂಗ್ರೆಸ್ ನಗರ ಜಿಲ್ಲಾ ಕಮೀಟಿ ಅಧ್ಯಕ್ಷ ರಾಜು ಸೇಠ್ ಅವರಿಗೆ ಯಾವುದೇ ಆಸನ ವ್ಯವಸ್ಥೆ ಮಾಡದಿರುವುದು ಅವರ ಸಹೋದರ ಮಾಜಿ ಶಾಸಕ ಫಿರೋಜ್ ಸೇಠ್ ಅವರ ಆಕ್ರೋಶಕ್ಕೆ ಕಾರಣವಾಯಿತು. ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಸಿಕ್ಕಿತ್ತು.ಪಿ.ಸಿ. ಮೋಹನ ಅವರನ್ನು ಸೇಠ್ ಅವರು ಬಹಿರಂಗವಾಗಿಯೇ ತರಾಟೆಗೆ ತೆಗೆದು ಕೊಂಡರು. ಶಿಷ್ಟಾಚಾರ ಪಾಲನೆ ಮಾಡುವಂತೆ ಆಗ್ರಹಿಸಿದರು. ಬಳಿಕ ರಾಜು ಸೇಠ್ ಅವರಿಗೆ ಆಸನದ ವ್ಯವಸ್ಥೆ ಮಾಡಲಾಯಿತು.

ಇದಾದ ಬಳಿಕ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅದ್ಯಕ್ಷ ದಿನೇಶ ಗುಂಡೂರಾವ್ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಜನರನ್ನು ಪ್ರಚೋದನೆಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಗುಂಡೂರಾವ್ ಆರೋಪಿಸಿದರು ಕಳೆದ ನಾಲ್ಕು ವರ್ಷದಲ್ಲಿ ದೇಶಕ್ಕೆ ಮೋದಿ ಕೊಡುಗೆ ಏನು..
ಬಿಜೆಪಿ ಕಾರ್ಯಕ್ರಮವೇ ಜನರ ದಿಕ್ಕು ತಪ್ಪಿಸುವುದು ಆಗಿದೆ . ಬಿಜೆಪಿ ನಾಯಕರು, ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಶಾಸಕರಿಗೆ ಹಣದ ಅಮೀಷ, ಮಂತ್ರಿಗಿರಿ ಆಮೀಷ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಸಮ್ಮೀಶ್ರ ಸರ್ಕಾರದ ಅವಧಿ ಮುಗಿತು ಎಂದು ಬಿಜೆಪಿ ನಾಯಕರ ಹೇಳಿಕೆ ವಿಚಾರ.
ನಮ್ಮ ಶಾಸಕರಿಗೆ ಹಣ, ಅಧಿಕಾರದ ಆಮೀಷ ಒಡುತ್ತಿದ್ದಾರೆ. ನಾಲ್ಕು ವರ್ಷದಲ್ಲಿ ರಾಜ್ಯಕ್ಕೆ ನ್ಯಾಯಾ ಕೊಡಿಸುವಲ್ಲಿ ಬಿಜೆಪಿ ವಿಫಲವಾಗಿದೆ.
ಆದರೇ ಈಗ ಅಧಿಕಾರಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಸಂಪುಟ ವಿಸ್ತರಣೆ ಸಂದರ್ಭದಲ್ಲಿ
ಆರು ಮಂತ್ರಿ ಸ್ಥಾನಗಳ ಪೈಕಿ ಹೆಚ್ಚು ಸ್ಥಾನಗಳನ್ನು ಉತ್ತರ ಕರ್ನಾಟಕಕ್ಕೆ ನೀಡುವುದಾಗಿ ಹೇಳಿದರು.

ಸಾಲ ಮನ್ನಾ ವಿಚಾರದಲ್ಲಿ ಕಾಂಗ್ರೆಸ್ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬ ವಿಚಾರ‌.
ಯಾವುದೇ ತೀರ್ಮಾನ ಆದ್ರು ಇಬ್ಬರ ಪಾತ್ರ ಇರುತ್ತದೆ.ಸಾಲ ಮನ್ನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲವಿದೆ.ಒಂದೇ ಪಕ್ಷದ ಸರ್ಕಾರ ಇದ್ದಾಗ ಸಮನ್ವಯತೆ ಇರಲ್ಲ..ಆದರೇ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಣ್ಣಪುಟ್ಟ ಗೊಂದಲ ಸಹಜ.
ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕ ಹೆಚ್ಚಿನ ಆದ್ಯತೆ ನೀಡಲಾಗುವುದು‌.
ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆ.
ಕಾಂಗ್ರೆಸ್ ಪಕ್ಷ ಎಲ್ಲಾ ಕಡೆಗಳಲ್ಲಿ ಸ್ಪರ್ಧೆ ಮಾಡಲಾಗಿದೆ.ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. ಕಾಂಗ್ರೆಸ್ ಅಭಿವೃದ್ಧಿ ಮಾಡಲಿಲ್ಲ ಅಂತ ನಮ್ಮನ್ನ ತಿರಸ್ಕಾರ ಮಾಡಿಲ್ಲ‌.
ಚುನಾವಣೆಯಲ್ಲಿ ಸೋಲಿಗೆ ಬೇರೆ ಬೇರೆ ಕಾರಣವಿದೆ. ಮುಂದಿನ ಲೋಕಸಭಾ ಚುನಾವಣೆಯ ಬೆಳಗಾವಿ, ಚಿಕ್ಕೋಡಿ ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದರು.

Check Also

ರಮೇಶ್ ಕತ್ತಿ, ರಾಜೀನಾಮೆ ಪತ್ರದಲ್ಲಿ ಏನಿದೆ ಗೊತ್ತಾ…?

  ಮಾನ್ಯ ಮುಖ್ಯ ಕಾರ್ಯನಿರ್ವಾಹಕರು ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ ವಿಷಯ- ನನ್ನ ಅಧ್ಯಕ್ಷ ಸ್ಥಾನಕ್ಕೆ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.