ಬೆಳಗಾವಿ-ಸಮರ್ಪಕ ನೆರೆ ಪರಿಹಾರ ನೀಡುವಂತೆ ಆಗ್ರಹಿಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ನೆರೆ ಸಂತ್ರಸ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು
*ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಆಗ್ರಹಿಸಿ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಧರಣಿ ನಡೆಸಲಾಯಿತು ಧರಣಿಯಲ್ಲಿ ನೂರಾರು ಜನ ಸಂತ್ರಸ್ತರು ಪಾಲ್ಗೊಂಡಿದ್ದರು ಈ ಸಂಧರ್ಭದಲ್ಲಿ ಮಾತನಾಡಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ
ಎಲ್ಲ ಸಂತ್ರಸ್ತರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗ್ತೀನಿ ,ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡೋಣ ಇಲ್ಲ ಅಂದ್ರೆ ಇಲ್ಲೇ ಟೆಂಟ್ ಹಾಕಿ, ಅಡುಗೆ ಮಾಡಿಕೊಂಡು ಪ್ರತಿಭಟನೆ ಮಾಡೋಣ ಬಿಜೆಪಿ ಸರ್ಕಾರದ ಕಣ್ಣು ತೆರಸೋಣ, ಕಿವಿ ಕೇಳೋ ಹಾಗೇ ಮಾಡೋಣ ಎಂದು ಲಕ್ಷ್ಮೀ ಹೆಬ್ಬಾಳಕರ ಹೇಳಿದರು
ಸೋಮವಾರ ಅಧಿವೇಶನದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಧ್ವನಿಯಾಗಿ ಪ್ರತಿಧ್ವನಿಸುತ್ತೀನಿ ನಾಡಿದ್ದು ಅಧಿವೇಶನದಲ್ಲಿ ಸದನದ ಬಾವಿಗಿಳಿದು ಪ್ರತಿಭಟನೆ ಮಾಡ್ತೀನಿ ಎಂದು ಬಿಜೆಪಿ ಸರ್ಕಾರದ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದರು
ಸಂತ್ರಸ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ