ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಕಚೇರಿಗಳ ದಾಳಿ ನಡೆದ ಬಗ್ಗೆ ಮಾದ್ಯಮಗಳ ಮೂಲಕ ಗೊತ್ತಾಗಿದೆ ಐಟಿ ಇಲಾಖೆ ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವದರಿಂದ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವದಿಲ್ಲ ಎಂದು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ಹೇಳಿದರು
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗೃಹ ಸಚಿವ ಜಿ. ಪರಮೇಶ್ವರ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು
ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ಅತೀ ಹೆಚ್ಚು ಐಟಿ ರೇಡ್ ನಡೆದಿದೆ. ಇದನ್ನು ಯಾವ ರೀತಿಯಾದ್ರು ಅರ್ಥೈಸಿಬಹುದು. ಐಟಿ ಇಲಾಖೆ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರೋದರಿಂದ ದಾಳಿ ಬಗ್ಗೆ ನಮಗೆ ಹೆಚ್ಚಿಗೆ ಗೊತ್ತಾಗಲ್ಲ.
ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆಯನ್ನು ನಾನು ನೀಡಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಬೆಳಗಾವಿಯಲ್ಲಿ ಹೇಳಿದ್ರು. ಬಿಜೆಪಿ ಮುಖಂಡ ವಿ.ಸೋಮಣ್ಣ ಕಾಂಗ್ರೇಸ್ ಸೇರ್ಪಡೆ ವದಂತಿ ವಿಚಾರವಾಗಿ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು
ಇದು ಕೇವಲ ವದಂತಿ ಈಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಯಾರು ನಮ್ಮನ್ನು ಸಂಪರ್ಕಿಸಿಲ್ಲ.ಎಂದು ಪೆಮೇಶ್ವರ ಸ್ಪಷ್ಟಪಡಿಸಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ