Breaking News

ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಪತ್ತೆಯಾದ ಲಕ್ಷ ಲಕ್ಷ ಕ್ಯಾಶ್!!

ಬೆಳಗಾವಿ- ಬೆಳಗಾವಿಯ ಖಡಕ್ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಚುನಾವಣೆ ಘೋಷಣೆಯಾಗುವ ಮುನ್ನವೇ ಹಲವಾರು ರೀತಿಯ ದಿಟ್ಟ ಕ್ರಮಗಳನ್ನು ಕೈಗೊಂಡು ಚುನಾವಣಾ ಆಕ್ರಮಗಳಿಗೆ ಬ್ರೇಕ್ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಯಾರೂ ಗಿಫ್ಟ್ ಹಂಚಬಾರ್ದು,ಬಾಡೂಟಕ್ಕೆ ಅವಕಾಶ ಇಲ್ಲ ಎಂದು ಆದೇಶ ಹೊರಡಿಸಿದ್ದ ಜಿಲ್ಲಾಧಿಕಾರಿಗಳು ಸಂತಿ ಬಸ್ತವಾಡ ಗ್ರಾಮದಲ್ಲಿ ಬಾಡೂಟದ ವ್ಯವಸ್ಥೆ ಮಾಡಿದ ರಮೇಶ್ ಜಾರಕಿಹೊಳಿ ಅವರ ಇಬ್ಬರು ಆಪ್ತರ ಮೇಲೆ ಕೇಸ್ ಹಾಕಿದ ಬೆನ್ನಲ್ಲಿಯೇ ಈಗ ಗೋಕಾಕ್ ತಾಲ್ಲೂಕಿನ ಚೆಕ್ ಪೋಸ್ಟ್ ನಲ್ಲಿ ಲಕ್ಷ ಲಕ್ಷ ರೂ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಗೋಕಾಕ್ ವಿಧಾನಸಭಾ ಕ್ಷೇತ್ರದ ಯದ್ದಲಗುಡ್ಡ್ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ ಮೂರು ಲಕ್ಷ ಐವತ್ತು ಸಾವಿರ ರೂಗಳನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ.

ಯದ್ದಲಗುಡ್ಡ್ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ಮಾಡುವಾಗ, ಲಕ್ಷ್ಮಣ ಹನುಮಂತ ಗಡಾದ ಅವರ ವಾಹನದಲ್ಲಿ ದಾಖಲೆ ಇಲ್ಲದ 3.5 ಲಕ್ಷ ರೂ ಪತ್ತೆಯಾಗಿದ್ದು,ಗೋಕಾಕ್ ತಹಶೀಲ್ದಾರ್ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Check Also

ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಯುವಕನ ಆತ್ಮಹತ್ಯೆ

ಬೆಳಗಾವಿ-70 ಸಾವಿರ ಬೆಲೆಯ,ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಷ್ಟೊಂದು ದುಬಾರಿ ಐಪೋನ್ …

Leave a Reply

Your email address will not be published. Required fields are marked *