ಬೆಳಗಾವಿ-ಮುಂಬೈ ನಮ್ಮದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ ಬೆನ್ನಲ್ಲಿಯೇ ಡಿಸಿಎಂ ಗೋವೀಂದ್ ಕಾರಜೋಳ ಅವರು ಶಿವಾಜಿ ಮೂಲ ಕನ್ನಡ ಎಂದು ಹೇಳಿಕೆ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ.
ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದು ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕನ್ನಡ, ಮಹಾರಾಷ್ಟ್ರದ ಲ್ಲಿ ಉದ್ಧವ್ ಠಾಕ್ರೆ ನೇತೃತ್ವದ್ದು ಸಮ್ಮಿಶ್ರ ಸರ್ಕಾರ, ಕಾಂಗ್ರೆಸ್ ಪಕ್ಷದವರು ಯಾವಾಗ ಕಿತ್ತಾಕ್ತಾರೆ ಎಂಬ ಭಯ ಉದ್ಧವ್ ಠಾಕ್ರೆಗಿದೆ, ಖುರ್ಚಿ ಉಳಿಸಿಕೊಳ್ಳಲು ಜನರ ಗಮನ ಬೇರೆಡೆ ಸೆಳೆಯುತ್ತಿದ್ದಾರೆ, ಉದ್ಧವ್ ಠಾಕ್ರೆ ಇತಿಹಾಸ ಓದಿಲ್ಲ ಎಂದು ತಿಳಿದುಕೊಂಡಿದ್ದೇನೆ, ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕನ್ನಡ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಶಿವಾಜಿ ಮಹಾರಾಜರ ಮೂಲಪುರುಷ ಬೆಳ್ಳಿಯಪ್ಪ ಗದಗ ಜಿಲ್ಲೆಯ ಸೊರಟೂರಿನವರು, ಬರ ಬಿದ್ದ ಸಂದರ್ಭದಲ್ಲಿ ಮಹಾರಾಷ್ಟ್ರಕ್ಕೆ ಬೆಳ್ಳಿಯಪ್ಪ ಗುಳೆ ಹೋಗ್ತಾರೆ, ಗುಳೆ ಹೋದ ಬೆಳ್ಳಿಯಪ್ಪರವರು ಮಹಾರಾಷ್ಟ್ರಕ್ಕೆ ಹೋಗಿ ನೆಲೆಸುತ್ತಾರೆ, ಅವರ ನಾಲ್ಕನೇ ತಲೆಮಾರಿಗೆ ಛತ್ರಪತಿ ಶಿವಾಜಿ ಮಹಾರಾಜರು ಬರ್ತಾರೆ, ಛತ್ರಪತಿ ಶಿವಾಜಿ ಮಹಾರಾಜರ ಮೂಲ ಕನ್ನಡದ ನೆಲ, ಇದನ್ನು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅರ್ಥ ಮಾಡಿಕೊಳ್ಳಬೇಕು ಎಂದರು.
ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರು ಅಣ್ತಮ್ಮ ಹಾಗೇ ಇದ್ದಾರೆ, ಕರ್ನಾಟಕದಲ್ಲಿ ಭಾಷಾ ಸಮಸ್ಯೆ ಇಲ್ಲ,ಉದ್ಧವ್ ಠಾಕ್ರೆ ಖರ್ಚಿಗಾಗಿ ಕುಲಗೇಡಿಸುವ ಕೆಲಸ ಮಾಡಬೇಡಿ, ಎಂದು ಗೋವೀಂದ್ ಕಾರಜೋಳ ಹೇಳಿದ್ರು.
ಮಹದಾಯಿ ವಿಚಾರದಲ್ಲಿ ಪಕ್ಷದ ಮಾತು ಕೇಳಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿಕೆ ವಿಚಾರ,ಯಾರೂ ಯಾರ ಮಾತು ಕೇಳಬೇಕಾಗಿಲ್ಲ, ನಾವು ಯಾರ ಮಾತು ಕೇಳಬೇಕಾಗಿಲ್ಲ,ನೆಲ, ಜಲ ಪ್ರಶ್ನೆ ಬಂದಾಗ ನಾವು ನಮ್ಮ ನೆಲ ಜಲ ಪರವಾಗಿ ಇರ್ತೇವೆ,ಸರ್ಕಾರ ಅದನ್ನು ನಿಭಾಯಿಸುತ್ತದೆ ಎಂದ ಗೋವಿಂದ ಕಾರಜೋಳ ಹೇಳಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ