ಬೆಳಗಾವಿ- ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಡಪದ ಸಮಾಜ ಹಿಂದುಳಿದಿದ್ದು ಈ ಸಮಾಜವನ್ನು ಪ್ರವರ್ಗ 1 ಕ್ಕೆ ಸೇರಿಸುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ನೂರಾರು ಜನ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು
ಚನ್ನಮ್ಮ ವೃತ್ತದಿಂದ ಪ್ರತಿಭಟನಾ ರ್ಯಾಲಿಯ ಮೂಲಕ ಜಿಲ್ಲಾಧಿಕಾರಿ ಕಚೆರಿಗೆ ಆಗಮಿಸಿದ ಪ್ರತಿಭಟನಾಕಾರರು ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಕಡ್ಲಿಗರ ಹುಣ್ಣಿಮೆ ದಿನದಂದು ಆಚರಿಸಬೇಕು ತಂಗಡಗಿ ಮಠಕ್ಕೆ ಸರ್ಕಾರ ಎರಡು ಕೋಟಿ ಅನುದಾನ ಕೊಡಬೇಕು ಎಂದು ಒತ್ತಾಯಿಸಿದರು
ಸರ್ಕಾರ ಹಡಪದ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎನ್ನುವ ಬೇಡಿಕೆ ಸೇರಿದಂತೆ ಹತ್ತು ಹಲವು ಬೇಡಿಕೆಗಳನ್ನುಈಡೇರಿಸುವಂತೆ ಒತ್ರಾಯ ಮಾಡಲಾಯಿತು
ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳುಅಣ್ಣಾರಾವ ನರಬೋಳ,ಎಚ್ ಡಿ ವೈದ್ಯಮಹಾಂತೇಶ ಹಂಪಣ್ಣವರ,ಬಸವರಾಜ ಹಡಪದ,ಭರತೇಶ ನಿಡಸೋಸಿ ಮೊದಲಾದವರು ಉಪಸ್ಥಿತರಿದ್ದರು
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					